ಯುವಕರನ್ನು ಸರಿದಾರಿಗೆ ಕೊಂಡೊಯ್ಯುವ ಜವಾಬ್ದಾರಿ ರಾಷ್ಟ್ರೀಯ ಸೇವಾ ಯೋಜನೆ ಯ ಮುಖ್ಯ ಗುರಿಯಾಗಿದೆ. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಕಾರ್ಯಕ್ರಮ ಅಧಿಕಾರಿಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಎನ್.ಎಸ್.ಎಸ್. ಅಧಿಕಾರಿ ಪ್ರತಾಪ್ ಲಿಂಗಯ್ಯ ಅವರು ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ, ತುಮಕೂರುಯುವಕರನ್ನು ಸರಿದಾರಿಗೆ ಕೊಂಡೊಯ್ಯುವ ಜವಾಬ್ದಾರಿ ರಾಷ್ಟ್ರೀಯ ಸೇವಾ ಯೋಜನೆ ಯ ಮುಖ್ಯ ಗುರಿಯಾಗಿದೆ. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಕಾರ್ಯಕ್ರಮ ಅಧಿಕಾರಿಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಎನ್.ಎಸ್.ಎಸ್. ಅಧಿಕಾರಿ ಪ್ರತಾಪ್ ಲಿಂಗಯ್ಯ ಅವರು ಅಭಿಪ್ರಾಯಪಟ್ಟರು.ತುಮಕೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶದ ವತಿಯಿಂದ ಬುಧವಾರದಿಂದ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಶಿಸ್ತು, ಸಂಯಮ ಹಾಗೂ ಜೀವನ ಪಾಠಗಳನ್ನು ಕಲಿಸಲು ಎನ್.ಎಸ್.ಎಸ್. ಒಂದು ಉತ್ತಮ ವೇದಿಕೆಯಾಗಿದೆ. ಇಡೀ ದೇಶದಲ್ಲೇ ಕರ್ನಾಟಕದಲ್ಲಿ ಮಾತ್ರ ಎನ್.ಎಸ್.ಎಸ್. ಯೋಜನೆಯನ್ನು ಸರಿಯಾಗಿ ಸದುಪಯೋಗಪಡಿಸಿಕೊಂಡು, ಅನುದಾನವನ್ನು ಸೂಕ್ತವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದರು. ಪ್ರತಿಯೊಂದು ಕಾರ್ಯಕ್ರಮದ ವಿವರಗಳನ್ನು ಮೈ ಭಾರತ್ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕು ಎಂದು ತಿಳಿಸಿದರಲ್ಲದೆ, ಯೋಜನೆಗೆ ಸಂಬಂಧಿಸಿದ ಅನುದಾನ ಹಾಗೂ ಹಣಕಾಸು ವಿಚಾರಗಳ ಕುರಿತು ಅಧಿಕಾರಿಗಳಿಗೆ ತಿಸಿದರು.ಬೆಂಗಳೂರಿನ ರಾಷ್ಟ್ರೀಯ ಸೇವಾ ಯೋಜನಾ ಕೋಶದ ಪ್ರಾದೇಶಿಕ ನಿರ್ದೇಶಕರಾದ ಗಿರಿಧರ್ ಉಪಾಧ್ಯಾಯ ಮಾತನಾಡಿ, ಎನ್ ಎಸ್‌ಎಸ್ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಎದುರಾಗುವ ಸಾಲು-ಸಾಲು ತೊಡಕುಗಳು ಮತ್ತು ಸವಾಲುಗಳನ್ನು ಹೇಗೆ ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂಬುದರ ಕುರಿತು ಮಾಹಿತಿ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತುಮಕೂರು ವಿವಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಅವರು ಎನ್ ಎಸ್ ಎಸ್ ನಲ್ಲಿ ಒಟ್ಟಾಗಿ ಕೆಲಸ ಮಾಡುವುದರಿಂದ ತಂಡ ಸ್ಫೂರ್ತಿ ಹಾಗೂ ಉತ್ತಮ ಮಾನವ ಸಂಬಂಧಗಳು ಬೆಳೆಯುತ್ತವೆ. ಯಾವುದೇ ಕಾರ್ಯದಲ್ಲಿ ಯಶಸ್ಸು ಕಾಣಲು ಇಂತಹ ತರಬೇತಿ ಕಾರ್ಯಾಗಾರಗಳು ಅತ್ಯಗತ್ಯ. ಎನ್.ಎಸ್.ಎಸ್.ನಲ್ಲಿ ಸಮಯ ಪಾಲನೆ ಅತಿ ಮುಖ್ಯವಾಗಿದ್ದು, ನಾವು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಬೇಕು ಮತ್ತು ಉತ್ತಮ ಫಲಶೃತಿ ನೀಡಬೇಕು. ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಸುಂದರ ಹಾಗೂ ಸದೃಢ ನಾಗರಿಕರನ್ನಾಗಿ ನಿರ್ಮಿಸಬೇಕಿದೆ. ಯಾರು ಶ್ರಮದ ಮಹತ್ವ ಅರಿತು ಕಸ, ಪೊರಕೆ ಹಿಡಿದು ಕೆಲಸ ಮಾಡಲು ಹಿಂಜರಿಯುವುದಿಲ್ಲವೋ, ಅವರು ಜೀವನದಲ್ಲಿ ಉನ್ನತ ಗುರಿ ತಲುಪುತ್ತಾರೆ ಎಂದರು.
ತುಮಕೂರು ವಿವಿಯ ಎನ್ ಎಸ್ ಎಸ್ ಸಂಯೋಜಕರಾದ ಪ್ರೊ. ನಾಗಭೂಷಣ್ ಬಗ್ಗನಡು ಪ್ರಸ್ತಾವಿಕ ನುಡಿಗಳನ್ನಾಡಿದರು. ಮೈಸೂರು ವಿವಿ ಯ ಎನ್ ಎಸ್ ಎಸ್ ಸಲಹಾ ಸಮಿತಿ ಸದಸ್ಯರಾದ , ಡಾ. ಕೆ.ಎಂ. ವೀರಯ್ಯ ಮಾತನಾಡಿದರು. ಮಿಡಿಗೇಶಿ ಸ.ಪ್ರ.ದ. ಕಾಲೇಜಿನ ಕಾರ್ಯಕ್ರಮಾಧಿಕಾರಿ ಡಾ. ಮಂಜುಭಾರ್ಗವಿ ನಿರೂಪಿಸಿದರು. ಮಧುಗಿರಿ ಸ.ಪ್ರ.ದ. ಕಾಲೇಜಿನ ಕಾರ್ಯಕ್ರಮಾಧಿಕಾರಿ ಡಾ. ಮಂಜುನಾಥ್ ಬುಡಸನಹಳ್ಳಿ ಅವರು ಸ್ವಾಗತಿಸಿದರು. ಹೆಬ್ಬೂರಿನ ಗೋವಿಂದ ರಾಜು ವಂದಿಸಿದರು.ಪರೀಕ್ಷಾಂಗ ಕುಲ ಸಚಿವ ಪ್ರೊ. ಎಚ್‌ಎಸ್ ಮೋಹನ ಇದ್ದರು.