ಗಾಣಿಗ ಸಮಾಜವು ವೃತ್ತಿಯನ್ನು ಅವಲಂಬಿಸಿ ಉನ್ನತ ಮಟ್ಟಕ್ಕೇರಿದ ಸಮಾಜವಾಗಿದೆ. ಪರಿಶುದ್ಧ ಗಾಣದ ಎಣ್ಣೆಯನ್ನು ತೆಗೆಯುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡುತ್ತಿರುವುದು ಹೆಮ್ಮೆಯ ಸಂಗತಿ.
ಗದಗ: ಗಾಣಿಗ ಸಮುದಾಯವು ಕಠಿಣ ಶ್ರಮ ಮತ್ತು ಸ್ವಾಭಿಮಾನಿವೆಂಬ ಗುಣಗಳನ್ನು ಹೊಂದಿದ್ದು, ಈ ಗುಣಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಮೂಲಕ ಸಮಾಜಕ್ಕೆ ಕೀರ್ತಿ ತರುವ ಕೆಲಸವಾಗಬೇಕು ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಪಾಟೀಲ ತಿಳಿಸಿದರು.
ಇಲ್ಲಿಯ ಹಾತಲಗೇರಿ ರಸ್ತೆಯ ವಿವೇಕಾನಂದ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರ ₹20 ಲಕ್ಷ ಅನುದಾನದಲ್ಲಿ ನೂತನವಾಗಿ ನಿರ್ಮಿಸಿರುವ ಊಟದ ಕೊಠಡಿ, ಕಟ್ಟಡದ ಚಾವಣಿಯಲ್ಲಿ ಅಳವಡಿಸಿರುವ ಸೋಲಾರ್ ವಿದ್ಯುತ್ ಘಟಕದ ಉದ್ಘಾಟನೆ ಹಾಗೂ 2026ನೇ ಸಾಲಿನ ದಿನದರ್ಶಿಕೆ(ಕ್ಯಾಲೆಂಡರ್) ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಗಾಣಿಗ ಸಮಾಜವು ವೃತ್ತಿಯನ್ನು ಅವಲಂಬಿಸಿ ಉನ್ನತ ಮಟ್ಟಕ್ಕೇರಿದ ಸಮಾಜವಾಗಿದೆ. ಪರಿಶುದ್ಧ ಗಾಣದ ಎಣ್ಣೆಯನ್ನು ತೆಗೆಯುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡುತ್ತಿರುವುದು ಹೆಮ್ಮೆಯ ಸಂಗತಿ. ಸಮಾಜಕ್ಕೆ ಸಂಸ್ಕಾರ ಕಲಿಸುವ ಹಿರಿಯರ ಕಡೆಗಣಿಸದೆ ಸದಾ ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.ಗಾಣಿಗ ಸಮಾಜವು ನಮ್ಮ ಕುಟುಂಬಕ್ಕೂ ಹಿಂದಿನಿಂದಲೂ ಅವಿನಾಭಾವ ಸಂಬಂಧ ಇದೆ. ಗಾಣಿಗ ಸಮಾಜವು ನಮ್ಮ ಕೆಲಸಕ್ಕೆ ಹೆಗಲಿಗೆ ಹೆಗಲು ಕೊಟ್ಟು ಶಕ್ತಿ ತುಂಬುತ್ತದೆ. ನಮ್ಮ ಮನೆತನಕ್ಕೆ ರಾಜಕೀಯವಾಗಿ ಗಾಣಿಗ ಸಮಾಜವು ಶಕ್ತಿ ತುಂಬುತ್ತಾ ಬಂದಿದೆ. ಅದೇ ರೀತಿ ಮುಂದಿನ ದಿನಗಳಲ್ಲಿ ಸಹ ಇದೇ ಬೆಂಬಲ ನನಗೆ ನೀಡುವಂತೆ ಮನವಿ ಮಾಡಿದರು.ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಬಿಂಗಿ ಮಾತನಾಡಿ, ದಾನಿಗಳ ಸಹಕಾರದಿಂದ ಕಲ್ಯಾಣಮಂಟಪ ನಿರ್ಮಾಣ ಮಾಡಲಾಗಿತ್ತು. ಶಾಸಕರ ಅನುದಾನದಲ್ಲಿ ಈ ಊಟದ ಮನೆ ನಿರ್ಮಾಣ ಮಾಡಲಾಗಿದೆ. ಕಡಿಮೆ ಪ್ರಮಾಣದಲ್ಲಿ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ಮಿಸಲಾಗಿದೆ ಎಂದರು.
ಗಾಣಿಗ ಸಮಾಜದ ಮುಖಂಡ ದಶರಥ ಗಾಣಿಗೇರ, ಕೆಇಬಿ ಇಲಾಖೆಯ ಅಧಿಕಾರಿ ಜವಳಿ, ಸೋಲಾರ್ ಕಂಪನಿಯ ಮ್ಯಾನೇಜರ್ ಶ್ರೀನಿವಾಸ ಮಂಟೂರ ಮಾತನಾಡಿದರು.ಈ ವೇಳೆ 2026ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಟ್ರಸ್ಟ್‌ನ ಷಣ್ಮುಖಪ್ಪ ಬಡ್ನಿ, ಬಿ.ಬಿ. ಐನಾಪೂರ, ಮುರುಘರಾಜೇಂದ್ರ ಬಡ್ನಿ, ಗಾಣಿಗ ಸಮಾಜದ ಮುಖಂಡ ಅಶೋಕ ಮಂದಾಲಿ, ಸುರೇಶ ಮರಳಪ್ಪನವರ, ಬಸವರಾಜ ಮೇಟಿ, ಗಿರಿಯಪ್ಪ ಅಸೂಟಿ, ಗಂಗಾಧರ ಗಾಣಿಗೇರ, ರಮೇಶ ಮಂದಾಲಿ, ಹಾಲಪ್ಪ ಲಕ್ಕುಂಡಿ(ಬಣವಿ), ಫಕ್ಕೀರೇಶ ಸಿಂಧಗಿ, ಬಸವರಾಜ ಸುಂಕದ, ಶರಣಗೌಡ ಪವಾಡಿಗೌಡ್ರು, ಬಿ.ಎಸ್. ವಡವಟ್ಟಿ, ನಿಂಗಪ್ಪ ಕೆಂಗಾರ, ಅಮರೇಶ ಹಾದಿ, ಶ್ರೀಕಾಂತ ಲಕ್ಕುಂಡಿ, ಪ್ರಭುರಾಜ ಬಿಂಗಿ, ಹನುಮಂತಗೌಡ ದೊಡ್ಡಗೌಡ್ರ, ಐ.ಎಂ. ಕಿರೇಸೂರ, ಬಸವಂತಪ್ಪ ನವಲಳ್ಳಿ, ಬಸವರಾಜ ನವಲಗುಂದ, ತೋಟಪ್ಪ ಗಾಣಿಗೇರ, ಶಿವಣ್ಣ ಹಿಟ್ಟಳ್ಳಿ, ಸೋಮನಗೌಡ ಪಾಟೀಲ, ಪ್ರಕಾಶ ಮುಧೋಳ, ಜಗದೀಶ ಬೆಳವಟಗಿ, ಪುಲಕೇಶಗೌಡ ಪಾಟೀಲ, ಸಂದೀಪ ಕಪ್ಪತ್ತನವರ, ಎಚ್.ಬಿ. ಕೊರಗಲ್ ಇದ್ದರು.