ಜಿಲ್ಲಾಧಿಕಾರಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ

| Published : Nov 05 2025, 12:15 AM IST

ಜಿಲ್ಲಾಧಿಕಾರಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾಧಿಕಾರಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಜನರೇ ಅವರನ್ನು ಸರಿ ಮಾಡುತ್ತಾರೆ ಎಂದು ಎಚ್ಚರಿಸಿದರು. ಹಾಸನಾಂಬೆ ಜಾತ್ರೆಯಲ್ಲಿ ಎಡಿಆರ್‌ಎಲ್ ಅಧಿಕಾರಿ ಸಂಶುದ್ದಿನ್ ನನ್ನೊಂದಿಗೆ ನಡೆದ ಕಾರಣಕ್ಕೆ ಅವರನ್ನು ಕಡ್ಡಾಯ ರಜೆಗೆ ಕಳುಹಿಸಲಾಗಿದೆ. ಅಧಿಕಾರಿಗಳು ಶಾಸಕರ ಜೊತೆ ಮಾತನಾಡಬಾರದೆ, ಪ್ರಾಮಾಣಿಕ ಅಧಿಕಾರಿ ಮಾಡಿದ ತಪ್ಪೇನು ಎಂದು ಪ್ರಶ್ನಿಸಿದರು. ಮುಸ್ಲಿಂ ಸಮುದಾಯದ ಕುರಿತು ರೇವಣ್ಣ ಕಳವಳ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರ ಕಾರ್ಯ ಶೈಲಿಯನ್ನು ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ತೀವ್ರವಾಗಿ ಟೀಕಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಜಿಲ್ಲಾಧಿಕಾರಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಜನರೇ ಅವರನ್ನು ಸರಿ ಮಾಡುತ್ತಾರೆ ಎಂದು ಎಚ್ಚರಿಸಿದರು. ಹಾಸನಾಂಬೆ ಜಾತ್ರೆಯಲ್ಲಿ ಎಡಿಆರ್‌ಎಲ್ ಅಧಿಕಾರಿ ಸಂಶುದ್ದಿನ್ ನನ್ನೊಂದಿಗೆ ನಡೆದ ಕಾರಣಕ್ಕೆ ಅವರನ್ನು ಕಡ್ಡಾಯ ರಜೆಗೆ ಕಳುಹಿಸಲಾಗಿದೆ. ಅಧಿಕಾರಿಗಳು ಶಾಸಕರ ಜೊತೆ ಮಾತನಾಡಬಾರದೆ, ಪ್ರಾಮಾಣಿಕ ಅಧಿಕಾರಿ ಮಾಡಿದ ತಪ್ಪೇನು ಎಂದು ಪ್ರಶ್ನಿಸಿದರು. ಮುಸ್ಲಿಂ ಸಮುದಾಯದ ಕುರಿತು ರೇವಣ್ಣ ಕಳವಳ ವ್ಯಕ್ತಪಡಿಸಿದರು. ಮುಸ್ಲಿಂ ಮತದಾರರು ಇಲ್ಲದಿದ್ದರೆ ಕಾಂಗ್ರೆಸ್‌ಗೆ 136 ಸ್ಥಾನಗಳು ಸಿಕ್ಕುತ್ತಿರಲಿಲ್ಲ. ಆದರೆ ಈಗ ಭದ್ರತೆ ಇಲ್ಲ. ಬಿಜೆಪಿ ಕಾಲದಲ್ಲೂ ನೆಮ್ಮದಿ ಇರಲಿಲ್ಲ, ಕಾಂಗ್ರೆಸ್ ಅವಧಿಯಲ್ಲೂ ಅದೇ ಪರಿಸ್ಥಿತಿ ಎಂದು ಟೀಕಿಸಿದರು.

ಮಹಾನಗರ ಪಾಲಿಕೆ ಆಯುಕ್ತರನ್ನು ಕಡ್ಡಾಯ ರಜೆಗೆ ಕಳಿಸಿದ ವಿಷಯಕ್ಕೂ ಅವರು ಸ್ಪಷ್ಟನೆ ನೀಡಿದರು. ಜಿಲ್ಲಾಧಿಕಾರಿಯ ಹಠದಿಂದ ಹಾಸನದಲ್ಲಿ ಆಡಳಿತ ಅಸ್ತವ್ಯಸ್ತವಾಗಿದೆ. 15 ದಿನಗಳಿಂದ ಬಯೊಮೆಟ್ರಿಕ್ ದಾಖಲೆ ನೀಡಲು ಅಧಿಕಾರಿಗಳು ಲಭ್ಯರಿಲ್ಲ. ಉಪ ಜಿಲ್ಲಾಧಿಕಾರಿ ಹುದ್ದೆ ಭರ್ತಿಗೆ ಯಾರೂ ಮುಂದೆ ಬರದಂತಾಗಿದೆ ಎಂದು ಆರೋಪಿಸಿದರು.ಮಂಜುನಾಥ್ ಒಬ್ಬರೇ 14 ಹುದ್ದೆ ನಿಭಾಯಿಸುತ್ತಿದ್ದಾರೆ. ಅಬಕಾರಿ ಉಪ ಆಯುಕ್ತರು ಸಹ ಭಯದಿಂದ ತೆರಳಿದ್ದಾರೆ. ಜಿಲ್ಲಾಧಿಕಾರಿ ಜನಸೇವೆ ಬಿಟ್ಟು ಪ್ರದರ್ಶನದ ಕೆಲಸದಲ್ಲಿ ತೊಡಗಿದ್ದಾರೆ. ಬೈಕ್, ಸೈಕಲ್‌ನಲ್ಲಿ ತಿರುಗಾಡುವುದಕ್ಕಿಂತ ಸರ್ಕಾರ ಕೊಟ್ಟ ಕಾರಿನಲ್ಲಿ ಹೋಗಿ ಜನರ ಸಮಸ್ಯೆ ಬಗೆಹರಿಸಿ ಎಂದು ತೀವ್ರ ವಾಗ್ದಾಳಿ ನಡೆಸಿದರು