ಸಾರಾಂಶ
ನಾನು ರಾಜಕೀಯ ಪ್ರವೇಶಿಸುವ ಬಗ್ಗೆ ಇನ್ನೂ ತೀರ್ಮಾನವನ್ನೇ ಮಾಡಿಲ್ಲ. ಹಲವೆಡೆ ಜನರು ರಾಜಕೀಯಕ್ಕೆ ಬರುವಂತೆ ಒತ್ತಡ ಹೇರುತ್ತಿದ್ದಾರೆ. ಈಗಲೂ ನಾನು ಅದರ ಬಗ್ಗೆ ಆಲೋಚಿಸುತ್ತಿದ್ದೇನೆ ಎಂದು ಜಯದೇವ ಹೃದ್ರೋಗ ಸಂಸ್ಥೆ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದರು.
ಡಾ.ಸಿ.ಎನ್.ಮಂಜುನಾಥ್ ಹೇಳಿಕೆ । ರಾಜಕೀಯಕ್ಕೆ ಬರಬೇಕಾ ಲೋಕಸಭೆಗೆ ಸ್ಪರ್ಧಿಸಬೇಕಾ ಇನ್ನೂ ತಿರ್ಮಾನ ಮಾಡಿಲ್ಲ
ಕನ್ನಡಪ್ರಭ ವಾರ್ತೆ ಮಂಡ್ಯನಾನು ರಾಜಕೀಯ ಪ್ರವೇಶಿಸುವ ಬಗ್ಗೆ ಇನ್ನೂ ತೀರ್ಮಾನವನ್ನೇ ಮಾಡಿಲ್ಲ. ಹಲವೆಡೆ ಜನರು ರಾಜಕೀಯಕ್ಕೆ ಬರುವಂತೆ ಒತ್ತಡ ಹೇರುತ್ತಿದ್ದಾರೆ. ಈಗಲೂ ನಾನು ಅದರ ಬಗ್ಗೆ ಆಲೋಚಿಸುತ್ತಿದ್ದೇನೆ ಎಂದು ಜಯದೇವ ಹೃದ್ರೋಗ ಸಂಸ್ಥೆ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ಜನರು ಮಾತನಾಡುತ್ತಿದ್ದಾರೆ. ನಾನು ಇನ್ನೂ ಅದರ ಬಗ್ಗೆ ತೀರ್ಮಾನ ಮಾಡಿಲ್ಲ. ರಾಜಕೀಯಕ್ಕೆ ಬರಬೇಕಾ, ಲೋಕಸಭೆಗೆ ಸ್ಪರ್ಧಿಸಬೇಕಾ ಎಂಬ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಹೃದ್ರೋಗ ಚಿಕಿತ್ಸಾ ಕೇತ್ರದಲ್ಲಿ ರಾಜ್ಯಮಟ್ಟದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದೀರಿ. ಅದೇ ರೀತಿ ರಾಷ್ಟ್ರ ಮಟ್ಟದಲ್ಲೂ ಈ ರೀತಿಯ ಸುಧಾರಣೆ ಏಕೆ ತರಬಾರದು ಎಂದು ಹೇಳುತ್ತಿದ್ದಾರೆ. ಅದರ ಬಗ್ಗೆ ಆಲೋಚನೆ ಮಾಡಿ ರಾಜಕೀಯ ಪ್ರವೇಶಿಸುವ ನಿರ್ಧಾರ ಮಾಡಿದರೆ ಹೇಳುತ್ತೇನೆ ಎಂದು ಜಾರಿಕೊಂಡರು.ನಾನು ಹೋದಲ್ಲೆಲ್ಲಾ ಜನರು ಅಲ್ಲಿ ನಿಲ್ಲುತ್ತೀರಾ. ಇಲ್ಲಿ ನಿಲ್ಲುತ್ತೀರಾ ಎಂದು ಕೇಳುತ್ತಿದ್ದಾರೆ. ಆದರೆ, ನಾನಿನ್ನೂ ಅದರ ಬಗ್ಗೆ ನಿರ್ಧಾರ ಮಾಡದಿರುವಾಗ ಏನೆಂದು ಹೇಳಲಿ. ಲೋಕಸಭೆ ಪ್ರವೇಶ ಕೇವಲ ರಾಜಕೀಯ ಮೂಲಕವೇ ಅಲ್ಲ. ನನ್ನ ದೃಷ್ಟಿಯಲ್ಲಿ ಲೋಕಸಭೆಯೇ ಬೇರೆ ರಾಜಕೀಯವೇ ಬೇರೆ ಎಂದರು.ಜಯದೇವ ಹೃದ್ರೋಗ ಸಂಸ್ಥೆ ಕಾರ್ಯವೈಖರಿ ಬಗ್ಗೆ ಎಲ್ಲಾ ಸರ್ಕಾರಗಳು ಮೆಚ್ಚುಗೆ ವ್ಯಕ್ತಪಡಿಸಿವೆ. ಯಾವ ಕಾರಣಕ್ಕೆ ತನಿಖೆ ಮಾಡಬೇಕು ಅಂದುಕೊಂಡಿದ್ದಾರೆ ನನಗೆ ಗೊತ್ತಿಲ್ಲ. ಕೇಂದ್ರ ಆರೋಗ್ಯ ಸಮಿತಿಯವರೇ ನಮ್ಮ ಕೆಲಸ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಇಡೀ ರಾಷ್ಟ್ರದಲ್ಲಿ ಜಯದೇವ ಸಂಸ್ಥೆ ಮಾದರಿ ಸಂಸ್ಥೆಯಾಗಿ ಅಭಿವೃದ್ಧಿಗೊಳಿಸಿದ್ದೇವೆ ಎಂದು ನುಡಿದರು.ಸರ್ಕಾರಕ್ಕೆ ಈ ಸಂಸ್ಥೆ ಶೋಕೇಸ್ ಆಗಿದೆ ಎಂದಿದ್ದರು. ಜಯದೇವ ರೀತಿ ಸರ್ಕಾರಿ ಸಂಸ್ಥೆಗಳನ್ನ ಯಾಕೆ ಅಭಿವೃದ್ಧಿ ಮಾಡಬಾರದು ಎಂದು ಸರ್ಕಾರವೇ ತಿಳಿಸಿದೆ. ಹೀಗಿರುವಾಗ ತನಿಖೆ ಬಗ್ಗೆ ಆಲೋಚನೆ ಹೇಗೆ ಬಂತೆಂದು ಗೊತ್ತಾಗುತ್ತಿಲ್ಲ ಎಂದು ಹೇಳಿದರ
ಸೇವೆ ಮಾಡಿದ್ದನ್ನು ಆಲೋಚಿಸಲೂ ಸಮಯವಿಲ್ಲರಾಜಕೀಯದವರ ಮನೆಯಲ್ಲಿ ಹುಟ್ಟಿದ್ದೀನಿ. ನಾನು ಹುಟ್ಟಿದ ಒಂದೇ ವರ್ಷದಲ್ಲಿ ತಂದೆ ದೇವೇಗೌಡರು ಎಂಎಲ್‌ಎ ಆಗಿದ್ದರು. ನಾನೂ ರಾಜಕೀಯದಲ್ಲಿನ ಏಳು-ಬೀಳುಗಳನ್ನು ನೋಡಿದ್ದೇನೆ. ಡಾ. ಮಂಜುನಾಥ್ ಜನರ ಸೇವೆ ಮಾಡಿದ್ದಾರೆ. ನೆಮ್ಮದಿಯಾಗಿ ಆ ಸೇವೆ ಮಾಡಿದ್ದೇವೆ ಎನ್ನುವುದನ್ನು ಆಲೋಚಿಸಲು ಸಮಯ ಸಿಗುತ್ತಿಲ್ಲ. ಸಂತೋಷವಾಗಿ ಆ ವಿಚಾರ ಆಸ್ವಾದಿಸಲೂ ಆಗಿಲ್ಲ. ಸಂಸ್ಥೆಯ ನಿರ್ದೇಶಕರಾಗಿದ್ದ ಅವಧಿಯ ತನಿಖೆ ವಿಚಾರ ಇನ್ನೂ ನಮ್ಮ ಗಮನಕ್ಕೆ ಬಂದಿಲ್ಲ. ಅದರ ಬಗ್ಗೆ ಮಾತನಾಡಿದರೆ ತಪ್ಪಾಗುತ್ತದೆ.ಎಚ್.ಡಿ. ಅನಸೂಯ, ಡಾ.ಸಿ.ಎನ್. ಮಂಜುನಾಥ್ ಪತ್ನಿ;Resize=(128,128))
;Resize=(128,128))
;Resize=(128,128))
;Resize=(128,128))