ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದಿಂದ ದೇಶ ಸದೃಢ

| Published : Aug 16 2025, 12:00 AM IST

ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದಿಂದ ದೇಶ ಸದೃಢ
Share this Article
  • FB
  • TW
  • Linkdin
  • Email

ಸಾರಾಂಶ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶ ಸದೃಢವಾಗಿ ಮುನ್ನಡೆಯುತ್ತಿದೆ. ಮಹಾನ್‌ ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಗಳಾಗಿ ಸಬಲರಾಗಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.

ಕನ್ನಡಪ್ರಭ ವಾರ್ತೆ ಹನೂರು

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶ ಸದೃಢವಾಗಿ ಮುನ್ನಡೆಯುತ್ತಿದೆ. ಮಹಾನ್‌ ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಗಳಾಗಿ ಸಬಲರಾಗಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.

ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಯುವ ಜನತೆ ದೇಶದ ಶಕ್ತಿ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಲು ಪೋಷಕರು ಮುಂದಾಗಬೇಕು. ತಾಲೂಕಿನಲ್ಲಿ ಹೆಚ್ಚಿನ ಶೈಕ್ಷಣಿಕ ಪ್ರಗತಿಗೆ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಕ್ರಮವಹಿಸಬೇಕಾಗಿದೆ. ಜೊತೆಗೆ ತಾಲೂಕಿನಲ್ಲಿ ಆರೋಗ್ಯ ಸುಧಾರಣೆಗಾಗಿ ಪಟ್ಟಣದ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ಕ್ಯಾಬಿನೆಟ್ ಸಭೆಯಲ್ಲಿ ಕ್ರಮ ಕೈಗೊಳ್ಳಲಾಗಿದ್ದು ಒಡೆಯರ್ ಪಾಳ್ಯ ,ಪಿ ಜಿ ಪಾಳ್ಯ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಹ ಸಲ್ಲಿಸಲಾಗಿದೆ.

ನೀರಾವರಿ ಯೋಜನೆಗೆ ಗುಂಡಾಲ್ ಜಲಾಶಯಕ್ಕೆ ನದಿಯಿಂದ ಪೈಪ್ ಲೈನ್ ಮೂಲಕ ನೀರನ್ನು ಸರಬರಾಜು ಮಾಡುವ ಮೂಲಕ ರಾಮನಗುಡ್ಡ ಕೆರೆ ಹಾಗೂ ಹುಬ್ಬೆ ಉಣಸೆ ಜಲಾಶಯ ಅಭಿವೃದ್ಧಿಪಡಿಸಿ ತಾಲೂಕಿನ ರೈತರ ಸಮಗ್ರ ಅಭಿವೃದ್ಧಿ ಆರ್ಥಿಕತೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಸರ್ಕಾರ ಇತ್ತ ಗಮನ ಹರಿಸಬೇಕು. ಮಳೆ ಇಲ್ಲದೆ ಕಂಗಟ್ಟಿರುವ ತಾಲೂಕಿಗೆ ಹೆಚ್ಚಿನ ಹೊತ್ತು ನೀಡಬೇಕಾಗಿದೆ. ಜೊತೆಗೆ ತಾಲೂಕಿನಲ್ಲಿ ಇರುವಷ್ಟು ರಸ್ತೆಗಳೆಲ್ಲ ಹಲವಾರು ವರ್ಷಗಳಿಂದ ಹದಗೆಟ್ಟಿತ್ತು. ಈಗಾಗಲೇ ಮುಖ್ಯಮಂತ್ರಿಗಳ ಹಾಗೂ ಕ್ಷೇತ್ರದ ಅಭಿವೃದ್ಧಿ ಮಾದಪ್ಪನ ದಯೆಯಿಂದ 22 ಕೋಟಿ ರು. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಇನ್ನೂ ಇರುವಷ್ಟು ರಸ್ತೆಗಳನ್ನು ಅಭಿವೃದ್ಧಿಪಡಿಸಲು 500 ರಿಂದ 600 ಕೋಟಿ ರು. ಹೆಚ್ಚುವರಿ ಹಣ ಬೇಕಾಗಿರುವುದರಿಂದ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರ ಬಳಿ ಮನವಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಆದ್ಯತೆ ನೀಡುವ ಮೂಲಕ ಕ್ರಮ ಕೈಗೊಳ್ಳಲಾಗುವುದು. ಕ್ಷೇತ್ರದ ಜನತೆಯ ಋಣ ತೀರಿಸಲು ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಹೆಚ್ಚಿನ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಲ್ಯಾಪ್ ಟಾಪ್ ವಿತರಣೆ ಹಾಗೂ 20 ವೀಲ್ ಚೇರ್ ಗಳು ಸಹ ವಿತರಣೆ ಮಾಡಲಾಯಿತು .

ಗಮನ ಸೆಳೆದ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನ:

ಪಟ್ಟಣದ ಕ್ರೀಡಾಂಗಣದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳ ಪಾಠ ಸಂಚಲನ ಆಕರ್ಷಕವಾಗಿತ್ತು ಜೊತೆಗೆ ದೇಶಭಕ್ತಿ ಗೀತೆಗೆ ನೃತ್ಯ ಪ್ರದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳು ಗಮನ ಸೆಳೆದರು. ಹಾಗೂ ವಿವಿಧ ಕಾರ್ಯಕ್ರಮಗಳನ್ನು ನಡೆಸಿಕೊಟ್ಟ ವಿದ್ಯಾರ್ಥಿಗಳಿಗೆ ಶಾಸಕರಿಂದ ಬಹುಮಾನ ವಿತರಣೆಯನ್ನು ಸಹ ಇದೇ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಚೈತ್ರ, ಗ್ಯಾರಂಟಿ ಯೋಜನೆಗಳ ಸಮಿತಿಯ ತಾಲೂಕು ಅಧ್ಯಕ್ಷ ರಾಜಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಹಿರಿಯ ವೈದ್ಯಾಧಿಕಾರಿ ಪ್ರಕಾಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಮಮ್ತಾಜ್ ಬೇಗಂ, ಇನ್ಸ್ಪೆಕ್ಟರ್ ಪಿ ಆನಂದ್ ಮೂರ್ತಿ, ರಾಜಸ್ವ ನಿರೀಕ್ಷಕ ಶೇಷಣ್ಣ , ಇನ್ನಿತರ ಮುಖಂಡರು ಉಪಸ್ಥಿತರಿದ್ದರು.