ಸಾರಾಂಶ
ಶಿಗ್ಗಾಂವಿ ತಾಲೂಕಿನ ಗೋಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಅಕ್ರಮ ನೇಮಕಾತಿಯನ್ನು ರದ್ದುಪಡಿಸಿ, ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಮತ್ತು ಮರು ನೇಮಕಾತಿಗೆ ಒತ್ತಾಯಿಸಿ ಕಳೆದ ಹನ್ನೆರಡು ದಿನಗಳಿಂದ ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಹೋರಾಟವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಭರವಸೆ ಮೇರೆಗೆ ಗುರುವಾರ ಅಂತ್ಯಗೊಳಿಸಲಾಯಿತು. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಅಕ್ರಮದ ಕುರಿತು ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೋರಾಟ ಅಂತ್ಯಗೊಳಿಸಲಾಯಿತು.
ಶಿಗ್ಗಾಂವಿ: ತಾಲೂಕಿನ ಗೋಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಅಕ್ರಮ ನೇಮಕಾತಿಯನ್ನು ರದ್ದುಪಡಿಸಿ, ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಮತ್ತು ಮರು ನೇಮಕಾತಿಗೆ ಒತ್ತಾಯಿಸಿ ಕಳೆದ ಹನ್ನೆರಡು ದಿನಗಳಿಂದ ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಹೋರಾಟವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಭರವಸೆ ಮೇರೆಗೆ ಗುರುವಾರ ಅಂತ್ಯಗೊಳಿಸಲಾಯಿತು.
ಗುರುವಾರ ನಮ್ಮ ಹೋರಾಟದ ನಿಯೋಗದೊಂದಿಗೆ ಬೆಳಗಾವಿಗೆ ತೆರಳಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರನ್ನು ಭೇಟಿ ಮಾಡಿ ಅಕ್ರಮದ ಕುರಿತಾದ ಸಮಗ್ರ ಮಾಹಿತಿಯುಳ್ಳ ದಾಖಲೆಯನ್ನು ಸಲ್ಲಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಸಚಿವರು, ಅಕ್ರಮದ ಕುರಿತು ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೋರಾಟ ಅಂತ್ಯಗೊಳಿಸಲಾಯಿತು.ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ ಪೌರಕಾರ್ಮಿಕರ ಮತ್ತು ಜನರಲ್ ವರ್ಕರ್ಸ್ ಯೂನಿಯನ್ ರಾಜ್ಯ ಅಧ್ಯಕ್ಷ ಡಾ. ವಿಜಯ ಎಂ. ಗುಂಟ್ರಾಳ ಬಸವರಾಜ್ ಗೋಬ್ಬಿ, ಮಂಜುನಾಥ್ ಹಾವೇರಿ ಮುತ್ತು ಗುಡಗೇರಿ ಶಿವಪ್ಪ ಅಳವಂಡಿ, ಮಹಾಂತೇಶ್ ಬಾರಕೇರ, ಮರಿಯಪ್ಪ ಬುಕನಟ್ಟಿ, ದೇವರಾಜ್ ದೊಡ್ಡಮನಿ, ಭೀಮಣ್ಣ ಮದರ್ ಮತ್ತಿತರರು ಉಪಸ್ಥಿತರಿದ್ದರು.