ಸಾರಾಂಶ
ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಗಮನ ಸೆಳೆಯಲು ತಿಳಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹ. ಮಾ. ಗುರುಸ್ವಾಮಿ ನೇತೃತ್ವದಲ್ಲಿ ಹನೂರಿನಲ್ಲಿ ಶಾಸಕ ಎಂ.ಆರ್. ಮಂಜುನಾಥ್ ರವರಿಗೆ ಮನವಿ ಸಲ್ಲಿಸಿದರು.
ಹನೂರು: ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಗಮನ ಸೆಳೆಯಲು ತಿಳಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹ. ಮಾ. ಗುರುಸ್ವಾಮಿ ನೇತೃತ್ವದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ರವರಿಗೆ ಮನವಿ ಸಲ್ಲಿಸಿದರು.
ನಂತರ ರಾಜ್ಯ ನೌಕರರ ಸಂಘದ ತಾಲೂಕು ಅಧ್ಯಕ್ಷ ಗುರುಸ್ವಾಮಿ ಮಾತನಾಡಿ, ಏಳನೇ ವೇತನ ಆಯೋಗ ವರದಿಯ ಯಥಾವತ್ತಾಗಿ ಅನುಷ್ಠಾನ ಮಾಡುವುದು, ಎನ್‌ಪಿಎಸ್ ಅನ್ನು ಒಪಿಎಸ್ ಆಗಿ ಪರಿವರ್ತಿಸುವುದು, ಸರ್ಕಾರಿ ನೌಕರರು ಹಾಗೂ ಅವರ ಕುಟುಂಬ ವರ್ಗದವರಿಗೆ ನಗದು ರಹಿತ ಚಿಕಿತ್ಸೆ ಯೋಜನೆಯನ್ನು ಜಾರಿಗೆ ತರಲು ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲು ಶಾಸಕರು ಕ್ರಮ ವಹಿಸಬೇಕು ಎಂದು ಹೇಳಿದರು.ಅಲ್ಲದೆ ಈ ತಿಂಗಳ ಅಂತ್ಯಕ್ಕೆ ಸರ್ಕಾರಿ ನೌಕರರ ಬೇಡಿಕೆ ಈಡೇರುವವರೆಗೂ ಮುಷ್ಕರವನ್ನು ನಡೆಸಲು ರಾಜ್ಯ ಸಂಘವು ತೀರ್ಮಾನಿಸಿದ್ದು ಈ ಸಂಬಂಧ ಅಧಿವೇಶನದಲ್ಲಿ ನಮ್ಮ ಪರ ಹೋರಾಟ ರೂಪಿಸುವಂತೆ ಶಾಸಕರಿಗೆ ನಿವೇದಿಸಿದರು.
ಸರ್ಕಾರಿ ನೌಕರರ ಮನವಿ ಪತ್ರ ಸ್ವೀಕರಿಸಿ ಶಾಸಕ ಎಂ.ಆರ್.ಮಂಜುನಾಥ್ ಮಾತನಾಡಿ, ಸರ್ಕಾರಿ ನೌಕರರ ಬೇಡಿಕೆಗಳು ನ್ಯಾಯಯುತವಾಗಿದ್ದು ಬೇಡಿಕೆಗಳ ಈಡೇರಿಕೆಗಾಗಿ ನಾನು ನಿಮ್ಮೆಲ್ಲರ ಧ್ವನಿಯಾಗಿರುವೆ ಎಂದು ಭರವಸೆ ನೀಡಿದರು.ಎಲ್ಲಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಶಿಕ್ಷಣ ಇಲಾಖೆ ಸೇರಿದಂತೆ ಇತರೆ ಇಲಾಖೆಯ ಸರ್ಕಾರಿ ನೌಕರರು ಹಾಜರಿದ್ದರು.