ಸಂವಿಧಾನದ ಬಲದಿಂದಲೆ ದೇಶದ ಪ್ರಜಾಪ್ರಭುತ್ವ ಬಲಿಷ್ಟ

| Published : May 23 2025, 12:09 AM IST

ಸಂವಿಧಾನದ ಬಲದಿಂದಲೆ ದೇಶದ ಪ್ರಜಾಪ್ರಭುತ್ವ ಬಲಿಷ್ಟ
Share this Article
  • FB
  • TW
  • Linkdin
  • Email

ಸಾರಾಂಶ

ಡಾ. ಬಿ.ಆರ್. ಅಂಬೇಡ್ಕರ್ ದೇಶಕ್ಕೆ ಕೊಡುಗೆಯಾಗಿ ನೀಡಿದ ಸಂವಿಧಾನದಿಂದ ವಿಶ್ವದಲ್ಲಿಯೇ ಭಾರತ ಮಾದರಿ ಪ್ರಜಾಸತ್ತಾತ್ಮಕ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.

ಕನ್ನಡಪ್ರಭ ವಾರ್ತೆ ಆಲೂರು

ಡಾ. ಬಿ.ಆರ್. ಅಂಬೇಡ್ಕರ್ ದೇಶಕ್ಕೆ ಕೊಡುಗೆಯಾಗಿ ನೀಡಿದ ಸಂವಿಧಾನದಿಂದ ವಿಶ್ವದಲ್ಲಿಯೇ ಭಾರತ ಮಾದರಿ ಪ್ರಜಾಸತ್ತಾತ್ಮಕ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.

ತಾಲೂಕಿನ ಕವಳೀಕೆರೆ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಸಮುದಾಯ ಭವನ ಉದ್ಘಾಟನೆ ನೆರವೇರಿಸಿ ಮಾತನಾಡಿ, ದೇಶದಲ್ಲಿರುವ ಪ್ರತಿಯೊಂದು ಸಮುದಾಯಕ್ಕೂ ಅಂಬೇಡ್ಕರ್ ಆರ್ಥಿಕ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಅವಕಾಶಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಸಂವಿಧಾನದಲ್ಲಿ ಸ್ವಾತಂತ್ರ್ಯ, ಸಮಾನತೆ, ಶೋಷಣೆ ವಿರುದ್ಧ ಹಕ್ಕು, ಧಾರ್ಮಿಕ ಹಕ್ಕು, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಹಕ್ಕು ಹಾಗೂ ಸಂವಿಧಾನಿಕ ಪರಿಹಾರದ ಮೂಲಭೂತ ಹಕ್ಕುಗಳನ್ನು ನೀಡಿರುವ ಸಂವಿಧಾನದ ಬಲದಿಂದಲೆ ದೇಶದ ಪ್ರಜಾಪ್ರಭುತ್ವ ಬಲಿಷ್ಟವಾಗಿದೆ.ಮಾಜಿ ಪ್ರಧಾನಿ ಬಾಬು ಜಗಜೀವನ್ ರಾಮ್ ಶೋಷಿತರ ಹಕ್ಕಿಗಾಗಿ ಹೋರಾಡಿದರು. ಹಸಿರು ಕ್ರಾಂತಿಯ ಹರಿಕಾರ, ಕೃಷಿ ರಕ್ಷಣಾ ಸಚಿವರಾಗಿ ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಜೀವನ ಚರಿತ್ರೆ ಯುವಪೀಳಿಗೆಗೆ ತಲುಪಿಸುವ ಕಾರ್ಯ ನಡೆಯಬೇಕು. ಈ ಎರಡೂ ಮಹಾನ್ ಸಾಧಕರ ವಿಚಾರಗಳನ್ನು ಅರಿತು ಅವರ ಆದರ್ಶಗಳನ್ನು ಮೈಗೂಡಿಸಿ ಕೊಂಡು ಮುನ್ನೆಡೆಯಬೇಕು ಎಂದರು. ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಸಂದೇಶ್ ಮಾತನಾಡಿ, ಸಮಾಜದಲ್ಲಿ ಸ್ವಾತಂತ್ರ್ಯ, ಸಮಾನತೆಗಳನ್ನು ಪ್ರತಿಪಾದಿಸುವುದರೊಂದಿಗೆ ಶೋಷಿತ ಸಮುದಾಯಗಳ ಪರವಾಗಿ ನಿರಂತರವಾಗಿ ಹೋರಾಡಿದ ಅಂಬೇಡ್ಕರ್ ಅವರು ಮೊದಲ ಬಾರಿಗೆ ದೇಶಕ್ಕೆ ಡಾಕ್ಟರೇಟ್ ಪದವಿ ತಂದುಕೊಟ್ಟ ಮಹಾನ್ ನಾಯಕರು. ಬಾಬೂ ಜಗಜೀವನರಾಂ ಅಪ್ರತಿಮ ಸಂಘಟನಕಾರರು. ಇವರ ಪರಿಶ್ರಮದ ಫಲವಾಗಿ ದೇಶ ಇಂದು ಕೃಷಿ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಲು ಸಾಧ್ಯವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಕರ್ನಾಟಕ ಮಾದಿಗ ದಂಡೋರ ಜಿಲ್ಲಾ ಕೋಶಾಧ್ಯಕ್ಷ ವೆಂಕಟಯ್ಯ, ಕರ್ನಾಟಕ ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ಪುಟ್ಟರಾಜು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಧರ್ಮ, ಆನಂದ್ ಕವಳಿಕೆರೆ, ಧರ್ಮ ಕವಳಿಕೆರೆ ಹಾಗೂ ಉಪಸ್ಥಿತರಿದ್ದರು.