ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ದಿವಾಳಿಯ ಅಂಚಿಗೆ ತಂದಿದ್ದು ರಾಜ್ಯದ ಆರ್ಥಿಕ ಪರಿಸ್ಥಿತಿ ತೀರಾ ಶೋಚನೀಯ ಪರಿಸ್ಥಿತಿಯಲ್ಲಿ ಇದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಚ್.ಎನ್. ಚಂದ್ರಶೇಖರ್ ಆರೋಪಿಸಿದರು. ನಗರರದ ಸಂಸದರ ಗೃಹ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷ ವತಿಯಿಂದ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ರವರ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಯ ಬಗ್ಗೆ ಚರ್ಚೆಗಳು ಆಗುತ್ತಿದೆಯೇ ಹೊರತು ರಾಜ್ಯದ ಅಭಿವೃದ್ಧಿಯ ಬಗ್ಗೆ ಯಾವುದೇ ಚರ್ಚೆ ಆಗುತ್ತಿಲ್ಲ ಎಂದರು.ಸಂಬಳ ನೀಡಲು ಹಣವಿಲ್ಲ
ರಾಜ್ಯದ ಹಣಕಾಸು ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂದರೆ ಸರ್ಕಾರಿ ನೌಕರರಿಗೆ ತಿಂಗಳ ವೇತನ ನೀಡಲು ಸಹ ಆಗದಂತಹ ಸ್ಥಿತಿಯಲ್ಲಿ ಇದೆ. ಕಾಂಗ್ರೆಸ್ ಪಕ್ಷದಿಂದ ಆಯ್ಕೆಗೊಂಡ ಶಾಸಕರುಗಳು ಒಳಗೊಂಡಂತೆ ಯಾವುದೇ ಪಕ್ಷದ ಶಾಸಕರಿಗೆ ಪ್ರದೇಶ ಅಭಿವೃದ್ಧಿ ಹಣ ಬಿಡುಗಡೆ ಮಾಡದೇ ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಗಳೆ ನಡೆದಿಲ್ಲ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರುಗಳ ನಡುವೆ ಕುರ್ಚಿ ಕಿತ್ತಾಟ ನಡೆಯುತ್ತಿದೆ. ಬಿಹಾರ್ ವಿಧಾನಸಭಾ ಚುನಾವಣೆಗೆ ರಾಜ್ಯದಿಂದ ಸಾವಿರಾರು ಕೋಟಿ ರು.ಗಳನ್ನು ಹೊಂದಿಸುವಲ್ಲಿ ರಾಜ್ಯ ಸರ್ಕಾರದ ಮಂತ್ರಿಗಳು ನಿರತರಾಗಿದ್ದಾರೆ. ಇವರುಗಳಿಗೆ ಬಡವರ ಬಗ್ಗೆ ಆಗಲಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಆಗಲಿ ಕಿಂಚಿತ್ತು ಕಾಳಜಿ ಇಲ್ಲ ಎಂದರು.
ಸಮರ್ಥ ಪ್ರತಿಪಕ್ಷವಾಗಿ ಕಾರ್ಯರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ವಿರೋಧಪಕ್ಷವಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ. ಹೀಗೆ ಕಾರ್ಯನಿರ್ವಹಿಸುತ್ತಿರುವದರಿಂದ ಸರ್ಕಾರದ ಭ್ರಷ್ಟಾಚಾರವನ್ನು ರಾಜ್ಯದ ಜನತೆಯ ಮುಂದಿಡಲು ಸಹಾಯ ಆಗುತ್ತಿದೆ. ಅಲ್ಲದೆ ಭಾರತೀಯ ಜನತಾ ಪಕ್ಷದಲ್ಲಿ ಈ ಹಿಂದೆ ಪ್ರಭಾವಿಗಳು ಎನಿಸಿಕೊಂಡಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಕೆ.ಎಸ್.ಈಶ್ವರಪ್ಪ ರವರುಗಳು ತಾವು ಮಾಡಿದ ಸ್ವಯಂಕೃತ ಅಪರಾಧದಿಂದಲೇ ಅವರು ಪಕ್ಷಕ್ಕೆ ದೂರವಾದರೂ ಇದರಲ್ಲಿ ಭಾರತೀಯ ಜನತಾ ಪಕ್ಷದ ಲೋಪ ದೋಷಗಳು ಏನು ಇಲ್ಲ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸೀಕಲ್ ರಾಮಚಂದ್ರಗೌಡ ಮಾತನಾಡಿ, 2028ರ ಚುನಾವಣೆಯ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ಖಚಿತವಾಗಿಯೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರಾವರಿ ಯೋಜನೆಯಿಂದ ಆಗಲಿ ಕೃಷ್ಣ ನೀರು ಆಂಧ್ರದಿಂದ ತರುವ ಪ್ರಯತ್ನ ವಾಗಲಿ ಖಚಿತವಾಗಿ ಆಗುತ್ತದೆ ಅದೇ ರೀತಿ ಹೆಚ್ ಎನ್ ವ್ಯಾಲಿ ಮೂರನೇ ಹಂತದ ಪರಿಷ್ಕರಣೆ ಸಹ ಆಗುತ್ತದೆ ಎಂದರು.ರೈತನಿಗೆ ವಂಚನೆ ಪ್ರಕರಣ
ಬಿಜೆಪಿ ರೈತಪರ ಪಕ್ಷ ಆಗಿದೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೋಳ ಬೆಳೆದ ರೈತರೊಬ್ಬರಿಗೆ ಕೋಟ್ಯಂತರರು ನಷ್ಟ ಆಗಿದೆ. ಅವರಿಗೆ ನಷ್ಟ ಪರಿಹಾರ ಕೊಡಿಸಲು ಹಾಗೂ ತಪ್ಪಿತಸ್ಥರನ್ನು ಕಾನೂನು ವಶಕ್ಕೆ ಒಳಪಡಿಸಲು ಬಿಜೆಪಿ ಹೋರಾಟ ಹಮ್ಮಿಕೊಳ್ಳುತ್ತದೆ ಎಂದರು. ಸುದ್ದಿ ಗೋಷ್ಠಿಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಚ್ ಕೆ ಮುರಳಿಧರ್, ಮಧುಸೂರ್ಯನಾರಾಯಣ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಮರುಳಕುಂಟೆ ಕೃಷ್ಣಮೂರ್ತಿ, ನಗರ ಯೋಜನೆ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಜಿಲ್ಲಾ ಕಾರ್ಯದರ್ಶಿ ಆರ್.ಎನ್. ಅಶೋಕ್ ಹಾಗೂ ಮುಖಂಡರು ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))