ದೇಶದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಮುನ್ನಡೆಸಬೇಕು: ಎಡಿಸಿ

| Published : Oct 09 2024, 01:39 AM IST

ದೇಶದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಮುನ್ನಡೆಸಬೇಕು: ಎಡಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ನಮ್ಮ ದೇಶದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಮುನ್ನಡೆಸಿಕೊಳ್ಳುವ ಸಲುವಾಗಿ ಮ್ಯಾರಥಾನ್ ಆಯೋಜಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಹೇಳಿದರು. ಚಾಮರಾಜನಗರದಲ್ಲಿ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಆಯೋಜಿಸಿದ್ದ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ನಮ್ಮ ದೇಶದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಮುನ್ನಡೆಸಿಕೊಳ್ಳುವ ಸಲುವಾಗಿ ಮ್ಯಾರಥಾನ್ ಆಯೋಜಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಹೇಳಿದರು.ಚೆಲುವ ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಆಯೋಜಿಸಿದ್ದ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವ್ಯಕ್ತಿ ಮಾನಸಿಕವಾಗಿ ಮಾತ್ರವಲ್ಲದೇ ದೈಹಿಕವಾಗಿಯೂ ಸದೃಢರಾಗುವುದು ಅತಿ ಮುಖ್ಯ. ಈ ನಿಟ್ಟಿನಲ್ಲಿ ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ಮ್ಯಾರಥಾನ್ ಓಟ ಹಮ್ಮಿಕೊಳ್ಳಲಾಗಿದೆ, ಪ್ರತಿಯೊಬ್ಬರಯ ದೈಹಿಕ ಸಾಮರ್ಥ್ಯ ಬಲಗೊಳಿಸುವ ಆಟೋಟಗಳಲ್ಲಿ ಭಾಗಿಯಾಗಬೇಕು ಎಂದರು.

ನಗರಸಭಾ ಅಧ್ಯಕ್ಷ ಸುರೇಶ್ ಮ್ಯಾರಥಾನ್ ಓಟಕ್ಕೆ ಶುಭ ಕೋರಿದರು, ದೇವಸ್ಥಾನದಿಂದ ಆರಂಭವಾದ ಮ್ಯಾರಥಾನ್ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮಾರ್ಗವಾಗಿ ರಾಮಸಮುದ್ರದ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ತಲುಪಿ ಬಳಿಕ ಅಲ್ಲಿಂದ ಅದೇ ಮಾರ್ಗವಾಗಿ ಹಿಂದಕ್ಕೆ ಆಗಮಿಸಿ ದೇವಸ್ಥಾನದಲ್ಲಿ ಅಂತ್ಯಗೊಂಡಿತು. ಮ್ಯಾರಥಾನ್‌ನಲ್ಲಿ ವಿವಿಧೆಡೆಗಳಿಂದ ಆಗಮಿಸಿದ್ದ ಯುವಕ, ಯುವತಿಯರು, ವಿರ್ದ್ಯಾರ್ಥಿಗಳು ಸಾರ್ವಜನಿಕರು, ಅಧಿಕಾರಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಡಿಡಿಪಿಐ ರಾಮಚಂದ್ರ ರಾಜೇ ಅರಸ್, ಪೌರಾಯುಕ್ತ ಎಸ್.ವಿ. ರಾಮದಾಸ್, ಮಂಜುನಾಥ್, ದೈಹಿಕ ಶಿಕ್ಷಕರು ಇತರರು ಭಾಗವಹಿಸಿದ್ದರು.