ಹಾಲಿನ ದರ ಏರಿಕೆಯಿಂದ ಬಡ ಕುಟುಂಬಗಳ ಮಕ್ಕಳಿಗೆ ಒಂದು ಲೋಟ ಹಾಲು ಕೊಡಿಸುವುದೂ ದುಸ್ತರವಾಗಿದೆ. ಹಾಲಿನ ದರದ ಜೊತೆಗೆ ಹಾಲಿನ ಉತ್ಪನ್ನಗಳ ಬೆಲೆಯೂ ಹೆಚ್ಚಳವಾಗಿದೆ. ಅಕ್ಕಿ, ಬೇಳೆ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ರೈತರಿಗೆ ಪ್ರತಿ ಲೀಟರ್ ಹಾಲಿಗೆ 7 ರು. ಪ್ರೋತ್ಸಾಹಧನ ನೀಡುವ ಭರವಸೆ ನೀಡಿದ್ದ ಸರ್ಕಾರ ಅದನ್ನು ಸಮರ್ಪಕವಾಗಿ ಈಡೇರಿಸಿಲ್ಲ. ರೈತರಿಗೆ ಬರಬೇಕಾದ ಹಾಲಿನ ಬಾಕಿ ಹಣವನ್ನೂ ತಕ್ಷಣ ಪಾವತಿಸಬೇಕು ಎಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಸಕಲೇಶಪುರರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆ ಮಾಡುವ ಮೂಲಕ ರಾಜ್ಯದ ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಶಾಸಕ ಸಿಮೆಂಟ್ ಮಂಜು ಆರೋಪಿಸಿದರು.ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ತಾಲೂಕು ಬಿಜೆಪಿ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಆಯೋಜಿಸಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇತ್ತೀಚೆಗೆ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದರಿಂದ ಸಾಮಾನ್ಯ ಪ್ರಯಾಣಿಕರಿಗೆ ತೀವ್ರ ಹೊರೆಯಾಗಿದೆ. ಸಕಲೇಶಪುರದಿಂದ ಬೆಂಗಳೂರಿಗೆ ಪ್ರಯಾಣಿಸುವ ದರದಲ್ಲಿ 70ರಿಂದ 80ರವರೆಗೆ ಹೆಚ್ಚಳವಾಗಿದ್ದು, 500 ಇಟ್ಟುಕೊಂಡು ಬೆಂಗಳೂರಿಗೆ ಹೋಗಿ ಬರುವುದೂ ಬಡವರಿಗೆ ಕಷ್ಟವಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಾಲಿನ ದರ ಏರಿಕೆಯಿಂದ ಬಡ ಕುಟುಂಬಗಳ ಮಕ್ಕಳಿಗೆ ಒಂದು ಲೋಟ ಹಾಲು ಕೊಡಿಸುವುದೂ ದುಸ್ತರವಾಗಿದೆ. ಹಾಲಿನ ದರದ ಜೊತೆಗೆ ಹಾಲಿನ ಉತ್ಪನ್ನಗಳ ಬೆಲೆಯೂ ಹೆಚ್ಚಳವಾಗಿದೆ. ಅಕ್ಕಿ, ಬೇಳೆ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ರೈತರಿಗೆ ಪ್ರತಿ ಲೀಟರ್ ಹಾಲಿಗೆ 7 ರು. ಪ್ರೋತ್ಸಾಹಧನ ನೀಡುವ ಭರವಸೆ ನೀಡಿದ್ದ ಸರ್ಕಾರ ಅದನ್ನು ಸಮರ್ಪಕವಾಗಿ ಈಡೇರಿಸಿಲ್ಲ. ರೈತರಿಗೆ ಬರಬೇಕಾದ ಹಾಲಿನ ಬಾಕಿ ಹಣವನ್ನೂ ತಕ್ಷಣ ಪಾವತಿಸಬೇಕು ಎಂದು ಒತ್ತಾಯಿಸಿದರು.

ಮಹಿಳೆಯರಿಗಾಗಿ ಜಾರಿಗೊಳಿಸಿರುವ ಶಕ್ತಿ ಯೋಜನೆಯಿಂದ ಉಂಟಾಗುತ್ತಿರುವ ಆರ್ಥಿಕ ನಷ್ಟದ ಹೊರೆ ಪುರುಷ ಪ್ರಯಾಣಿಕರ ಮೇಲೆ ಬಸ್ ಪ್ರಯಾಣ ದರ ಹೆಚ್ಚಳದ ಮೂಲಕ ಹಾಕಲಾಗುತ್ತಿದೆ. ಬಡವರು, ದಲಿತರು, ಹಿಂದುಳಿದವರು, ಮಹಿಳೆಯರು ಹಾಗೂ ರೈತರ ಪರವಾಗಿ ಕಾಳಜಿ ವಹಿಸಬೇಕಾದ ಸರ್ಕಾರ ಜನರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೇರುತ್ತಿರುವುದು ಖಂಡನೀಯ ಎಂದರು. ಸರ್ಕಾರ ತಕ್ಷಣವೇ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆಯನ್ನು ಹಿಂಪಡೆದು ಹಿಂದಿನ ದರವನ್ನು ಮುಂದುವರಿಸಬೇಕು. ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಬೇಕು. ಇಲ್ಲದಿದ್ದರೆ ಭಾರತೀಯ ಜನತಾ ಪಕ್ಷದ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬೆಲೆ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ವಳಲಹಳ್ಳಿ ಅಶ್ವಥ್, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಧು ಬೊಮ್ಮನಕೆರೆ, ಅಗ್ನಿ ಸೋಮಶೇಖರ್‌, ಪಕ್ಷದ ಮುಖಂಡರಾದ ಬಾಗೆ ಜಯಪ್ರಕಾಶ್, ಮಿಲಿಟರಿ ಧರ್ಮಪ್ಪ, ಜೈಶಂಕರ್, ಪ್ರದೀಪ್, ಮೇಘರಾಜ್, ನೇಮನ್ ಶೇಕ್, ಮದನ್, ನಿಖಿಲ್, ಹರೀಶ್ ಆಚಾರ್, ವಿನಯ್, ನವೀನ್ ಶೆಟ್ಟಿ, ಮಾಸವಳ್ಳಿ ಚಂದ್ರು, ಧರಣಿ, ಮಹಿಳಾ ಘಟಕದ ಮೇಘ, ನಾಗಮಣಿ, ಚೇತನ ಸೇರಿದಂತೆ ಇತರರು ಉಪಸ್ಥಿತರಿದ್ದರು.

====ಫೋಟೋ

ಸಕಲೇಶಪುರ ತಾಲೂಕು ಬಿಜೆಪಿ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.