ಸಾರಾಂಶ
7ನೇ ಹೊಸಕೋಟೆ ಮಹಾಗಣಪತಿ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಉತ್ಸವ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವ ಅದ್ಧೂರಿಯಾಗಿ ನೆರವೇರಿತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
7ನೇ ಹೊಸಕೋಟೆಯ ಮಹಾಗಣಪತಿ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಉತ್ಸವ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವವು ಸಂಜೆ ಅದ್ಧೂರಿಯಾಗಿ ವಿವಿಧ ಪೂಜಾ ವಿಧಿ ವಿಧಾನಗಳೊಂದಿಗೆ ನೆರವೇರಿತು.ವಿದ್ಯುತ್ ದೀಪ ಅಲಂಕಾರ ಮಂಟಪದಲ್ಲಿ ಗೌರಿ ಗಣೇಶ ಉತ್ಸವ ಮೂರ್ತಿಯ ಮೆರವಣಿಗೆಯೊಂದಿಗೆ ನಗಾರಿ, ಹುಲಿ ವೇಷದೊಂದಿಗೆ ದೇವಾಲಯದಿಂದ ಹೊರಟು ಮೆಟ್ನಳ್ಳದವರೆಗೆ ಸಾಗಿ ಅಲ್ಲಿಂದ ವಾಪಾಸಾಗಿ ಅದೇ ಮಾರ್ಗವಾಗಿ ಏಳನೇ ಹೊಸಕೋಟೆಯ ಪ್ರಮುಖ ಬೀದಿಗಳಲ್ಲಿ ಭಕ್ತಾಧಿಗಳ ಪೂಜೆಯೊಂದಿಗೆ ಸಾಗಿ ನಂತರ 7ನೇ ಹೊಸಕೋಟೆ ಕೆರೆಯಲ್ಲಿ ವಿಸರ್ಜಿಸಲಾಯಿತು.ದಾಸಂಡ ರಮೇಶ್ ಚಂಗಪ್ಪ, ರಮೇಶ್, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಹಾಗೂ ಮತ್ತಿತರರು ಇದ್ದರು.