ಸಾರಾಂಶ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಕಾನೂನು ಬಾಹಿರ, ಸಿದ್ದರಾಮಯ್ಯ ಅವರ ಸರ್ಕಾರದ ಇಡೀ ಸಂಪುಟ ಸಭೆಯು ಕಳ್ಳರ ಗ್ಯಾಂಗ್ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಗಂಭೀರವಾದ ಆರೋಪ ಮಾಡಿದರು.
ಲಕ್ಷ್ಮೇಶ್ವರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಕಾನೂನು ಬಾಹಿರ, ಸಿದ್ದರಾಮಯ್ಯ ಅವರ ಸರ್ಕಾರದ ಇಡೀ ಸಂಪುಟ ಸಭೆಯು ಕಳ್ಳರ ಗ್ಯಾಂಗ್ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಗಂಭೀರವಾದ ಆರೋಪ ಮಾಡಿದರು.
ಅವರು ಸಮೀಪದ ಹುಲ್ಲೂರ ಗ್ರಾಮದಲ್ಲಿ ಅಮೋಘ ಸಿದ್ದೇಶ್ವರ ನೂತನ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ವೇಳೆ ಪಟ್ಟಣದ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಡಿಕೆಶಿ ಮೇಲಿನ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧ ಪಟ್ಟಂತೆ ಸಿಬಿಐಗೆ ವಹಿಸಿರುವ ಪ್ರಕರಣವನ್ನು ಸಿದ್ದರಾಮಯ್ಯ ಅವರ ಸಚಿವ ಸಂಪುಟವು ವಾಪಸ್ ತೆಗೆದುಕೊಳ್ಳಲು ನಿರ್ಣಯ ತೆಗೆದುಕೊಂಡಿರುವುದು ಕಾಂಗ್ರೆಸ್ ಅವನತಿಯ ಸೂಚಕವಾಗಿದೆ. ಅದಕ್ಕಾಗಿ ಸಿದ್ದರಾಮಯ್ಯ ಸರ್ಕಾರದ ಇಡೀ ಸಚಿವ ಸಂಪುಟ ಕಳ್ಳರ ಗ್ಯಾಂಗ್ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಹಾಗೂ ಎಚ್. ಕೆ. ಪಾಟೀಲ ಅವರು ಕಾನೂನಿನ ಜ್ಞಾನವುಳ್ಳವರು, ಅವರು ಹೇಳಲಿ ನೋಡೋಣ, ಸಿಬಿಐಗೆ ವಹಿಸಿರುವ ಪ್ರಕರಣವನ್ನು ವಾಪಸ್ ತೆಗೆದುಕೊಳ್ಳುತ್ತಿರುವ ದೇಶದಲ್ಲಿ ಮೊದಲ ಪ್ರಕರಣ ಇದು. ಪ್ರಕರಣದ ತನಿಖೆ ಶೇ. 80ರಷ್ಟು ಮುಗಿದಿರುವ ಸಂದರ್ಭದಲ್ಲಿ ಪ್ರಕರಣ ತಡೆಹಿಡಿಯಲು ಡಿಕೆಶಿ ಅವರು ಕೋರ್ಟಿಗೆ ಹೋಗಿ ಬಂದಿದ್ದಾರೆ. ಎಲ್ಲ ಕೋರ್ಟುಗಳಲ್ಲಿ ಅದು ತಿರಸ್ಕೃತವಾಗಿದೆ ಎಂದರು.ಡಿ.ಕೆ.ಶಿವಕುಮಾರ ಅವರು ₹ 163 ಕೋಟಿ ಅಕ್ರಮ ಆಸ್ತಿಗಳಿಕೆ ಮಾಡಿಕೊಂಡಿದ್ದಾರೆ. ಐದು ವರ್ಷದಲ್ಲಿ 140 ಕೋಟಿ ರು. ಹೆಚ್ಚುವರಿ ಆಸ್ತಿ ಮಾಡಿಕೊಂಡಿರುವ ಪ್ರಕರಣವನ್ನು ಸಿಬಿಐ ಎತ್ತಿ ತೋರಿಸಿದೆ. ಅಕ್ರಮವಾಗಿ ಲೂಟಿ ಮಾಡಿ ಆಸ್ತಿ ಮಾಡಿಕೊಂಡಿರುವ ಪ್ರಕರಣವನ್ನು ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಟೀಕಿಸಿದರು.ಸಿಬಿಐಗೆ ವಹಿಸಿದ್ದ ಪ್ರಕರಣವನ್ನು ವಾಪಸ್ ಪಡೆಯುವುದರ ವಿರುದ್ಧ ಬಿಜೆಪಿ ಕೋರ್ಟಿಗೆ ಹೋಗುವ ಕಾರ್ಯ ಮಾಡುತ್ತೇವೆ ಎಂದು ಹೇಳಿದ ಅವರು, ಬಿಜೆಪಿದಲ್ಲಿ ಅಧ್ಯಕ್ಷ ಹುದ್ದೆಯ ಕೆಲ ಆಕಾಂಕ್ಷಿಗಳು ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವುದು ಸಹಜ, ಪಕ್ಷದ ಹಿರಿಯರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದೆ ಹೋಗುತ್ತಾರೆ ಎನ್ನುವ ವಿಶ್ವಾಸ ನಮ್ಮದಾಗಿದೆ ಎಂದರು. ಗ್ಯಾರಂಟಿ ಯೋಜನೆ ಒಂದೊಂದಾಗಿ ಹಳ್ಳ ಹಿಡಿಯುತ್ತಿವೆ. ಹೆಣ್ಣು ಮಕ್ಕಳು ಸಿದ್ದರಾಮಯ್ಯ ಅವರಿಗೆ ಕ್ಯಾಕರಿಸಿ ಉಗಿಯುವ ದಿನಗಳು ದೂರ ಇಲ್ಲ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಈ ವೇಳೆ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕಾಂತೇಶ್, ಚಂಬಣ್ಣ ಬಾಳಿಕಾಯಿ, ಸುನೀಲ ಮಹಾಂತಶೆಟ್ಟರ, ಸಿದ್ದನಗೌಡ ಬೊಳ್ಳೊಳ್ಳಿ, ಎಂ.ಆರ್. ಪಾಟೀಲ, ಗಂಗಾಧರ ಮೆಣಸಿನಕಾಯಿ, ದುಂಡೇಶ ಕೊಟಗಿ, ನೀಲಪ್ಪ ಕರ್ಜಕಣ್ಣವರ, ನಿಂಗಪ್ಪ ಬನ್ನಿ, ಕುಬೇರಪ್ಪ ಮಹಾಂತಶೆಟ್ಟರ, ಬಸವರಾಜ ಚಕ್ರಸಾಲಿ ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))