ಸಾರಾಂಶ
ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಅವರ ಸಂವಿಧಾನ ದೇಶದ ಆಸ್ತಿಯಾಗಿದ್ದು, ಪ್ರತಿಯೊಬ್ಬ ವ್ಯಕ್ತಿಗೂ ಸಂವಿಧಾನ ಶಕ್ತಿ ಮತ್ತು ಚೈತನ್ಯ ನೀಡುತ್ತಿದೆ.
ಕನ್ನಡಪ್ರಭ ವಾರ್ತೆ ಕಲಬುರಗಿ
ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಅವರ ಸಂವಿಧಾನ ದೇಶದ ಆಸ್ತಿಯಾಗಿದ್ದು, ಪ್ರತಿಯೊಬ್ಬ ವ್ಯಕ್ತಿಗೂ ಸಂವಿಧಾನ ಶಕ್ತಿ ಮತ್ತು ಚೈತನ್ಯ ನೀಡುತ್ತಿದೆ. ದೇಶದ ಎಲ್ಲಾ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸಂವಿಧಾನದ ಆಶಯವೇ ಪ್ರೇರಣೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ದಯಾನಂದ ಅಗಸರ ಅಭಿಪ್ರಾಯಪಟ್ಟರು.ಗುವಿವಿ ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ರಾಧಾಕೃಷ್ಣ ಸಭಾಂಗಣದಲ್ಲಿ ಆಯೋಜಿಸಿದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ. ಬೀಮರಾವ್ ಅವರ 133ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಸ್ಪ ಸಮರ್ಪಿಸಿ ಮಾತನಾಡಿದರು.
ಕುಲಸಚಿವೆ ಪ್ರೊ. ಮೇಧಾವಿನಿ ಕಟ್ಟಿ, ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಪ್ರೊ. ಚಂದ್ರಕಾಂತ್ ಯಾತನೂರು ಮಾತನಾಡಿದರು. ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ. ಶ್ರೀರಾಮುಲು, ಕಾನೂನು ನಿಕಾಯದ ಡೀನ್ ಪ್ರೊ. ದೇವಿದಾಸ್ ಮಾಲೆ, ಪ್ರೊ. ವಾಘ್ಮೋರೆ ಶಿವಾಜಿ, ಐಕ್ಯೂಎಸಿ ನಿರ್ದೇಶಕ ಪ್ರೊ. ಕೆರೂರ್, ಪ್ರೊ. ರಮೇಶ್ ರಾಥೋಡ್, ಪ್ರೊ. ಜಿ. ಎಂ. ವಿದ್ಯಾಸಾಗರ್ ಸೇರಿದಂತೆ ಸ್ನಾತಕೋತ್ತರ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.