ಸಾರಾಂಶ
ಜಿಲ್ಲೆಯ ಸಾರ್ವಜನಿಕರು ಡಿ. 14ರಂದು ನಡೆಯುವ ಲೋಕ ಅದಾಲತ್‌ನಲ್ಲಿ ಭಾಗವಹಿಸುವ ಮೂಲಕ ನ್ಯಾಯಾಲಯಗಳಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕು.
ಕಾರವಾರ: ಜಿಲ್ಲೆಯಲ್ಲಿ ಮುಂದಿನ ಡಿ. 14ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 5000ಕ್ಕೂ ಅಧಿಕ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಸಿವಿಲ್ ನ್ಯಾಯಾಧೀಶೆ ದಿವ್ಯಶ್ರೀ ಸಿ.ಎಂ. ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಬಾರಿ ನಡೆದ ಲೋಕ ಅದಾಲತ್‌ನಲ್ಲಿ 4083 ಪ್ರಕರಣಗಳಲ್ಲಿ ₹ 21.10 ಕೋಟಿ ಮೊತ್ತ ಜಮಾ ಆಗಿದೆ. ಲೋಕ ಅದಾಲತ್‌ನಲ್ಲಿ ಸಾರ್ವಜನಿಕರು ಬ್ಯಾಂಕ್ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವಿದ್ಯುತ್, ಆಸ್ತಿ ಕರ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂಸ್ವಾಧೀನ ಪ್ರಕರಣಗಳು, ಮೋಟಾರ ವಾಹನ ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ/ಕೌಟುಂಬಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಇತರೆ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ತಪಡಿಸಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ತಮ್ಮ ವಕೀಲರ ಮೂಲಕ ಅಥವಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.ಜಿಲ್ಲೆಯ ಸಾರ್ವಜನಿಕರು ಡಿ. 14ರಂದು ನಡೆಯುವ ಲೋಕ ಅದಾಲತ್‌ನಲ್ಲಿ ಭಾಗವಹಿಸುವ ಮೂಲಕ ನ್ಯಾಯಾಲಯಗಳಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿಕೊಳ್ಳಲು ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ಕೆ.ಬಿ. ನಾಯಕ ಇದ್ದರು.ನಾಳೆ ವಿದ್ಯುತ್ ಅದಾಲತ್, ಗ್ರಾಹಕರ ಸಂವಾದಕಾರವಾರ: ಹೆಸ್ಕಾಂ ಕಾರವಾರ ಉಪವಿಭಾಗದ ಕಚೇರಿಯಲ್ಲಿ ನ. 16ರಂದು ಬೆಳಗ್ಗೆ 11 ಗಂಟೆಗೆ ವಿದ್ಯುತ್ ಅದಾಲತ್ ಹಾಗೂ ಮಧ್ಯಾಹ್ನ 3.30ಕ್ಕೆ ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳೆನಾದರೂ ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.