ರಾಜ್ಯದಲ್ಲಿ ಬಾಣಂತಿಯರ ಸಾವು ನಾಚಿಕೆಗೇಡಿನ ಸಂಗತಿ: ಚಾ.ರಂ.ಶ್ರೀನಿವಾಸಗೌಡ

| Published : Dec 11 2024, 12:48 AM IST

ರಾಜ್ಯದಲ್ಲಿ ಬಾಣಂತಿಯರ ಸಾವು ನಾಚಿಕೆಗೇಡಿನ ಸಂಗತಿ: ಚಾ.ರಂ.ಶ್ರೀನಿವಾಸಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದಲ್ಲಿ 3 ಸಾವಿರಕ್ಕೂ ಹೆಚ್ಚು ಬಾಣಂತಿಯರು, ಮಕ್ಕಳು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಇದು ನಿಜವಾಗಲೂ ನಾಚಿಕೆಗೇಡಿನ ಸಂಗತಿ ಎಂದು ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಆಕ್ರೋಶ ವ್ಯಕ್ತಪಡಿಸಿದರು. ಚಾಮರಾಜನಗರದಲ್ಲಿ ಪ್ರತಿಭಟನೆ ವೇಳೆ ಮಾತನಾಡಿದರು.

ಆಕ್ರೋಶ । ಕ. ಸೇನಾಪಡೆ ಪ್ರತಿಭಟನೆ

ಚಾಮರಾಜನಗರ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದಲ್ಲಿ 3 ಸಾವಿರಕ್ಕೂ ಹೆಚ್ಚು ಬಾಣಂತಿಯರು, ಮಕ್ಕಳು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಇದು ನಿಜವಾಗಲೂ ನಾಚಿಕೆಗೇಡಿನ ಸಂಗತಿ ಎಂದು ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದರು.

ಬಳ್ಳಾರಿ ಜಿಲ್ಲಾಸ್ಪತ್ರೆ ಸೇರಿದಂತೆ ರಾಜ್ಯದ ಇತರ ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲಿ ನೂರಾರು ಬಾಣಂತಿಯರು, ಸಾವಿರಾರು ಮಕ್ಕಳು ಮೃತಪಟ್ಟಿದ್ದಾರೆ.. ರಾಜ್ಯದಲ್ಲಿ ಆರೋಗ್ಯ ಇಲಾಖೆ ಇದೆಯೋ ಅಥವಾ ಸತ್ತು ಹೋಗಿದೆಯೋ, ಆರೋಗ್ಯ ಸಚಿವರು ಇದ್ದಾರೋ ನಾಪತ್ತೆಯಾಗಿದ್ದಾರೋ? ಇಂತಹ‌ ಪ್ರಕರಣ ನಡೆದರೂ ಸಹ ರಾಜ್ಯ ಸರ್ಕಾರ ಗಮನಹರಿಸದೆ ಇರುವುದು ಒಂದು ದುರಂತ ಸಂಗತಿಯಾಗಿದೆ ಎಂದು ದೂರಿದರು.

ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಕುಟುಂಬಕ್ಕೆ 50 ಲಕ್ಷ ರು..ಪರಿಹಾರ ನೀಡಬೇಕು. ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ಘೋಷಣೆ ಮಾಡಬೇಕು. ತಪ್ಪಿತಸ್ಥ ವೈದ್ಯರು, ಅಧಿಕಾರಿಗಳ ವಿರುದ್ದ ತಕ್ಷಣವೇ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು ಎಂದು ಚಾ.ರಂ.ಶ್ರೀನಿವಾಸಗೌಡ ಒತ್ತಾಯಿಸಿದರು.

ನಗರದ ಚಾಮರಾಜೇಶ್ವರ ಉದ್ಯಾನದ ಮುಂಭಾಗದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿರತರು ಸರ್ಕಾರ, ಆರೋಗ್ಯ ಸಚಿವರು, ಆರೋಗ್ಯ ಇಲಾಖೆ ಅಧಿಕಾರಗಳ, ಬಾಣಂತಿಯರ ಸಾವಿಗೆ ಕಾರಣವಾಗಿರುವ ಸರ್ಕಾರಿ ಆಸ್ಪತ್ರೆಗಳ, ವೈದ್ಯರ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ಮಹೇಶ್ ಗೌಡ, ನಂಜುಂಡಶೆಟ್ಟಿ, ವರದನಾಯಕ, ರವಿಚಂದ್ರಪ್ರಸಾದ್ ಕಹಳೆ, ಲಿಂಗರಾಜು, ರಾಚಪ್ಪ ಸಿದ್ದಶೆಟ್ಟಿ, ಇತರರು ಭಾಗವಹಿಸಿದ್ದರು.