ಸಾರಾಂಶ
ಕನ್ನಡಪ್ರಭ ವಾರ್ತೆ ದೇವನಹಳ್ಳಿ ಶೋಷಿತರು, ಹಿಂದುಳಿದವರ ಅಭವೃದ್ಧಿಗೆ ಅಪಾರ ಕೊಡುಗೆ ನೀಡಿರುವ ದಿವಂಗತ ದೇವರಾಜ ಅರಸು ಅವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಉಸ್ತುವಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ಕನ್ನಡಪ್ರಭ ವಾರ್ತೆ ದೇವನಹಳ್ಳಿ
ಶೋಷಿತರು, ಹಿಂದುಳಿದವರ ಅಭವೃದ್ಧಿಗೆ ಅಪಾರ ಕೊಡುಗೆ ನೀಡಿರುವ ದಿವಂಗತ ದೇವರಾಜ ಅರಸು ಅವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಉಸ್ತುವಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.ದೇವರಾಜ ಅರಸು ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದೇವರಾಜ ಅರಸು 109 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಡಿಮೆ ಜನಸಂಖ್ಯೆ ಇರುವವರಲ್ಲಿ ನಾಯಕರೊಬ್ಬರನ್ನು ಹುಡುಕಿ ಶಾಸಕರನ್ನಾಗಿ ಮಾಡಿ ನಂತರ ಅವರನ್ನು ಮಂತ್ರಿಯನ್ನಾಗಿ ಮಾಡುತ್ತಿದ್ದ ಜನನಾಯಕ ದೇವರಾಜ ಅರಸು. ಸಾಮಾಜಿಕ ಕ್ರಾಂತಿಯ ಹರಿಕಾರ ಎಂದು ಹೇಳಿದರು.
ಸಮ ಸಮಾನತೆ ತರಲು ಅನೇಕ ಸುಧಾರಣಾ ಕಾಯ್ದೆಗಳನ್ನು ಜಾರಿಗೊಳಿಸಿದರು. ಭೂ ಸುಧಾರಣಾ ಕಾಯಿದೆ ಜಾರಿಗೆ ತಂದದ್ದರಿಂದ ಅನೇಕ ಬಡವರು ಇಂದು ಜಮೀನ್ದಾರರಾಗಿದ್ದಾರೆ. ಅವರ ಅವಧಿಯಲ್ಲಿ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಯಿತು. ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುವಂತಹ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ ಕೀರ್ತಿ ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಬಿ.ರಾಜಣ್ಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲ ಅಧಿಕಾರಿ ನಿರುಪಮಾ ಸಿ.ಮೌಳಿ, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಆರ್.ರವಿಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಸಿ.ಮಂಜುನಾಥ್, ಸಿ.ಮುನಿರಾಜು,
ಪುರಸಭಾ ಮಾಜಿ ಅಧ್ಯಕ್ಷ ಎಂ.ನಾರಾಯಣಸ್ವಾಮಿ, ಕೆ.ವೆಂಕಟೇಶ್, ಜಿಪಂ ಸಿಇಒ ಡಾ.ಅನುರಾಧ, ತಹಸೀಲ್ದಾರ್ ಬಾಲಕೃಷ್ಣ, ಪ್ರಸನ್ನಕುಮಾರ್, ನಾಗೇಗೌಡ ಉಪಸ್ಥಿತರಿದ್ದರು.