ಅಭಿವೃದ್ಧಿ ಕಡೆಗೆ ಸರ್ಕಾರ ಗಮನಹರಿಸುತ್ತಿಲ್ಲ

| Published : Nov 23 2025, 03:30 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ರಾಯಬಾಗ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಎರಡೂವರೆ ಕಳೆದರೂ ಯಾರು ಸಿಎಂ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆಯೇ ಹೊರತು ರಾಜ್ಯದ ಅಭಿವೃದ್ಧಿ ಕಡೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ರಾಯಬಾಗ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಎರಡೂವರೆ ಕಳೆದರೂ ಯಾರು ಸಿಎಂ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆಯೇ ಹೊರತು ರಾಜ್ಯದ ಅಭಿವೃದ್ಧಿ ಕಡೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಆರೋಪಿಸಿದರು.

ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಗಾಗಿ ಜನತೆ ಸ್ಪಷ್ಟ ಬಹುಮತ ನೀಡಿ ಅಧಿಕಾರ ತಂದರೂ, ದಿನಬೆಳಗಾದರೆ ಮುಖ್ಯಮಂತ್ರಿ ಬದಲಾವಣೆಗಾಗಿ ದೆಹಲಿ ಕಡೆಗೆ ಮುಖ ಮಾಡುತ್ತಿದ್ದಾರೆ. ಇಡೀ ಆಡಳಿತ ದೆಹಲಿಯಲ್ಲಿ ಕುಳಿತುಕೊಂಡಿದೆ. ಇದರಿಂದ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಟೀಕಿಸಿದರು.

ಅಧಿಕಾರಿಗಳಿಗೆ ಯಾವುದೇ ಲಂಗುಲಗಾಮು ಇಲ್ಲದಂತಾಗಿದೆ. ಯಾವ ಮಂತ್ರಿಗಳು ಜನರ, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಇದರಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಅಧಿಕಾರಕ್ಕಾಗಿ ನಾಯಿ ನರಿಗಳಂತೆ ಕಚ್ಚಾಡದೇ, ರಾಜ್ಯದ ಜನತೆಗೆ ಒಳ್ಳೆಯ ಆಡಳಿತ ನೀಡಿ, ಇಲ್ಲವಾದರೆ ರಾಜೀನಾಮೆ ಕೊಟ್ಟು ಕೆಳಗೆ ಇಳಿಯಿರಿ ಎಂದು ಟೀಕಿಸಿದರು.ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದ ಅಂಗವಾಗಿ ಒಂದೇ ಭಾರತ- ಆತ್ಮನಿರ್ಭರ ಭಾರತ ಎಂಬ ಘೋಷವಾಕ್ಯದೊಂದಿಗೆ ದೇಶದಾದ್ಯಂತ ನಡೆಯುತ್ತಿರುವ ರಾಷ್ಟ್ರೀಯ ಏಕತಾ ನಡಿಗೆ ಅಭಿಯಾನಕ್ಕೆ ಶಾಸಕ ಡಿ.ಎಮ್.ಐಹೊಳೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ದೇಶದ ಹಲವು ಪ್ರಾಂತ್ಯಗಳನ್ನು ಒಗ್ಗೂಡಿಸಿ ಭಾರತವನ್ನು ಒಂದೇ ಸದೃಢ ದೇಶವನ್ನಾಗಿ ಮಾಡಿದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಬಗ್ಗೆ ಇಂದಿನ ಯುವಕರಿಗೆ ತಿಳಿಸಿ, ದೇಶದ ಏಕತೆಗೆ ಒಗ್ಗಟ್ಟು ಪ್ರದರ್ಶನ ಮಾಡುವುದರ ಮೂಲಕ, ದೇಶ ಮೊದಲು ಎಂಬ ಸಂಕಲ್ಪವನ್ನು ಯುವ ಶಕ್ತಿಯಲ್ಲಿ ಮೂಡಿಸಬೇಕಿದೆ ಎಂದರು.ಬಿಜೆಪಿ ರಾಯಬಾಗ ಮಂಡಲ ಬಿಎಲ್‌ಎ-2 ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರು, ಬಿ.ಎಲ್.ಎ ಅವರು ಮತದಾರರ ಪಟ್ಟಿ ಬಗ್ಗೆ ಅಧ್ಯಯನ ಮಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕಿದೆ. ಪಕ್ಷದ ಸಂಘಟನೆಗಾಗಿ ಪ್ರತಿಯೊಬ್ಬರು ತಳಮಟ್ಟದಿಂದ ಪ್ರಾಮಾಣಿಕ ಕೆಲಸ ಮಾಡಬೇಕು. ಇದರಿಂದ ಮುಂಬರುವ ಗ್ರಾಮ ಪಂಚಾಯತ, ಪಟ್ಟಣ ಪಂಚಾಯತಿ, ತಾಪಂ, ಜಿಪಂ, ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಮಹೇಶ ಭಾತೆ, ದುಂಡಪ್ಪಾ ಭೆಂಡವಾಡೆ, ಸದಾಶಿವ ಹಳಿಂಗಳಿ, ರಾಜಶೇಖರ ಖನದಾಳೆ, ರಾಜು ಹರಗಣ್ಣವರ, ಬಸಗೌಡ ಪಾಟೀಲ, ಅಮಿತ ಜಾಧವ, ಮಹಾದೇವ ಬೋರಗಾಂವೆ, ಪಿ.ಎ.ನಾಯಿಕ, ಅನೀಲ ಹಂಜೆ, ಬಸು ಅವ್ವನ್ನವರ, ಅರುಣ ಐಹೊಳೆ, ಶಿವಾನಂದ ನವನಾಳೆ, ಮಹಾದೇವ ಬೊರಗಾವೆ, ಮಹೇಶ ಕರಮಡಿ ಹಾಗೂ ಪಕ್ಷದ ಬಿಎಲ್‌ಎಗಳು, ಪಕ್ಷದ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು, ಮಹಿಳಾ ಮೋರ್ಚಾ, ಯುವ ಮೋರ್ಚಾ ಸದಸ್ಯರು ಸೇರಿ ಅನೇಕರು ಉಪಸ್ಥಿತರಿದ್ದರು.