ಸಾರಾಂಶ
ಕಡೂರು, ದೇಶವನ್ನು ಯಾವ ರೀತಿ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂಬುದು ಡಾ. ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಟಿಯ ಚಿಂತನೆಗಳಲ್ಲಿವೆ ಎಂದು ಚಿಂತಕಿ ಪಲ್ಲವಿ ಹೇಳಿದರು.
ಸರಕಾರಿ ಬಾಲಕಿಯರ ಕಾಲೇಜಿನಲ್ಲಿ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ಕಡೂರುದೇಶವನ್ನು ಯಾವ ರೀತಿ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂಬುದು ಡಾ. ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಟಿಯ ಚಿಂತನೆಗಳಲ್ಲಿವೆ ಎಂದು ಚಿಂತಕಿ ಪಲ್ಲವಿ ಹೇಳಿದರು.
ಸೋಮವಾರ ಪಟ್ಟಣದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ವತಿಯಿಂದ ಅಂಬೇಡ್ಕರ್ ಅವರ ಪರಿನಿರ್ವಾಣದ ಅಂಗವಾಗಿ ಆಯೋಜಿಸಿದ್ದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.ಭವಿಷ್ಯದಲ್ಲಿ ರಾಷ್ಟ್ರವನ್ನು ಯಾವ ರೀತಿ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂಬ ಬಗ್ಗೆ ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳಲ್ಲಿ ಕಾಣಬಹುದಾಗಿದೆ. ಅವರ ಅಧ್ಯಯನ ಶೀಲತೆ ಮತ್ತು ಕ್ರೀಯಾಶೀಲತೆಯನ್ನು ನಾವೆಲ್ಲರೂ ವಿದ್ಯಾರ್ಥಿ ಜೀವನದಲ್ಲೇ ಅಳವಡಿಸಿಕೊಂಡರೆ ದೇಶಕ್ಕೆ ಉತ್ತಮ ಭವಿಷ್ಯ ರೂಪಿಸಿಕೊಡಲು ಸಾಧ್ಯವಾಗಲಿದೆ ಎಂದು ಹೇಳಿದರು.ಮಹಾಜ್ಞಾನಿಯ ಚಿಂತನೆಗಳು ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕವಾಗಿವೆ. ಈ ನಿಟ್ಟಿನಲ್ಲಿ ಎಬಿವಿಪಿ ಯಿಂದ ಅನೇಕ ಕಾರ್ಯಾಗಾರಗಳ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿ ಹಸ್ತಕದಿಂದ ಮಸ್ತಕಕ್ಕೆ ಮುಟ್ಟಬೇಕೆಂಬುದು ಕಾರ್ಯಗಾರದ ಮುಖ್ಯ ಆಶಯ ಎಂದರು.ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ಜ್ಞಾನೇಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು, ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿದ್ದಾರ್ಥ, ಜಿಲ್ಲಾ ಸಹ ಸಂಚಾಲಕ ಚಂದು, ಭೀಮಾ, ರೋಹಿತ್, ಯಶವಂತ್ ಮತ್ತಿತರಿದ್ದರು.9ಕೆಕೆಡಿಯು1.ಕಡೂರು ಪಟ್ಟಣದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣದ ಅಂಗವಾಗಿ ನಡೆದ ಸಾಮಾಜಿಕ ಸಾಮರಸ್ಯದ ಕಾರ್ಯಕ್ರಮದಲ್ಲಿ ಚಿಂತಕಿ ಪಲ್ಲವಿ ಮಾತನಾಡಿದರು.