ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ

| Published : Aug 24 2024, 01:21 AM IST

ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರದ ಯೋಜನೆಗಳು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪುವಲ್ಲಿ ವಿಳಂಭವಾಗುತ್ತಿರುವುದು ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿ

ಲಕ್ಷ್ಮೇಶ್ವರ: ರಾಜ್ಯದಲ್ಲಿನ ವಿಧಾನಸಭಾ ಮತಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ, ರಾಜ್ಯದ ಅಭಿವೃದ್ಧಿಯ ಹಿನ್ನಡೆಗೆ ಅನುದಾನದ ಕೊರತೆ ಕಾರಣವಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಶುಕ್ರವಾರ ಸಮೀಪದ ಗೊಜನೂರ ಗ್ರಾಪಂನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ತಾಲೂಕಿನ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಯಾವುದೇ ಅನುದಾನ ನೀಡುತ್ತಿಲ್ಲ, ಅನುದಾನ ನೀಡದೆ ಇರುವುದರಿಂದ ಗ್ರಾಮೀಣ ಭಾಗದ ರಸ್ತೆಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಮೂಲ ಸೌಕರ್ಯ ನೀಡುವಲ್ಲಿ ಸಾಕಷ್ಟು ಸಮಸ್ಯೆಯಾಗಿದೆ. ಸರ್ಕಾರದ ಯೋಜನೆಗಳು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪುವಲ್ಲಿ ವಿಳಂಭವಾಗುತ್ತಿರುವುದು ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ಮುಟ್ಟಿಸುವ ಕಾರ್ಯ ಇಲ್ಲಿನ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದರು.

ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಕಾಮಗಾರಿಗೆ ನಡೆಯುವಲ್ಲಿ ಎಲ್ಲ ರೀತಿಯ ಸಹಾಯ ಸಹಕಾರ ನೀಡುತ್ತೇವೆ. ಗೊಜನೂರ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಶಾಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಸುವ ಕಾರ್ಯ ಮಾಡಲಾಗುವುದು. ವಿಧಾನಸಭೆಯಲ್ಲಿ ತಾಲೂಕಿನ ಅಭಿವೃದ್ಧಿಗೆ ಬೇಕಾದ ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಯಳವತ್ತಿ- ಲಕ್ಷ್ಮೇಶ್ವರ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಕ್ಷೇತ್ರದ ಅಭಿವೃದ್ಧಿಗೆ ಸಾಧ್ಯವಿದ್ದ ಮಟ್ಟಿಗೆ ನಾನು ಪ್ರಯತ್ನಿಸುವೆ, ಗ್ರಾಮದಲ್ಲಿ ಆಶ್ರಯ ನಿವೇಶನದ ಹಕ್ಕು ಪತ್ರ ನೀಡುವ ಕಾರ್ಯ ಮುಂದಿನ ದಿನಗಳಲ್ಲಿ ಮಾಡುತ್ತೇನೆ. ಗೊಜನೂರ ಗ್ರಾಪಂನ ಆಡಳಿತ ಮಂಡಳಿಯು ಸುಂದರ ಕಟ್ಟಡ ನಿರ್ಮಾಣ ಮಾಡಿರುವುದು ಸಂತೋಷದ ಸಂಗತಿಯಾಗಿದೆ. ಸುಂದರ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಎಂದು ಹೇಳಿದರು.

ಈ ವೇಳೆ ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಸಿ.ಪಿ. ಮಾಡಳ್ಳಿ, ಜಿಪಂ ಮಾಜಿ ಸದಸ್ಯ ಎಂ.ಎಸ್.ದೊಡ್ಡಗೌಡರ, ತಾಪಂನ ನಿರ್ಗಮಿತ ಇಓ ಆರ್.ವೈ. ಗುರಿಕಾರ, ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಡಿ. ಪಾಟೀಲ, ಗ್ರಾಪಂ ಸದಸ್ಯ ಮಂಜುನಾಥ ಚಲುವಾದಿ ಮಾತನಾಡಿದರು.

ಸಭೆಯಲ್ಲಿ ಶಂಕ್ರಯ್ಯ ಹಿರೇಮಠ, ಗ್ರಾಪಂ ಅಧ್ಯಕ್ಷೆ ನೀಲವ್ವ ಮಾದರ, ಗ್ರಾಪಂ ಉಪಾಧ್ಯಕ್ಷ ಮಹಾಂತಗೌಡ ಪಾಟೀಲ, ತಹಸೀಲ್ದಾರ್‌ ವಾಸಯದೇವ ಸ್ವಾಮಿ, ಇಓ ಕೃಷ್ಣಪ್ಪ ಧರ್ಮರ, ಸುಶೀಲವ್ವ ಲಮಾಣಿ. ಶಂಭುಲಿಂಗಪ್ಪ ಸೊರಟೂರ, ವಿರೇಂದ್ರಗೌಡ ಪಾಟೀಲ, ಪರಮೇಶ ಲಮಾಣಿ, ರಮೇಶ ದನದಮನಿ, ನಾಗಪ್ಪ ವಡಕಣ್ಣವರ, ಲಲಿತಾ ಶಿವಳ್ಳಿ, ನೀಲವ್ವ ಪಾಟೀಲ, ಸುಶೀಲವ್ವ ತಳವಾರ, ಗಂಗಾಧರ ಕರಿನಿಂಗಣ್ಣವರ, ನೀಲಪ್ಪ ಗುಡ್ಡಣ್ಣವರ, ಫಾತೀಮಾ ಮುಲ್ಲಾನವರ, ಗೀತಾ ಪುರದ, ದ್ಯಾಮವ್ವ ಮೆಣಸಿನಕಾಯಿ, ಮಹಾಂತಪ್ಪ ಹರಿಜನ, ಪುಟ್ಟವ್ವ ಲಮಾಣಿ, ಚಿನ್ನಕ್ಕ ಲಮಾಣಿ ಇದ್ದರು,

ಸಭೆಯಲ್ಲಿ ತಾಪಂ ಇಓ ಕೃಷ್ಣಪ್ಪ ಧರ್ಮರ ಪ್ರಾಸ್ತಾವಿಕವಾಗಿ ಮಾತನಾಡಿದರು, ಗ್ರಾಪಂ ಪಿಡಿಓ ಮಂಜುನಾಥ ಮಲ್ಲೂರ ಸ್ವಾಗತಿಸಿದರು. ಈಶ್ವರ ಮೆಡ್ಲೇರಿ ಕಾರ್ಯಕ್ರಮ ನಿರ್ವಹಿಸಿದರು. ಗೊಜನೂರು ಗ್ರಾಮ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿ ಪ್ರಾರ್ಥನೆ ಮಾಡಿದರು.