ಚನ್ನಗಿರಿ ಅಭಿವೃದ್ಧಿಗೆ ಪುರಸಭೆ ಸದಸ್ಯರ ಸಹಕಾರ ಮುಖ್ಯ

| Published : Oct 10 2024, 02:23 AM IST

ಚನ್ನಗಿರಿ ಅಭಿವೃದ್ಧಿಗೆ ಪುರಸಭೆ ಸದಸ್ಯರ ಸಹಕಾರ ಮುಖ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಈ ಹಿಂದೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ವಡ್ನಾಳ್ ರಾಜಣ್ಣ ಅವರ ಕನಸಿನ ಕೂಸಾಗಿದ್ದ ಸುಸಜ್ಜಿತ ಪುರಸಭೆ ನೂತನ ಕಟ್ಟಡ ಅಧಿಕೃತವಾಗಿ ಪ್ರಾರಂಭಗೊಳ್ಳುತ್ತಿದೆ. ಪಟ್ಟಣದ ಅಭಿವೃದ್ಧಿಗೆ ಸರ್ವ ಸದಸ್ಯರ ಸಹಕಾರ ಮುಖ್ಯವಾಗಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.

- ಚನ್ನಗಿರಿಯಲ್ಲಿ ಪುರಸಭೆ ನೂತನ ಕಟ್ಟಡದ ಉದ್ಘಾಟಿಸಿ ಶಾಸಕ ಬಸವರಾಜು- - - ಕನ್ನಡಪ್ರಭ ವಾರ್ತೆ ಚನ್ನಗಿರಿ

ಈ ಹಿಂದೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ವಡ್ನಾಳ್ ರಾಜಣ್ಣ ಅವರ ಕನಸಿನ ಕೂಸಾಗಿದ್ದ ಸುಸಜ್ಜಿತ ಪುರಸಭೆ ನೂತನ ಕಟ್ಟಡ ಅಧಿಕೃತವಾಗಿ ಪ್ರಾರಂಭಗೊಳ್ಳುತ್ತಿದೆ. ಪಟ್ಟಣದ ಅಭಿವೃದ್ಧಿಗೆ ಸರ್ವ ಸದಸ್ಯರ ಸಹಕಾರ ಮುಖ್ಯವಾಗಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.

ಬುಧುವಾರ ಪುರಸಭೆ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, 2013ರಿಂದ 18ರವರೆಗೆ ಶಾಸಕರಾಗಿದ್ದ ವಡ್ನಾಳ್ ರಾಜಣ್ಣ ಅವರು ಸುಮಾರು ₹5 ಕೋಟಿ ಅನುದಾನ ತಂದು ಕಟ್ಟಡ ನಿರ್ಮಾಣದ ಭೂಮಿಪೂಜೆ ನೆರವೇರಿಸಿದ್ದರು. ಈ ಕಚೇರಿಯ ಪಿಠೋಪಕರಣಗಳಿಗಾಗಿ ನಗರೋತ್ಥಾನ ಯೋಜನೆಯಲ್ಲಿ ₹15 ಲಕ್ಷವನ್ನು ಕಾಯ್ದಿರಿಸಲಾಗಿದೆ. ಮುಂದಿನ ಒಂದು ತಿಂಗಳ ಒಳಗಾಗಿ ಕಚೇರಿಗೆ ಬೇಕಾದ ಎಲ್ಲ ರೀತಿಯ ಮೂಲ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದರು.

ಚನ್ನಗಿರಿ ಪಟ್ಟಣ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಪಟ್ಟಣದ ನಾಗರೀಕರಿಗೆ ಪುರಸಭೆ ವತಿಯಿಂದ ದೊರೆಯಬಹುದಾದ ಸೌಲಭ್ಯಗಳನ್ನು ಕೊಡಿಸಲು ಅಧಿಕಾರಿಗಳು ಮುಂದಾಗಬೇಕು ಎಂದರು.

ಚುನಾವಣೆ ಸಂದರ್ಭದಲ್ಲಿ ರಾಜಕಾರಣ ಮಾಡೋಣ. ಚುನಾವಣೆ ಮುಗಿದ ನಂತರ ಪಾರ್ಟಿ, ಪಕ್ಷಗಳೆಂಬ ಭಿನ್ನತೆಯನ್ನು ಮರೆತು ಪಟ್ಟಣದ ಅಭಿವೃದ್ಧಿಗೆ ಶ್ರಮಿಸೋಣ. ಪಟ್ಟಣದ ಅಭಿವೃದ್ಧಿಗೆ ಪುರಸಭೆಯ ಎಲ್ಲ ಸದಸ್ಯರ ಸಹಕಾರ ಮುಖ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ, ಹಿರಿಯ ಆರೋಗ್ಯ ನಿರೀಕ್ಷಕ ಶಿವರುದ್ರಪ್ಪ, ಸಮುದಾಯ ಸಂಘಟನಾಧಿಕಾರಿ ಬಾಲಾಜಿ ರಾವ್, ಸದಸ್ಯರಾದ ಪಟ್ಲಿ ನಾಗರಾಜ್, ಪಾರಿ ಪರಮೇಶ್, ಮೊಟ್ಟೆ ಚಿಕ್ಕಣ್ಣ, ಕಮಲ ಹರೀಶ್, ಸವಿತ, ಸರ್ವಮಂಗಳ, ಲತಾ, ಅಮೀರ್ ಅಹಮದ್, ಸೈಯದ್ ಗೌಸ್ ಪೀರ್, ಶ್ರೀಕಾಂತ್, ಸಿ.ಆರ್.ಅಣ್ಣಯ್ಯ, ನಂಜುಂಡಪ್ಪ, ಜರಿನಾಭಿ, ಗಾದ್ರಿರಾಜು, ಲಕ್ಷ್ಮಿದೇವಮ್ಮ, ಜಿತೇಂದ್ರ ಕಂಚುಗಾರ್, ಸಿ.ಶಶಿಕುಮಾರ್, ಕಚೇರಿ ಸಿಬ್ಬಂದಿ, ಸಾರ್ವಜನಿಕರು ಹಾಜರಿದ್ದರು.

- - - -9ಕೆಸಿಎನ್‌ಜಿ1:

ಪುರಸಭೆ ನೂತನ ಕಟ್ಟಡ ಉದ್ಘಾಟನೆಯನ್ನು ಶಾಸಕ ಬಸವರಾಜು ವಿ. ಶಿವಗಂಗಾ ನೆರವೇರಿಸಿದರು.