ಗ್ರಾಮಗಳ ಅಭಿವೃದ್ಧಿಯಿಂದ ದೇಶ ಅಭಿವೃದ್ಧಿ ಸಾಧ್ಯ

| Published : Mar 27 2025, 01:07 AM IST

ಸಾರಾಂಶ

ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆಯ ಮೇಲೆ ಕೆಲಸ ಮಾಡುತ್ತಿದ್ದೇನೆ. ಹಾಗಾಗಿಯೇ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚಿತ್ರಣ ವರ್ಷದಿಂದ ವರ್ಷಕ್ಕೆ ಸಾಕಷ್ಟು ಬದಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆಯ ಮೇಲೆ ಕೆಲಸ ಮಾಡುತ್ತಿದ್ದೇನೆ. ಹಾಗಾಗಿಯೇ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚಿತ್ರಣ ವರ್ಷದಿಂದ ವರ್ಷಕ್ಕೆ ಸಾಕಷ್ಟು ಬದಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿ ತಾಲೂಕಿನ ವಾಘವಾಡೆ ಗ್ರಾಮದಿಂದ ಮಾರ್ಕಂಡೇಯ ನಗರದವರೆಗಿನ ರಸ್ತೆ ನಿರ್ಮಾಣದ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಸುಮಾರು ₹4 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆಯಲಿದೆ. ಗ್ರಾಮೀಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ವಿಶೇಷ ಗಮನ ಹರಿಸಿ, ಹಲವಾರು ಯೋಜನೆಗಳ ಮೂಲಕ ಹಣ ಮಂಜೂರು ಮಾಡಿಸಿ, ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗುತ್ತಿದೆ. ಏಳು ವರ್ಷದ ಹಿಂದೆ ಕ್ಷೇತ್ರ ಹೇಗಿತ್ತು? ಈಗ ಹೇಗಿದೆ ಎನ್ನುವುದು ನಿಮಗೆಲ್ಲ ಗೊತ್ತಿದೆ. ನಿಮ್ಮೆಲ್ಲರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದರು.ಈ ವೇಳೆ ವೈಶಾಲಿ ಕಾಂಬಳೆ, ಸುನಿಲ ಪಾಟೀಲ, ನಾಗೇಂದ್ರ ಪಾಟೀಲ, ಮಾರುತಿ ದೇಸಾಯಿ, ಪ್ರಮೋದ್ ಲೋಹಾರ್, ಶುಭಂ ಲೋಕಾರ್, ವಿನಾಯಕ ಗುರವ, ಕಲ್ಲಪ್ಪ ಹುಂದ್ರೆ, ಬಾವಕಣ್ಣ ಪಾಟೀಲ, ಸಂತೋಷ ಅಂಬೋಳ್ಕರ್ ಮುಂತಾದವರು ಉಪಸ್ಥಿತರಿದ್ದರು.

ನಂತರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಂತಿಬಸ್ತವಾಡ, ವಾಘವಾಡೆ ಗ್ರಾಮಗಳ ಮುಖ್ಯ ರಸ್ತೆಯಿಂದ ಕಾಳೆನಟ್ಟಿ ಗ್ರಾಮದವರೆಗಿನ ರಸ್ತೆ ಸುಧಾರಣೆಯ ಕಾಮಗಾರಿ ಪ್ರಗತಿ ಹಂತದಲ್ಲಿದ್ದು, ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ, ರಸ್ತೆ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ನಂತರ, ಕ್ಷೇತ್ರದ ಮಾರ್ಕಂಡೇಯ ನಗರದ ಮುಖ್ಯ ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.ಸುಮಾರು ₹3 ಕೋಟಿ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣ ನಡೆಯಲಿದೆ. ನಿಗದಿತ ಸಮಯದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.