ಸಾರಾಂಶ
ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಷರತ್ತುಗಳನ್ನು ಉಲ್ಲಂಘಿಸುವ ಶಾಲೆಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಎಚ್ಚರಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯ ಪಠ್ಯಕ್ರಮದ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಷರತ್ತುಗಳನ್ನು ಉಲ್ಲಂಘಿಸುವ ಶಾಲೆಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಎಚ್ಚರಿಸಿದ್ದಾರೆ.ರಾಜ್ಯ ಪಠ್ಯಕ್ರಮದ ಅನುಮತಿ ಪಡೆದಿರುವ ಕೆಲವು ಶಾಲೆಗಳಲ್ಲಿ ‘ಹೆಚ್ಚುವರಿ’ಯಾಗಿ ಇತರೆ ಪಠ್ಯಕ್ರಮದ ಪಠ್ಯಪುಸ್ತಕಗಳನ್ನು ಅನುಸರಿಸುತ್ತಿರುವ ಕುರಿತು ಶಾಲಾ ಶಿಕ್ಷಣ ಇಲಾಖೆಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ನೋಟಿಸ್ ನೀಡಲಾಗಿದೆ.
ಶಾಲೆಗಳಿಗೆ ಮಾನ್ಯತೆ ನೀಡುವಾಗ ಮತ್ತು ಮಾನ್ಯತೆ ನವೀಕರಿಸುವಾಗ ರಾಜ್ಯ ಪಠ್ಯಕ್ರಮವನ್ನು ಕಡ್ಡಾಯವಾಗಿ ಪಾಲಿಸಬೇಕು ಷರತ್ತುಗಳನ್ನು ವಿಧಿಸಲಾಗಿರುತ್ತದೆ. ಅದರಂತೆ ವಿದ್ಯಾರ್ಥಿ ದಾಖಲಾತಿ ವ್ಯವಸ್ಥೆ (ಸ್ಯಾಟ್ಸ್) ತಂತ್ರಾಂಶ ಮೂಲಕ ಪಠ್ಯಪುಸ್ತಕಗಳಿಗೆ ಬೇಡಿಕೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.