ಸಾರಾಂಶ
ಕನ್ನಡಪ್ರಭ ವಾರ್ತೆ ಖಾನಾಪುರ
ಮಹರ್ಷಿ ವಾಲ್ಮೀಕಿ ರಾಮಾಯಣದ ಪಾತ್ರಗಳಲ್ಲಿ ಬದುಕಿನ ಸೂತ್ರ ತೋರಿಸಿಕೊಟ್ಟಿದ್ದಾರೆ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು.ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಗುರುವಾರ ಸಮಾಜ ಕಲ್ಯಾಣ ಇಲಾಖೆ ಮತ್ತು ಪಟ್ಟಣ ಪಂಚಾಯತಿ ವತಿಯಿಂದ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾವಣನಂತಹ ಅಸುರನಲ್ಲಿರುವ ಉತ್ತಮ ಗುಣಗಳನ್ನು ಜಗತ್ತಿಗೆ ಪರಿಚಯಿಸಿದ್ದಾರೆ ಎಂದರು.
ನಂದಗಡದ ಮಹಾತ್ಮ ಗಾಂಧಿ ಕಾಲೇಜಿನ ಪ್ರಾಧ್ಯಾಪಕ ಡಾ.ಎಸ್.ಡಿ. ಕಟಗಿ ಉಪನ್ಯಾಸ ನೀಡಿದರು.ಕಾರ್ಯಕ್ರಮದ ಅಂಗವಾಗಿ ಕಳೆದ ವರ್ಷ ಜರುಗಿದ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಗಣ್ಯರು ಗೌರವಿಸಿದರು. ಜಿಟಿಜಿಟಿ ಮಳೆಯಲ್ಲೇ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ತಾಲೂಕುಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಿ.ಎಂ.ನಾಗನೂರ ಸ್ವಾಗತಿಸಿದರು. ಹಣಮಂತ ಬಿರಾದಾರ ಕಾರ್ಯಕ್ರಮ ನಿರ್ವಹಿಸಿದರು. ಗಿರೀಶ ಕುರಹಟ್ಟಿ ವಂದಿಸಿದರು.ವೇದಿಕೆಯ ಮೇಲೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಿಗೆ ಅವಕಾಶ: ದಲಿತ ಸಂಘಟನೆಗಳ ಆಕ್ರೋಶಖಾನಾಪುರದಲ್ಲಿ ಗುರುವಾರ ಜರುಗಿದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜೊತೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಿಗೆ ವೇದಿಕೆಯ ಮೇಲೆ ಆಸನ ವ್ಯವಸ್ಥೆ ಕಲ್ಪಿಸುವ ಮೂಲಕ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ವಿವಿಧ ದಲಿತಪರ ಸಂಘಟನೆಗಳು ಆರೋಪಿಸಿವೆ. ಕಾರ್ಯಕ್ರಮದಲ್ಲಿ ವಿವಿಧ ದಲಿತ ಸಂಘಗಳ ಪದಾಧಿಕಾರಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು. ಅವರೆಲ್ಲರನ್ನು ಕಡೆಗಣಿಸಿ ಬ್ಲಾಕ್ ಕಾಂಗೆಸ್ ಅಧ್ಯಕ್ಷರಿಗೆ ವೇದಿಕೆಯ ಮೇಲೆ ಶಾಸಕರು ಮತ್ತು ತಹಸೀಲ್ದಾರರ ಜೊತೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸುವ ಮೂಲಕ ಅಧಿಕಾರಿಗಳು ತಮ್ಮ ಮನಸ್ಸಿಗೆ ಬಂದಂತೆ ವರ್ತಿಸಿದ್ದಾರೆ ಎಂದು ಮಹರ್ಷಿ ವಾಲ್ಮೀಕಿ ಸಂಘದ ಮುಖಂಡ ಶಾನೂರ ಗುಡ್ಲಾರ ದೂರಿದರು.