ಮಹಿಳೆ ಹೊಟ್ಟೆಯಲ್ಲಿದ್ದ 8 ಕೆಜಿ ಗಡ್ಡೆ ಹೊರ ತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು...!

| Published : Jan 21 2025, 12:31 AM IST

ಮಹಿಳೆ ಹೊಟ್ಟೆಯಲ್ಲಿದ್ದ 8 ಕೆಜಿ ಗಡ್ಡೆ ಹೊರ ತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು...!
Share this Article
  • FB
  • TW
  • Linkdin
  • Email

ಸಾರಾಂಶ

ಮಳವಳ್ಳಿ ತಾಲೂಕಿನ ದ್ಯಾವಪಟ್ಟಣ ಗ್ರಾಮದ ಮಹಿಳೆಯ ಶೈಲಾ ಗೋಪಾಲ್ ಕಳೆದ ಹಲವು ತಿಂಗಳಿಂದ ಹೊಟ್ಟೆ ನೋವಿನ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದ ಅವರಿಗೆ ನೋವು ಕಡಿಮೆಯಾಗಿರಲಿಲ್ಲ. ಅಲ್ಲದೇ, ಹೊಟ್ಟೆ ಉಬ್ಬಿದ ಹಾಗೆ ಕಾಣುತ್ತಿತ್ತು. ಕೆಲ ದಿನಗಳ ಹಿಂದೆ ಸ್ಕ್ಯಾನಿಂಗ್ ಮಾಡಿಸಿದಾಗ ಗಡ್ಡೆ ಇರುವುದು ಪತ್ತೆಯಾಗಿತ್ತು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಮಹಿಳೆ ಹೊಟ್ಟೆಯಲ್ಲಿದ್ದ 8 ಕೆಜಿ ತೂಕದ ಗಡ್ಡೆಯನ್ನು ಯಶಸ್ವಿಯಾಗಿ ವೈದ್ಯರು ಹೊರ ತೆಗೆದಿದ್ದಾರೆ.

ತಾಲೂಕಿನ ದ್ಯಾವಪಟ್ಟಣ ಗ್ರಾಮದ ಮಹಿಳೆಯ ಶೈಲಾ ಗೋಪಾಲ್ ಕಳೆದ ಹಲವು ತಿಂಗಳಿಂದ ಹೊಟ್ಟೆ ನೋವಿನ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದ ಅವರಿಗೆ ನೋವು ಕಡಿಮೆಯಾಗಿರಲಿಲ್ಲ. ಅಲ್ಲದೇ, ಹೊಟ್ಟೆ ಉಬ್ಬಿದ ಹಾಗೆ ಕಾಣುತ್ತಿತ್ತು. ಕೆಲ ದಿನಗಳ ಹಿಂದೆ ಸ್ಕ್ಯಾನಿಂಗ್ ಮಾಡಿಸಿದಾಗ ಗಡ್ಡೆ ಇರುವುದು ಪತ್ತೆಯಾಗಿತ್ತು.

ಆಸ್ಪತ್ರೆ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್ ಮಾರ್ಗದರ್ಶನದಲ್ಲಿ ಸೋಮವಾರ ಸತತ ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ಹಿರಿಯ ವೈದ್ಯರಾದ ಡಾ.ಮುಳೀಧರ್, ಡಾ.ರೇಣುಕಾ ದೇವಿ, ಡಾ.ಶಿಲ್ಪಾ, ಡಾ.ಜ್ಯೋತಿ ಅವರ ತಂಡ ಸುಮಾರು 8 ಕೆಜಿ ತೂಕದ ಗಡ್ಡೆಯನ್ನು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.

ಡಾ.ಮುಳೀಧರ್ ಮಾತನಾಡಿ, ಹಲವು ವೈದ್ಯರ ಸಹಕಾರ ಶಸ್ತ್ರಚಿಕಿತ್ಸೆ ಮಾಡಿ ಗಡ್ಡೆ ಹೊರತೆಗೆದಿದ್ದು, ಜನರು ಸರ್ಕಾರಿ ಆಸ್ಪತ್ರೆಗಳಲ್ಲಿನ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.