ಜ್ಞಾನವನ್ನು ಕೌಶಲ್ಯವನ್ನಾಗಿ ಪರಿವರ್ತಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು

| Published : Feb 05 2025, 12:31 AM IST

ಜ್ಞಾನವನ್ನು ಕೌಶಲ್ಯವನ್ನಾಗಿ ಪರಿವರ್ತಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳು ಕಷ್ಟಪಟ್ಟು ಓದದೇ ಇಷ್ಟ ಪಟ್ಟು ಓದಬೇಕು. ಪಡೆದ ಶಿಕ್ಷಣವನ್ನು ಜ್ಞಾನವನ್ನಾಗಿ, ಜ್ಞಾನವನ್ನು ಕೌಶಲ್ಯವನ್ನಾಗಿ ಪರಿವರ್ತಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ರಾಣಿಬೆನ್ನೂರಿನ ತರಳಬಾಳು ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎಂ.ಈ. ಶಿವಕುಮಾರ ಹೇಳಿದರು.

ಹಿರೇಕೆರೂರು:ವಿದ್ಯಾರ್ಥಿಗಳು ಕಷ್ಟಪಟ್ಟು ಓದದೇ ಇಷ್ಟ ಪಟ್ಟು ಓದಬೇಕು. ಪಡೆದ ಶಿಕ್ಷಣವನ್ನು ಜ್ಞಾನವನ್ನಾಗಿ, ಜ್ಞಾನವನ್ನು ಕೌಶಲ್ಯವನ್ನಾಗಿ ಪರಿವರ್ತಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ರಾಣಿಬೆನ್ನೂರಿನ ತರಳಬಾಳು ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎಂ.ಈ. ಶಿವಕುಮಾರ ಹೇಳಿದರು.ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿ ಜೀವನದಲ್ಲಿ ಸಮಯ ಪರಿಪಾಲನೆ ಅತೀ ಮಹತ್ವದ್ದಾಗಿದೆ. ಅನಾವಶ್ಯಕವಾಗಿ ಸಮಯ ವ್ಯರ್ಥ ಮಾಡದೇ, ಅಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು. ಶ್ರಮದಿಂದ ವ್ಯಾಸಂಗ ಮಾಡಿ ಜ್ಞಾನ ಪಡೆದುಕೊಳ್ಳವ ಜತೆಗೆ ಸೃಜನಾತ್ಮಕತೆ ಹಾಗೂ ಕ್ರಿಯಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ನಿಮಗೆ ಸಿಗುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡು ಉನ್ನತ ಮಟ್ಟಕ್ಕೆ ಬೆಳೆಯಬೇಕು. ನಿಮ್ಮ ಆತ್ಮವಿಶ್ವಾಸ ವೃದ್ಧಿಸಿಕೊಂಡು ಪರಿಶ್ರಮದಿಂದ ಅಭ್ಯಾಸ ಮಾಡಿದಾಗ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಿ. ಮಹದೇವ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಕಷ್ಟಪಟ್ಟಾಗ ಭವಿಷ್ಯ ಉತ್ತಮವಾಗಲು ಸಾಧ್ಯವಾಗುತ್ತದೆ. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿ ಹಂತದಲ್ಲಿ ಪೈಪೋಟಿ ಇರುತ್ತದೆ ಅದಕ್ಕೆ ತಕ್ಕಂತೆ ನಿಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು ಎಂದರು.ಪಟ್ಟಣ ಪಂಚಾಯತ ಅಧ್ಯಕ್ಷೆ ಸುಧಾ ಚಿಂದಿ, ಉಪಾಧ್ಯಕ್ಷ ರಾಜು ಕರಡಿ, ಸದಸ್ಯೆ ದಿಲ್‌ಶಾದ ಬಳಿಗಾರ, ಶಿಕ್ಷಣ ಪ್ರೇಮಿ ಜಿ.ಪಿ.ಪ್ರಕಾಶಗೌಡ, ಸಿಡಿಸಿ ಉಪಾಧ್ಯಕ್ಷ ಪ್ರಭು ಮಳವಳ್ಳಿ, ಸದಸ್ಯರಾದ ರವಿ ಚಿಂದಿ, ಚೋಳರಾಜ ಲಕ್ಕೋಳ್ಳಿ, ಸುನೀತಾ ಬೊಂಗಾಳೆ, ದುರಗಪ್ಪ ತಿರಕಪ್ಪನವರ, ಗಂಗಪ್ಪ ಗಿರಿಮಳ್ಳಿ ಸೇರಿದಂತೆ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದರು.