ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿ ರಾಮೋಜಿಗೌಡ ಮತದಾರರಿಗೆ ಗಿಫ್ಟ್ ಬಾಕ್ಸ್ ಹಂಚುವ ಮೂಲಕ ಆಮಿಷ ಒಡ್ಡುತ್ತಿದ್ದಾರೆ ಎಂದು ಆನೇಕಲ್ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.

ಆನೇಕಲ್: ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿ ರಾಮೋಜಿಗೌಡ ಮತದಾರರಿಗೆ ಗಿಫ್ಟ್ ಬಾಕ್ಸ್ ಹಂಚುವ ಮೂಲಕ ಆಮಿಷ ಒಡ್ಡುತ್ತಿದ್ದಾರೆ ಎಂದು ಆನೇಕಲ್ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.

ತಾಲೂಕಿನ ನೆರಳೂರಿನಲ್ಲಿರುವ ಡಿಟಿಡಿಸಿ ಕೊರಿಯರ್ ಕಂಪನಿಗೆ ಸೇರಿದ ಗೋದಾಮಿನಲ್ಲಿ ಗಿಫ್ಟ್ ಬಾಕ್ಸ್ ಗಳನ್ನು ಶೇಖರಿಸಿಟ್ಟಿದ್ದಾರೆ ಎಂಬ ಮಾಹಿತಿ ಮೇರೆಗೆ ಗೋದಾಮಿಗೆ ಲಗ್ಗೆ ಹಾಕಿದ ಬಿಜೆಪಿ ಕಾರ್ಯಕರ್ತರು, ಸ್ಥಳದಲ್ಲೇ ಬಾಕ್ಸ್ ಗಳನ್ನು ತೆರೆಯುವಂತೆ ಒತ್ತಾಯಿಸಿದ್ದಾರೆ. 

ಬಾಕ್ಸ್‌ ನಲ್ಲಿ ಪಿಂಗಾಣಿಯ ಎರಡು ಬೌಲ್, ಆರು ಪ್ಲೇಟ್‌ಗಳು ಕಂಡುಬಂದಿವೆ. ರಾಮೋಜಿಗೌಡರ ಭಾವಚಿತ್ರ ಇರುವ ಕರಪತ್ರಗಳು ದೊರಕಿದೆ ಎಂದು ಬಿಜೆಪಿ ಕಾರ್ಯಕರ್ತರು ಪ್ರದರ್ಶಿಸಿದ್ದಾರೆ. ಜಿಲ್ಲೆಯಾದ್ಯಂತ ಗಿಫ್ಟ್ ಬಾಕ್ಸ್‌ಗಳನ್ನು ಹಂಚಿರಬಹುದೆಂದು ಶಂಕಿಸಿ ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ತಾಲೂಕು ಪಂಚಾಯಿತಿ ಅಧಿಕಾರಿ ಅನಿಲ್, ಪೊಲೀಸ್ ಹಾಗೂ ಚುನಾವಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದಾರೆ.