ಪತ್ರಕರ್ತರಿಂದ ಸಮಾಜವನ್ನು ಎಚ್ಚರಿಸುವ ಕಾರ್ಯ: ಸದಾಶಿವ ಉಳ್ಳಾಲ್‌ ಆಶಯ

| Published : Nov 20 2024, 12:31 AM IST

ಪತ್ರಕರ್ತರಿಂದ ಸಮಾಜವನ್ನು ಎಚ್ಚರಿಸುವ ಕಾರ್ಯ: ಸದಾಶಿವ ಉಳ್ಳಾಲ್‌ ಆಶಯ
Share this Article
  • FB
  • TW
  • Linkdin
  • Email

ಸಾರಾಂಶ

ಹಿರಿಯ ಪತ್ರಿಕಾ ವಿತರಕ, ಮಂಗಳೂರಿನ ರೇಣುಕಾರಾಜ್‌ ನ್ಯೂಸ್‌ ಏಜೆನ್ಸಿಯ ನಾಗರಾಜ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ ಪತ್ರಿಕಾ ವಿತರಕರಾಗಿರುವ ನಮ್ಮಂತವರನ್ನು ಗುರುತಿಸಿ ಸನ್ಮಾನಿಸಿರುವುದು ಅತೀವ ಸಂತಸ ತಂದಿದೆ ಎಂದು ಅವರು ಹೇಳಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ನಗರದ ಪತ್ರಿಕಾ ಭವನದಲ್ಲಿಮಂಗಳವಾರ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ನಗರಾಭಿವವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್‌ ಮಾತನಾಡಿ, ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಪತ್ರಕರ್ತರು ಸಮಾಜವನ್ನು ಕಾಲಕಾಲಕ್ಕೆ ಎಚ್ಚರಿಸುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ದಿನ ನಿತ್ಯದ ಆಗುಹೋಗುಗಳನ್ನು ಜನರಿಗೆ ತಲುಪಿಸುವ ಮಾಧ್ಯಮದ ಬಗ್ಗೆ ಸಮಾಜದಲ್ಲಿ ಗೌರವದ ಸ್ಥಾನವಿದೆ ಎಂದರು.ಹಿರಿಯ ಪತ್ರಿಕಾ ವಿತರಕ, ಮಂಗಳೂರಿನ ರೇಣುಕಾರಾಜ್‌ ನ್ಯೂಸ್‌ ಏಜೆನ್ಸಿಯ ನಾಗರಾಜ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ ಪತ್ರಿಕಾ ವಿತರಕರಾಗಿರುವ ನಮ್ಮಂತವರನ್ನು ಗುರುತಿಸಿ ಸನ್ಮಾನಿಸಿರುವುದು ಅತೀವ ಸಂತಸ ತಂದಿದೆ ಎಂದು ಅವರು ಹೇಳಿದರು.ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಮಾತನಾಡಿ, ಸುದ್ದಿಯನ್ನು ಪರಿಶೀಲನೆ ನಡೆಸದೆ ನೇರವಾಗಿ ನವ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದು ಈಗ ನಡೆಯುತ್ತಿದ್ದು, ಕರ್ನಾಟಕ ಸರ್ಕಾರ ಇದನ್ನು ತಡೆಯಲು ಒಂದು ಹೊಸ ಕಾಯ್ದೆಯನ್ನು ಜಾರಿ ಮಾಡಿದೆ ಎಂದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಇದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ನಿರೂಪಿಸಿದರು.ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದ ಪತ್ರಕರ್ತ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಭುವನೇಂದ್ರ ಪುದುವೆಟ್ಟು ಅವರಿಗೆ ಸಮಾರಂಭಕ್ಕೆ ಮುನ್ನ ಮೌನ ಪ್ರಾರ್ಥನೆಯೊಂದಿಗೆ ಸಂತಾಪ ಸೂಚಿಸಲಾಯಿತು.