''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''

| N/A | Published : Oct 27 2025, 12:15 AM IST / Updated: Oct 27 2025, 12:20 PM IST

HD Kumaraswamy
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
Share this Article
  • FB
  • TW
  • Linkdin
  • Email

ಸಾರಾಂಶ

ಜೆಡಿಎಸ್‌ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಬೇಕು ಎಂದು ಜೆಡಿಎಸ್‌ ಯುವ ಘಟಕ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

 ಚನ್ನಪಟ್ಟಣ :  ಜೆಡಿಎಸ್‌ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಬೇಕು ಎಂದು ಜೆಡಿಎಸ್‌ ಯುವ ಘಟಕ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರು ಗ್ರಾಮದಲ್ಲಿ ಆಯೋಜಿಸಿದ್ದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಆಗುವ ದಿನ ದೂರವಿಲ್ಲ. ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತ ದಿನ ನಾನು ಅಧಿಕಾರ ತೆಗೆದುಕೊಳ್ಳುವುದಿಲ್ಲ. ಕಾರ್ಯಕರ್ತರು, ಹಾಗೂ ಮುಖಂಡರಿಗೆ ಅಧಿಕಾರಿ ಸಿಕ್ಕಿಲ್ಲ ಎಂದು ದೂರು ಏನಿದೆಯೋ ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ನಿಮಗೆ ಅಧಿಕಾರಿ ಕಲ್ಪಿಸಲು ಶ್ರಮಿಸುತ್ತೇನೆ ಎಂದು ನಿಖಿಲ್ ಘೋಷಿಸಿದರು.

ಕುಮಾರಸ್ವಾಮಿಯವರನ್ನು ಮತ್ತೊಮ್ಮೆ ಸಿಎಂ ಮಾಡಬೇಕು. ಪಕ್ಷ ಉಳಿಸಬೇಕು. ಮಾತೆತ್ತಿದರೆ ಜೆಡಿಎಸ್ ವಿಲೀನವಾಗುತ್ತದೆ ಎನ್ನುತ್ತಾರೆ, ವಿಲೀನಗೊಳಿಸಲು ನಮ್ಮ ಕಾರ್ಯಕರ್ತರು ಅಷ್ಟು ಅಸಮರ್ಥರೇ. ಪಕ್ಷ ಕಟ್ಟುವ ಜವಬ್ದಾರಿ ನಮ್ಮ ಮೇಲಿದೆ ಎಂದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾನೇನು ಆಸೆ ಪಟ್ಟಿರಲ್ಲಿಲ್ಲ. ನಿಮಗಾಗಿ ಮತ್ತು ಪಕ್ಷಕ್ಕಾಗಿ ಬಂದು ನಾನು ತಲೆಕೊಟ್ಟೆ. ರಾಜಕೀಯವಾಗಿ ನನಗೆ ಆಗಿರುವ ಪೆಟ್ಟು ನಿಮಗ್ಯಾರಿಗಾದರೂ ಆಗಿದ್ದರೆ ಮನೆಯಿಂದ ಆಚೆ ಬರುತ್ತಿರಲಿಲ್ಲ. ಆದರೆ, ನಾನು ಬಂದು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಅಳಲು ತೋಡಿಕೊಂಡರು.

ಮಂಡ್ಯದಲ್ಲಿ ಚುನಾವಣೆಗೆ ಸ್ಪರ್ಧಿಸಿ ಎಂದರು. ಆದರೆ, ನಾನು ನಿರಾಕರಿಸಿದೆ

ಮಂಡ್ಯದಲ್ಲಿ ಚುನಾವಣೆಗೆ ಸ್ಪರ್ಧಿಸಿ ಎಂದರು. ಆದರೆ, ನಾನು ನಿರಾಕರಿಸಿದೆ. ಅದರೆ, ಇಲ್ಲಿ ಬಂದು ನಿಮಗಾಗಿ ತಲೆಕೊಟ್ಟೆ ಎಂದು ಬೇಸರ ವ್ಯಕ್ತಪಡಿಸಿದರು.

ಉಪಚುನಾವಣೆಯಲ್ಲಿ ಯಾರು ಏನು ಮಾಡಿದರು ಎಂದು ನನಗೆ ಗೊತ್ತಿಲ್ಲವಾ. ಸೋತರೂ ನಾನು ಮನೆಯಲ್ಲಿ ಕೂತಿಲ್ಲ, ಪಕ್ಷ ಸಂಘಟಿಸುವ ಕೆಲಸ ಮಾಡುತ್ತಿದ್ದೇನೆ. ಇದು ನೀವು ಕಟ್ಟಿರುವ ಪಕ್ಷ. ಇಲ್ಲಿ ಪ್ರಾಮಾಣಿಕರು ಯಾರು, ಅಪ್ರಾಮಾಣಿಕರು ಯಾರು ಎಂದು ತಮ್ಮ ಮನಸಾಕ್ಷಿಗೆ ಕೇಳಿಕೊಂಡರೆ ಸಾಕು ಎಂದು ಅಸಮಾಧಾನದಿಂದ ನುಡಿದರು.

ಪಕ್ಷದ ಕಾರ್ಯಕರ್ತರು ಯಾವುದಕ್ಕೂ ದೃತಿಗೆಡಬೇಡಿ. ಏನೇ ವಿಚಾರವಿದ್ದರೂ ಅದನ್ನು ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳಿ. ಎಲ್ಲ ಚೆನ್ನಾಗಿದ್ದಾಗ ನನಗೆ ಬೇಕು ಅನ್ನುವುದು, ಈಗ ಬೇಡ ಎಂದರೆ ಹೇಗೆ? ಅಧಿಕಾರ ಇದ್ದಾಗ ಈ ವೇದಿಕೆ ಸಾಲುತ್ತಿರಲಿಲ್ಲ. ಈಗ ಏಕೆ ಮುಖಂಡರು ಬಂದಿಲ್ಲ ಎಂದು ಬೇಸರಗೊಂಡರು.

ಕಾಂಗ್ರೆಸ್‌ನವರು ಹೇಗೆ ನಡೆದುಕೊಳ್ಳಬೇಕು ಎಂದು ಕಲಿಸಿದ್ದಾರೆ

ಬಮೂಲ್ ಚುನಾವಣೆಯಲ್ಲಿ ಸರ್ಕಾರ ಹೇಗೆ ನಡೆದುಕೊಂಡಿತು. ಅಧಿಕಾರಿಗಳು ಹೇಗೆ ಕುಣಿದರು ಎಂದು ನೋಡಿದ್ದೇವೆ. ಕಾಂಗ್ರೆಸ್‌ನವರು ಹೇಗೆ ನಡೆದುಕೊಳ್ಳಬೇಕು ಎಂದು ಕಲಿಸಿದ್ದಾರೆ. ಚುನಾವಣೆಗೆ ಇನ್ನು ಎರಡು ವರ್ಷ ಬಾಕಿ ಇದೆ. ಮುಂದೆ ನಾವು ಅಧಿಕಾರ ಬಂದಾಗ ಅವರಿಗಿನಿಂತ ಮೂರು ಪಟ್ಟು ನಡೆಸುತ್ತೇವೆ ಎಂದರು.

ಕಾರ್ಯಕರ್ತರು ಎರಡು ವರ್ಷ ತಡೆಯಿರಿ, ಯಾರೂ ಉದ್ವೇಗಕ್ಕೆ ಒಳಗಾಗಬೇಡಿ. ನಿಮ್ಮ ಮೇಲೆ ಹಾಕುವ ಕೇಸ್‌ಗಳ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ನೂರು ಕೇಸ್ ಹಾಕಿದರು ತಲೆ ಕಡೆಸಿಕೊಳ್ಳಬೇಡಿ ಎಂದು ಧೈರ್ಯ ತುಂಬಿದರು.

Read more Articles on