ದೇಶದ ಪ್ರಗತಿ ಯುವಜನರ ಜವಾಬ್ದಾರಿ: ಜಿಪಂ ಸಿಇಒ ಕೆ.ಆರ್.ನಂದಿನಿ

| Published : Nov 13 2025, 12:15 AM IST

ದೇಶದ ಪ್ರಗತಿ ಯುವಜನರ ಜವಾಬ್ದಾರಿ: ಜಿಪಂ ಸಿಇಒ ಕೆ.ಆರ್.ನಂದಿನಿ
Share this Article
  • FB
  • TW
  • Linkdin
  • Email

ಸಾರಾಂಶ

ಸ್ವಾತಂತ್ರ ಪೂರ್ವದಲ್ಲಿ ದೇಶದ ಏಕತೆಗಾಗಿ ಶ್ರಮಿಸಿದ ಗಣ್ಯರಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರೂ ಒಬ್ಬರು. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಕೇವಲ ರಾಜಕೀಯ ವ್ಯಕ್ತಿಯಾಗದೆ ಸಮಾಜ ಸುಧಾರಕರಾಗಿ ಸಮಾಜಕ್ಕೆ ಅವರು ನೀಡಿರುವ ಕೊಡುಗೆ ನಿಜಕ್ಕೂ ಅಪಾರ.

ಕನ್ನಡಪ್ರಭ ವಾರ್ತೆ ಮಂಡ್ಯ

ದೇಶದ ಯುವ ಜನರು ಸನ್ಮಾರ್ಗದಲ್ಲಿ ನಡೆಯದಿದ್ದರೆ ದೇಶದ ಪ್ರಗತಿ ಸಾಧ್ಯವಿಲ್ಲ. ರಾಷ್ಟ್ರದ ಶಕ್ತಿಯಾಗಿರುವ ಯುವ ಜನರು ಸಕಾರಾತ್ಮಕ ಚಿಂತನೆಯೊಂದಿಗೆ ಉತ್ತಮ ಹಾದಿಯಲ್ಲಿ ಸಾಗಬೇಕು ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ತಿಳಿಸಿದರು.

ಜಿಲ್ಲಾಡಳಿತ, ಜಿಪಂ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸರ್ದಾರ್ ವಲ್ಲಭಬಾಯಿ ಪಟೇಲ್ ರವರ ೧೫೦ನೇ ಜನ್ಮದಿನೋತ್ಸವದ ಅಂಗವಾಗಿ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಪಾದಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ ಪೂರ್ವದಲ್ಲಿ ದೇಶದ ಏಕತೆಗಾಗಿ ಶ್ರಮಿಸಿದ ಗಣ್ಯರಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರೂ ಒಬ್ಬರು. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಕೇವಲ ರಾಜಕೀಯ ವ್ಯಕ್ತಿಯಾಗದೆ ಸಮಾಜ ಸುಧಾರಕರಾಗಿ ಸಮಾಜಕ್ಕೆ ಅವರು ನೀಡಿರುವ ಕೊಡುಗೆ ನಿಜಕ್ಕೂ ಅಪಾರ ಎಂದು ಬಣ್ಣಿಸಿದರು.

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ದೇಶಾಭಿಮಾನ ಮತ್ತು ದೇಶಭಕ್ತಿ ಇಂದಿನ ಯುವ ಪೀಳಿಗೆಗೆ ಸ್ಫೂರ್ತಿದಾಯಕ ಎಂದರೆ ತಪ್ಪಾಗುವುದಿಲ್ಲ. ಆಡಳಿತ ವ್ಯವಸ್ಥೆ, ರಾಜಕೀಯ ವ್ಯವಸ್ಥೆ ಹಾಗೂ ರಾಷ್ಟೀಯ ಏಕತೆಗಾಗಿ ಶ್ರಮಿಸಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸರ್ದಾರ್ ವಲ್ಲಭಬಾಯಿ ಪಟೇಲ್ ಚಿಂತನೆ ಹಾಗೂ ಆದರ್ಶ ಕುರಿತು ವಿದ್ಯಾರ್ಥಿಗಳು ಲೇಖನ ರಚಿಸಿ ಮತ್ತು ನಿಮ್ಮ ಸುತ್ತಮುತ್ತಲಿನ ಜನ ಸಮುದಾಯದವರಿಗೂ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ದೇಶಾಭಿಮಾನ, ಆದರ್ಶ ಕುರಿತು ತಿಳಿಸಿ ಎಂದರು.

ಇದೇ ಸಂದರ್ಭದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಪನಿರ್ದೇಶಕ ಓಂ ಪ್ರಕಾಶ್, ಎನ್.ಎಸ್.ಎಸ್ ಕಾರ್ಯಕ್ರಮ ಸಂಯೋಜಕರು ಹಾಗೂ ಮಂಡ್ಯ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಡಾ.ಪ್ರಮೀಳಾ, ಮುಡಾ ಆಯುಕ್ತ ಕೃಷ್ಣಕುಮಾರ್ ಹಾಗೂ ಪ್ರೊ.ಯೋಗಾನರಸಿಂಹಾಚಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.