ಜೆಎಸ್‌ಎಸ್ ರಂಗೋತ್ಸವ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಮುಖ್ಯ ಭೂಮಿಕೆಯಾಗಿದ್ದು, ಕಲೆ, ಸಂಸ್ಕೃತಿ ಹಾಗು ಶಿಕ್ಷಣ ಕ್ಷೇತ್ರಕ್ಕೆ ಜೆಎಸ್‌ಎಸ್ ಸಂಸ್ಥೆ ಕೊಡುಗೆ ಅಪಾರ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅಭಿಪ್ರಾಯಪಟ್ಟರು.
ಜೆಎಸ್‌ಎಸ್ ರಂಗೋತ್ಸವ ಸಮಾರೋಪದಲ್ಲಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ । ಕಲೆ,ಸಂಸ್ಕೃತಿ ಹಾಗು ಶಿಕ್ಷಣ ಕ್ಷೇತ್ರಕ್ಕೆ ಜೆಎಸ್‌ಎಸ್ ಸಂಸ್ಥೆ ಕೊಡುಗೆ ಅಪಾರ
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆಜೆಎಸ್ಎಸ್ ರಂಗೋತ್ಸವ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಮುಖ್ಯ ಭೂಮಿಕೆಯಾಗಿದ್ದು, ಕಲೆ, ಸಂಸ್ಕೃತಿ ಹಾಗು ಶಿಕ್ಷಣ ಕ್ಷೇತ್ರಕ್ಕೆ ಜೆಎಸ್‌ಎಸ್ ಸಂಸ್ಥೆ ಕೊಡುಗೆ ಅಪಾರ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅಭಿಪ್ರಾಯಪಟ್ಟರು.
ಪಟ್ಟಣದ ಜೆಎಸ್‌ಎಸ್ ಅನುಭವ ಮಂಟಪದಲ್ಲಿ ಜೆಎಸ್‌ಎಸ್ ಮಹಾವಿದ್ಯಾಪೀಠ, ಜೆಎಸ್‌ಎಸ್ ಕಲಾಮಂಟಪ ಹಾಗೂ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ಮೂರು ದಿನಗಳ ಕಾಲ ಜೆಎಸ್‌ಎಸ್ ರಂಗೋತ್ಸವ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸುತ್ತೂರು ಮಠ ಧಾರ್ಮಿಕವಾಗಿ ತನ್ನದೆ ಆದ ಇತಿಹಾಸವನ್ನು ಹೊಂದಿದೆ. ಮಾನವ ಸಮಾಜದ ಉದ್ಧಾರಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಸಂಸ್ಕಾರವಂತರಾಗಿ ರೂಪುಗೊಂಡಿದ್ದಾರೆ ಎಂದರು.
ವಿದ್ಯಾರ್ಥಿಗಳು ಧಾರ್ಮಿಕ ಪ್ರಜ್ಞೆಯೊಂದಿಗೆ ಸಾಮಾಜಿಕ ಜವಾಬ್ದಾರಿ ಮೈಗೂಡಿಸಿಕೊಳ್ಳುವ ಮೂಲಕ ಉತ್ತಮ ನಾಗರೀಕರಾಗುತ್ತಿದ್ದಾರೆ. ಈ ಮೂರು ದಿನಗಳು ನಡೆದ ನಾಟಕಗಳು ಉತ್ತಮವಾಗಿ ಮೂಡಿಬಂದಿವೆ.ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುವ ಕಥಾವಸ್ತುವನ್ನು ಒಳಗೊಂಡಿದ್ದವು ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತ ಮಾತನಾಡಿ, ಜೆಎಸ್‌ಎಸ್ ಸಂಸ್ಥೆಯು ಶಿಕ್ಷಣಕ್ಕೆ ಮಾತ್ರ ಸೀಮಿತಗೊಳಿಸಿಕೊಳ್ಳದೆ ಸಾಂಸ್ಕೃತಿಕ ಹಾಗು ಧಾರ್ಮಿಕ ಕ್ಷೇತ್ರಕ್ಕೆ ಮಹತ್ತರವಾದ ಕೊಡುಗೆ ನೀಡುತ್ತಾ ಬಂದಿದೆ. ಸುತ್ತೂರು ಮಠ ಈ ಭಾಗದ ಜನರ ಅಭಿವೃದ್ದಿಗಾಗಿ ಶ್ರಮಿಸುತ್ತಿದೆ ಎಂದರು.
ಸುತ್ತೂರು ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ರಾಜೇಂದ್ರ ಮಹಾಸ್ವಾಮೀಜಿ ಅವರ ಹಾದಿಯಲ್ಲಿ ನಡೆಯುತ್ತಿದ್ದು ಶ್ರೀಮಠದ ಕೀರ್ತಿಯನ್ನು ಜಗದಗಲ ವಿಸ್ತರಿಸಿರುವುದು ನಮ್ಮ ನಾಡಿನ ಹೆಮ್ಮೆ ಎಂದರು.ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅನಾವರಣಕ್ಕೆ ರಂಗೋತ್ಸವ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದ್ದು, ಈ ಮೂಲಕ ಸಾಂಸ್ಕೃತಿಕ ರಂಗದಲ್ಲಿ ಬೆಳೆಯುವ ಅವಕಾಶವನ್ನು ವಿದ್ಯಾರ್ಥಿಗಳು ತಾವಾಗಿಯೇ ಕಲ್ಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಅಧ್ಯಕ್ಷ ರವಿ ಮಾತನಾಡಿದರು. ಜೆಎಸ್‌ಎಸ್ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲೆ ಡಾ. ಮಹದೇವಮ್ಮ,ಜೆಎಸ್‌ಎಸ್ ಪದವಿ ಕಾಲೇಜಿನ ಪ್ರಾಂಶುಪಾಲ ಮಲ್ಲಪ್ಪ,ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಯಶೋಧ ಪಿ, ನಾಟಕಗಳ ಸಂಗೀತ ನಿರ್ದೇಶಕ ಚಂದ್ರಶೇಖರಾಚಾರ್,ಜೆಎಸ್‌ಎಸ್ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಚ್.ಪಿ. ಪಶುಪತಿ,ಗ್ರಂಥ ಪಾಲಕ ಡಿ.ಬಿ ಗಿರೀಶ್ ಕುಮಾರ್ ಹಾಗೂ ಮಠದ ಸದ್ಭಕ್ತರು,ಸಾರ್ವಜನಿಕರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು,ಅಧ್ಯಾಪಕರು,ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
೧ಜಿಪಿಟಿ೧ಗುಂಡ್ಲುಪೇಟೆಯಲ್ಲಿ ಜೆಎಸ್‌ಎಸ್ ರಂಗೋತ್ಸವ ಸಮಾರೋಪ ಸಮಾರಂಭದಲ್ಲಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮಾತನಾಡಿದರು.