ಶಿಕ್ಷಣ ಕ್ಷೇತ್ರಕ್ಕೆ ಮಠಗಳ ಕೊಡುಗೆ ಅಪಾರ: ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಮೋಹನ್ ಕುಮಾರ್

| Published : Jan 17 2024, 01:50 AM IST

ಶಿಕ್ಷಣ ಕ್ಷೇತ್ರಕ್ಕೆ ಮಠಗಳ ಕೊಡುಗೆ ಅಪಾರ: ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಮೋಹನ್ ಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ಇತ್ತೀಚೆಗೆ ಶಿಕ್ಷಣ ಕ್ಷೇತ್ರಕ್ಕೆ ಮಠಗಳ ಕೊಡುಗೆ ಅಪಾರವಾದುದು ಎಂದು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಮೋಹನ್ ಕುಮಾರ್ ಹೇಳಿದರು. ಹಾಸನದ ಅರಸೀಕೆರೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಸವೋತ್ಸವ ಸಿರಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಅರಸೀಕೆರೆ

ಮಕ್ಕಳಿಗೆ ವಿದ್ಯೆಯ ಜತೆಯಲ್ಲಿ ಮಾನವೀಯ ಮೌಲ್ಯಗಳು ಹಾಗೂ ಪರಿಸರ ಕಾಳಜಿ, ಸ್ವಚ್ಛತೆ, ಗುರು ಹಿರಿಯರಿಗೆ ಗೌರವ ಕೊಡುವ ಬಗ್ಗೆ ಮತ್ತು ಮಕ್ಕಳು ಶಾಲೆಯಲ್ಲಿ ಯಾವ ಯಾವ ಚಟುವಟಿಕೆಗಳಲ್ಲಿ ಆಸಕ್ತಿ ಇರುತ್ತದೆ ಎಂಬುದನ್ನು ಪೋಷಕರು ಮತ್ತು ಶಿಕ್ಷಕರು ಗಮನಿಸಿ ಆ ನಿಟ್ಟಿನಲ್ಲಿ ಪ್ರೋತ್ಸಾಹಿಸಬೇಕು. ಇತ್ತೀಚೆಗೆ ಶಿಕ್ಷಣ ಕ್ಷೇತ್ರಕ್ಕೆ ಮಠಗಳ ಕೊಡುಗೆ ಅಪಾರವಾದುದು ಎಂದು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಮೋಹನ್ ಕುಮಾರ್ ಹೇಳಿದರು.

ಮಾಡಾಳು ಗ್ರಾಮದ ಶ್ರೀ ಬಸವ ಚೇತನ ವಿದ್ಯಾಸಂಸ್ಥೆಯ ಬಸವೇಶ್ವರ ಆಂಗ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ೨೦೨೪ ರ ಬಸವೋತ್ಸವ ಸಿರಿ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಮಕ್ಕಳ ಶಿಕ್ಷಣ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತದೆ. ಇವುಗಳನ್ನು ಸದ್ಬಳಕೆ ಮಾಡಿಕೊಂಡು ಮಕ್ಕಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ನಿರಂಜನ ಪ್ರಣವಸ್ವರೂಪಿ ಶ್ರೀ ರುದ್ರಮುನಿ ಮಹಾಸ್ವಾಮಿ ಮಾತನಾಡಿ, ಸಂಸ್ಕಾರದ ಜತೆಗೆ ಶಿಕ್ಷಣದ ಅವಶ್ಯಕತೆ ಇರಬೇಕು. ಪೋಷಕರು ಮಕ್ಕಳಿಗೆ ಪ್ರತಿಯೊಂದು ವಿಷಯದಲ್ಲಿ ಮಾರ್ಗದರ್ಶನ ಮಾಡುತ್ತಿರಬೇಕು. ಶಾಲೆಯಲ್ಲಿ ವ್ಯಾಸಂಗ ಮುಗಿಸಿ ಮನೆಗೆ ಬಂದ ಮಕ್ಕಳನ್ನು ಪ್ರತಿದಿನ ಅವರ ಚಲನ ವಲನ ಗಮನಿಸಬೇಕು. ಶ್ರೀ ಮಠವು ಧರ್ಮಾಚರಣೆಯೊಂದಿಗೆ ಮಕ್ಕಳಿಗೆ ಉತ್ತಮವಾದ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುತ್ತ ಬಂದಿರುತ್ತದೆ ಎಂದರು.

ಮಕ್ಕಳಿಂದ ಸಾಂಸ್ಕೃತಿಕ ವ್ಯಭವ ಸಿರಿ ಕಾರ್ಯಕ್ರಮವು ಎಲ್ಲಾ ಪೋಷಕರ ಪ್ರಶಂಸೆಯ ಮಾತುಗಳಿಗೆ ಸಾಕ್ಷಿಯಾಯಿತು. ಕ್ಷೇತ್ರ ಸಮನ್ವಯಾಧಿಕಾರಿ ಶಂಕರ್, ಕಚೇರಿಯ ಶಿಕ್ಷಣ ಸಂಯೋಜಕರಾದ ಬಿ.ಯೋಗೀಶಪ್ಪ, ಬಿ.ಎಸ್ ಗಿರೀಶ್, ಡಿ.ಎಂ ಕುರ್ಕೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಜಿ.ಜಯಣ್ಣ ಹಾಗೂ ತಾಲ್ಲೂಕು ತರಳಬಾಳು ನೌಕರ ಸಂಘದ ಅಧ್ಯಕ್ಷ ಡಿ.ಪಿ ಮೃತ್ಯುಂಜಯ, ತಾಲೂಕು ಸರ್ಕಾರಿ ನೌಕರ ಸಂಘದ ನಿರ್ದೇಶಕ ಓಂಕಾರಮೂರ್ತಿ, ಶಾಲಾ ಮುಖ್ಯೋಪಾದ್ಯಾಯ ಸತೀಶ್, ಶಿಕ್ಷಕವರ್ಗ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಮಾಡಾಳು ಗ್ರಾಮದ ಶ್ರೀ ಬಸವ ಚೇತನ ವಿದ್ಯಾಸಂಸ್ಥೆಯ ಬಸವೇಶ್ವರ ಆಂಗ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ೨೦೨೪ ರ ಬಸವೋತ್ಸವ ಸಿರಿ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಮೋಹನ್ ಕುಮಾರ್ ಮಾತನಾಡಿದರು.