ಜಾಗತಿಕ ಸ್ಪರ್ಧೆಯಲ್ಲಿ ನಮ್ಮ ಮಕ್ಕಳು ಹಿಂದೆ ಬೀಳದಂತೆ ಶೈಕ್ಷಣಿಕ ವ್ಯವಸ್ಥೆ ಗಟ್ಟಿ

| Published : Jul 08 2024, 12:45 AM IST

ಜಾಗತಿಕ ಸ್ಪರ್ಧೆಯಲ್ಲಿ ನಮ್ಮ ಮಕ್ಕಳು ಹಿಂದೆ ಬೀಳದಂತೆ ಶೈಕ್ಷಣಿಕ ವ್ಯವಸ್ಥೆ ಗಟ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ಕಾಲ ಇಂದು ಬದಲಾಗಿದೆ. ಜಗತ್ತು ವೇಗವಾಗಿ ಹೆಜ್ಜೆ ಹಾಕುತ್ತಿದ್ದು, ಪ್ರತಿಯೊಂದರಲ್ಲಿಯೂ ಸಹ ಸ್ಪರ್ಧೆ ಏರ್ಪಟ್ಟಿದೆ. ಜಾಗತಿಕ ಸ್ಪರ್ಧೆಯಲ್ಲಿ ನಮ್ಮ ತಾಲೂಕಿನ ಮಕ್ಕಳು, ವಿದ್ಯಾರ್ಥಿಗಳು, ಯುವಕರು ಹಿಂದೆ ಬೀಳಬಾರದು. ಈ ನಿಟ್ಟಿನಲ್ಲಿ ಕಳಕಳಿಯಿಂದ ಕೆಲಸ ಮಾಡಲಾಗುತ್ತಿದ್ದು, ಶೈಕ್ಷಣಿಕ ವ್ಯವಸ್ಥೆ ಗಟ್ಟಿಗೊಳಿಸಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಹಾನಗಲ್ಲ: ಕಾಲ ಇಂದು ಬದಲಾಗಿದೆ. ಜಗತ್ತು ವೇಗವಾಗಿ ಹೆಜ್ಜೆ ಹಾಕುತ್ತಿದ್ದು, ಪ್ರತಿಯೊಂದರಲ್ಲಿಯೂ ಸಹ ಸ್ಪರ್ಧೆ ಏರ್ಪಟ್ಟಿದೆ. ಜಾಗತಿಕ ಸ್ಪರ್ಧೆಯಲ್ಲಿ ನಮ್ಮ ತಾಲೂಕಿನ ಮಕ್ಕಳು, ವಿದ್ಯಾರ್ಥಿಗಳು, ಯುವಕರು ಹಿಂದೆ ಬೀಳಬಾರದು. ಈ ನಿಟ್ಟಿನಲ್ಲಿ ಕಳಕಳಿಯಿಂದ ಕೆಲಸ ಮಾಡಲಾಗುತ್ತಿದ್ದು, ಶೈಕ್ಷಣಿಕ ವ್ಯವಸ್ಥೆ ಗಟ್ಟಿಗೊಳಿಸಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.ತಾಲೂಕಿನ ಶೀಗಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ, ನಾನಾ ಪಠ್ಯೇತರ ಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿನ ೫೨ ಸರ್ಕಾರಿ ಶಾಲೆಗಳನ್ನು ಸ್ಮಾರ್ಟ್ ಶಾಲೆಗಳನ್ನಾಗಿ ಪರಿವರ್ತಿಸಲಾಗಿದೆ. ಹೊಸ ಪದ್ಧತಿಯ ಶಿಕ್ಷಣವನ್ನು ನಮ್ಮ ತಾಲೂಕಿನ ವಿದ್ಯಾರ್ಥಿಗಳೂ ಕೂಡ ಪಡೆಯಬೇಕು ಎನ್ನುವ ಉದ್ದೇಶ ಹೊಂದಲಾಗಿದೆ. ಸರ್ಕಾರಿ ಶಾಲೆಗಳಿಗೆ ಮೂಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕೈಗೆತ್ತಿಕೊಂಡಿರುವ ವಿನೂತನ ಯೋಜನೆ ಯಶಸ್ಸು ಕಾಣುತ್ತಿದೆ. ಶಾಲೆಯ ಹಳೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಜೊತೆಗೂಡಿ ಸಂಗ್ರಹಿಸುವ ಹಣದಷ್ಟು ಹಣವನ್ನು ತಾವೂ ಸಹ ವೈಯಕ್ತಿಕವಾಗಿ ನೀಡುತ್ತಿದ್ದು, ಇದರಿಂದ ಮೂಲಸೌಲಭ್ಯ ಒದಗಿಸಲು ಸಾಧ್ಯವಾಗಿದೆ. ಕಳೆದ ಒಂದು ವರ್ಷದಲ್ಲಿ ೨೫ ಶಾಲೆಗಳಿಗೆ ಈ ಯೋಜನೆಯಡಿ ೨೫ ಲಕ್ಷ ರು. ವೆಚ್ಚದಲ್ಲಿ ಮೂಲಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದ ಅವರು ಸಂಘ, ಸಂಸ್ಥೆಗಳ ಸಹಕಾರದೊಂದಿಗೆ ಇಂಥ ಹಲವು ಯೋಜನೆ, ಕಾರ್ಯಕ್ರಮ ರೂಪಿಸಲಾಗುತ್ತಿದ್ದು, ಶಿಕ್ಷಕರು ಕಳಕಳಿಯಿಂದ ಕಾರ್ಯ ನಿರ್ವಹಿಸಲು ಆಸಕ್ತಿ ಪ್ರದರ್ಶಿಸಬೇಕಿದೆ ಎಂದರು. ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಸ್. ಗುಂಡಪಲ್ಲಿ ಮಾತನಾಡಿ, ಸರ್ಕಾರಿ ಶಾಲೆಯ ಮಕ್ಕಳೂ ಸಹ ಖಾಸಗಿ ಶಾಲೆಯ ಮಕ್ಕಳಂತೆ ಕಲಿಯಬೇಕು. ಪ್ರಸ್ತುತ ಸ್ಮಾರ್ಟ್ ಶಿಕ್ಷಣದ ಪ್ರಾಮುಖ್ಯತೆ ಹೆಚ್ಚಿದೆ. ತಾಲೂಕಿನ ಸರ್ಕಾರಿ ಶಾಲೆಗಳು ಸ್ಮಾರ್ಟ್ ಶಾಲೆಗಳಾಗುತ್ತಿದ್ದು, ಈ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದರು.

ಗ್ರಾಪಂ ಅಧ್ಯಕ್ಷೆ ಪುಷ್ಪಾ ಹೆಡಮೇಸ್ತ್ರಿ, ಉಪಾಧ್ಯಕ್ಷೆ ಲತಾ ಜಾಡಬಡಿಗೇರ, ಸದಸ್ಯ ಪ್ರಕಾಶ ನಂದಿಹಳ್ಳಿ, ಬಿಆರ್‌ಪಿ ನಾಗೇಂದ್ರಪ್ಪ, ಸಿಆರ್‌ಪಿ ನಾಗರಾಜ ಸಿಂಗಾಪೂರ, ಎಸ್‌ಡಿಎಂಸಿ ಅಧ್ಯಕ್ಷ ಶಂಭುಲಿಂಗಪ್ಪ ನರೇಗಲ್, ಉಪಾಧ್ಯಕ್ಷೆ ಸುನಿತಾ ಉಳ್ಳಾಗಡ್ಡಿ ಸೇರಿದಂತೆ ಗ್ರಾಪಂ ಮತ್ತು ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಭಾಗವಹಿಸಿದ್ದರು.

ಜಾಗತಿಕ ಸ್ಪರ್ಧೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಹಾಗಾಗಿ ಹಾನಗಲ್ ತಾಲೂಕಿನಲ್ಲಿ ಸರ್ಕಾರಿ ಶಾಲೆಗಳನ್ನು ಸ್ಮಾರ್ಟ್ ಶಾಲೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಶೈಕ್ಷಣಿಕ ಗುಣಮಟ್ಟವನ್ನೂ ಸುಧಾರಿಸಲು ಗಮನ ಹರಿಸಲಾಗಿದೆ. ಸರ್ಕಾರದ ಅನುದಾನಕ್ಕೆ ಕಾಯದೇ ಸಮುದಾಯದ ಸಹಭಾಗಿತ್ವದಲ್ಲಿ ಮೂಲಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.