ಕ್ಷಯ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆಯ ಸಹಕಾರ ಅಗತ್ಯ

| Published : Oct 17 2024, 12:54 AM IST / Updated: Oct 17 2024, 12:55 AM IST

ಕ್ಷಯ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆಯ ಸಹಕಾರ ಅಗತ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಸಿರಿಗೆರೆ: ೨೦೨೫ ರ ವೇಳೆಗೆ ಕ್ಷಯ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಗುರಿ ಸರ್ಕಾರಕ್ಕೆ ಇದೆ. ಇದರಲ್ಲಿ ಯುವ ಜನತೆಯ ಸಹಕಾರ ಅತ್ಯಗತ್ಯವಾಗಿದೆ ಎಂದು ಹಿರಿಯ ಆರೋಗ್ಯಾಧಿಕಾರಿ ಆಂಜನೇಯ ಹೇಳಿದರು.

ಸಿರಿಗೆರೆ: ೨೦೨೫ ರ ವೇಳೆಗೆ ಕ್ಷಯ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಗುರಿ ಸರ್ಕಾರಕ್ಕೆ ಇದೆ. ಇದರಲ್ಲಿ ಯುವ ಜನತೆಯ ಸಹಕಾರ ಅತ್ಯಗತ್ಯವಾಗಿದೆ ಎಂದು ಹಿರಿಯ ಆರೋಗ್ಯಾಧಿಕಾರಿ ಆಂಜನೇಯ ಹೇಳಿದರು.

ಭರಮಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಎರಡು ವಾರಕ್ಕಿಂತ ಹೆಚ್ಚು ಕೆಮ್ಮುವುದು, ರಾತ್ರಿ ವೇಳೆ ಜ್ವರ ಬರುವುದು, ಬೆವರುವುದು, ಹಸಿವಾಗದಿರುವುದು, ತೂಕದಲ್ಲಿ ಇಳಿಕೆ, ಕಫದಲ್ಲಿ ರಕ್ತ ಬೀಳುವುದು ಇವು ಕ್ಷಯರೋಗದ ಸಾಮಾನ್ಯ ಲಕ್ಷಣಗಳಾಗಿದ್ದು, ಇಂತಹ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.

ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಸಂಪೂರ್ಣ ಉಚಿತವಾಗಿರುತ್ತದೆ. ನಿಗದಿತ ಅವಧಿಯ ಚಿಕಿತ್ಸೆಯಿಂದ ಕ್ಷಯ ರೋಗವನ್ನು ಗುಣಪಡಿಸಬಹುದು. ಚಿಕಿತ್ಸೆ ಪೂರ್ಣಗೊಳ್ಳುವವರೆಗೆ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರಕ್ಕಾಗಿ ಮಾಸಿಕ 500 ರು. ಗಳ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಾಂಶುಪಾಲರಾದ ಡಾ.ಎಸ್.‌ಶಶಿಕಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಯಾದ ಲೋಕೇಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು . ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಎನ್‌ಎಸ್‌ಎಸ್ ಸ್ವಯಂ ಸೇವಕರು ಹಾಜರಿದ್ದರು.