ರಾಮಾಯಣ ಮಹಾಕಾವ್ಯವು ಸಾಹಿತ್ಯ ಸೃಷ್ಟಿಗೆ ಪ್ರೇರಣೆ: ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ

| Published : Oct 18 2024, 12:08 AM IST

ರಾಮಾಯಣ ಮಹಾಕಾವ್ಯವು ಸಾಹಿತ್ಯ ಸೃಷ್ಟಿಗೆ ಪ್ರೇರಣೆ: ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಭಗವಾನ್ ವಿಷ್ಣುವಿನ ಎಂಟು ಅವತಾರಗಳ ಕಥೆಯನ್ನು ಹೇಳುತ್ತದೆ. ವಾಲ್ಮೀಕಿ ಅವರನ್ನು ಭಾರತ ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಮೂಲತಃ ವಾಲ್ಮೀಕಿ ಬರೆದ ರಾಮಾಯಣವು 24 ಸಾವಿರ ಶ್ಲೋಕಗಳನ್ನು ಒಳಗೊಂಡಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಮಹರ್ಷಿ ವಾಲ್ಮೀಕಿ ಬರೆದಿರುವ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ ತಿಳಿಸಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿ, ವಿಶ್ವಕ್ಕೆ ರಾಮಾಯಣ ಎಂಬ ಅತಿದೊಡ್ಡ ಕಾವ್ಯವನ್ನು ವಾಲ್ಮೀಕಿ ಕೊಡುಗೆಯಾಗಿ ನೀಡಿದ್ದಾರೆ. ರಾಮಾಯಣದಲ್ಲಿ ಒಳಗೊಂಡಿರುವ ಮಾನವೀಯ ಮೌಲ್ಯ ಮತ್ತು ಆದರ್ಶಗಳು ಅಪಾರವಾಗಿವೆ. ನಿಸರ್ಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಹರ್ಷಿ ವಾಲ್ಮೀಕಿ ಅವರಲ್ಲಿ ಕವಿತ್ವ ಭಾವನೆ ಇತ್ತು. ರಾಮಾಯಣ ಎಂಬ ಮಹಾಕಾವ್ಯವು ಇವರ ಕವಿತ್ವ ಭಾವನೆಯ ಕೊಡುಗೆಯಾಗಿದೆ ಎಂದು ಹೇಳಿದರು.

ಭಗವಾನ್ ವಿಷ್ಣುವಿನ ಎಂಟು ಅವತಾರಗಳ ಕಥೆಯನ್ನು ಹೇಳುತ್ತದೆ. ವಾಲ್ಮೀಕಿ ಅವರನ್ನು ಭಾರತ ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಮೂಲತಃ ವಾಲ್ಮೀಕಿ ಬರೆದ ರಾಮಾಯಣವು 24 ಸಾವಿರ ಶ್ಲೋಕಗಳನ್ನು ಒಳಗೊಂಡಿದೆ. ರಾಮಾಯಣವು ಸುಮಾರು 480,002 ಪದಗಳಿಂದ ಕೂಡಿದೆ. ರಾಮಾಯಣ ಮಹಾಕಾವ್ಯವನ್ನು ಪ್ರತಿಯೊಬ್ಬರೂ ಓದಿ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು.

ಗ್ಯಾರಂಟಿ ಯೋಜನೆ ಅನುಷ್ಠಾನದ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿಪಿ ರಾಜು, ಪುರಸಭೆ ಸದಸ್ಯರಾದ ಎಂ.ಎನ್ ಶಿವಸ್ವಾಮಿ, ಎಂ.ಆರ್. ರಾಜಶೇಖರ್, ತಾಪಂ ಮಾಜಿ ಉಪಾಧ್ಯಕ್ಷ ಮಾರ್ಕಾಲು ಮಧು, ಟಿಎಪಿಸಿಎಂಎಸ್ ಅಧ್ಯಕ್ಷ ಬಸವರಾಜು, ಮುಖಂಡರಾದ ಆಯುಬ್‌ಪಾಷ, ಬಸವರಾಜು, ನಂಜುಂಡಯ್ಯ, ದಶರಥ, ಶ್ರೀನಿವಾಸ್, ಆನಂದ್, ಶಿವರಾಜ್, ಕರಿಯಪ್ಪ ಸೇರಿದಂತೆ ಇತರರು ಇದ್ದರು.