ಚನ್ನಗಿರಿ ತಾಲೂಕಿನ ಆಗರಬನ್ನಿಹಟ್ಟಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದಲೇ ಮಕ್ಕಳ ದಿನ ಕಾರ್ಯಕ್ರಮವನ್ನು ಶನಿವಾರ ಆಚರಣೆ ಮಾಡಲಾಯಿತು. ಅಧ್ಯಕ್ಷತೆಯನ್ನು 7ನೇ ತರಗತಿಯ ವಿದ್ಯಾರ್ಥಿನಿ ಬಿ.ಬಿ.ಹಾಜಿರ ವಹಿಸಿದ್ದರು.
- ಆಗರಬನ್ನಿಹಟ್ಟಿ ಉರ್ದು ಶಾಲೆ ಕಾರ್ಯಕ್ರಮದಲ್ಲಿ ಬಿ.ಜಿ.ಹಾಜಿರ
- - -ಚನ್ನಗಿರಿ: ತಾಲೂಕಿನ ಆಗರಬನ್ನಿಹಟ್ಟಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದಲೇ ಮಕ್ಕಳ ದಿನ ಕಾರ್ಯಕ್ರಮವನ್ನು ಶನಿವಾರ ಆಚರಣೆ ಮಾಡಲಾಯಿತು. ಅಧ್ಯಕ್ಷತೆಯನ್ನು 7ನೇ ತರಗತಿಯ ವಿದ್ಯಾರ್ಥಿನಿ ಬಿ.ಬಿ.ಹಾಜಿರ ವಹಿಸಿದ್ದರು.
ಬಿ.ಜಿ.ಹಾಜಿರ ಮಾತನಾಡಿ, ಪ್ರತಿವರ್ಷ ನ.14ರಂದು ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಹರಲಾಲ್ ನೆಹರು ಜನ್ಮ ದಿನಾಚರಣೆಯನ್ನು ಮಕ್ಕಳ ದಿನವಾಗಿ ಆಚರಣೆ ಮಾಡುತ್ತಿರುವುದು ಮಕ್ಕಳಾದ ನಮಗೆ ಹೆಮ್ಮೆಯ ವಿಚಾರವಾಗಿದೆ. ನೆಹರು ಅವರಿಗೆ ಮಕ್ಕಳೆಂದರೆ ಬಹಳ ಪ್ರೀತಿ. ಆದ್ದರಿಂದ ಮಕ್ಕಳಾದ ನಾವುಗಳು ಅವರನ್ನು ಪ್ರೀತಿಯಿಂದ ಚಾಚಾ ಎಂದು ಕರೆಯುತ್ತೇವೆ. ಅವರ ಹುಟ್ಟುಹಬ್ಬವನ್ನು ದೇಶಾದ್ಯಂತ ಮಕ್ಕಳ ದಿನವಾಗಿ ಆಚರಿಸಲಾಗುತ್ತಿದೆ ಎಂದರು.ಮಕ್ಕಳ ದಿನಾಚರಣೆ ಉದ್ದೇಶವೆಂದರೆ, ಮಕ್ಕಳ ಹಕ್ಕುಗಳು, ಅವರ ಶಿಕ್ಷಣ, ಆರೋಗ್ಯ ಹಾಗೂ ಸುಖಕರ ಭವಿಷ್ಯದ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುವುದಾಗಿದೆ. ಮಕ್ಕಳ ದಿನಾಚರಣೆ ಕೇವಲ ಆಚರಣೆಯ ಸಂಭ್ರಮಕ್ಕೆ ಸೀಮಿತವಾಗಿರದೇ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸುವ ಕಾರ್ಯಕ್ರಮ ಆಗಬೇಕಾಗಿದೆ. ಆ ನಿಟ್ಟಿನಲ್ಲಿ ನಮ್ಮ ಶಾಲೆ ಶಿಕ್ಷಕರು ಮಕ್ಕಳ ದಿನಾಚರಣೆ ಅಂಗವಾಗಿ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ ನಮ್ಮಲ್ಲಿರುವ ಪ್ರತಿಭೆಗಳನ್ನು ತೋರ್ಪಡಿಸಲು ಸೂಕ್ತವಾದ ವೇದಿಕೆ ನಿರ್ಮಾಣ ಮಾಡಿಕೊಟ್ಟಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿರು.
ಮುಖ್ಯ ಅತಿಥಿಗಳಾಗಿ ವಿದ್ಯಾರ್ಥಿಗಳಾದ ಅನಿಸಾ ಫಾತೀಮಾ, ಉಮೆಆಮಿ, ಸೈಯ್ಯದ್ ಅಬ್ರಾಹರ್, ನೂರೈಸ್ ಹಾಜರಿದ್ದರು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಮಹಬೂಬ್ ಖಾನ್, ಸದಸ್ಯರಾದ ಸೈಯ್ಯದ್ ಜಾಬೀರ್, ಯುಸೂಫ್ ಖಾನ್, ಮುಖ್ಯ ಶಿಕ್ಷಕ ಸೈಯ್ಯದ್ ಇಲ್ಯಾಸ್ ಅಹಮದ್, ಶಾಲೆ ಸಿಬ್ಬಂದಿ ಪ್ರೇಕ್ಷಕರಾಗಿ ಸಭೆಯಲ್ಲಿ ಭಾಗವಹಿಸಿದ್ದರು.ಮಕ್ಕಳ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ಭಾಗವಹಿಸಿದ್ದ ಎಲ್ಲ ವಿದ್ಯಾರ್ಥಿಗಳಿಗೂ ಬಹುಮಾನಗಳನ್ನು ವಿತರಣೆ ಮಾಡಲಾಯಿತು.
- - --15ಕೆಸಿಎನ್ಜಿ1:
ಚನ್ನಗಿರಿ ತಾಲೂಕಿನ ಆಗರಬನ್ನಿಹಟ್ಟಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದಲೇ ಮಕ್ಕಳ ದಿನ ಕಾರ್ಯಕ್ರಮ ಆಚರಿಸಲಾಯಿತು.