ವಿದ್ಯುತ್ ಉಚಿತವಾಗಿ ನೀಡಬೇಕು ಹಾಗೂ ಸಹಕಾರ ಬ್ಯಾಂಕ್‌ಗಳ ಮೂಲಕ ಶೇ. ೪ರ ಬಡ್ಡಿದರದಲ್ಲಿ ೨೫ ಲಕ್ಷದವರೆಗೆ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು. ಅದೇ ರೀತಿ, ಕೆಎಂಎಫ್ ಮಾದರಿಯಲ್ಲಿ ಕೋಳಿ ಸಾಕಾಣಿಕೆದಾರರಿಗೆ ಸಹಾಯಧನ ನೀಡಬೇಕು ಮತ್ತು ಕೇಂದ್ರ ಸರ್ಕಾರದ ಕೃಷಿ ನೀತಿಯನ್ನು ಕೋಳಿ ಸಾಕಾಣಿಕೆ ಕ್ಷೇತ್ರಕ್ಕೂ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ. ಕೋಳಿ ಸಾಕಾಣಿಕೆದಾರರ ಹಿತಾಸಕ್ತಿ ಕಾಪಾಡಲು ಕುಕ್ಕುಟ ನಿಯಂತ್ರಣ ಕಾಯ್ದೆ ಜಾರಿಗೆ ತರಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ಕನ್ನಡಪ್ರಭ ವಾರ್ತೆ ಹಾಸನ
ಕೋಳಿ ಸಾಕಣೆದಾರರಿಗೆ ಪ್ರತಿ ಕೇಜಿಗೆ ಮೇ ೧೫ರಂದು ಸರಕಾರ ೧೦ ರು.ಗಳನ್ನು ನಿಗದಿಗೊಳಿಸಿದ್ದು, ಅದನ್ನು ತಕ್ಷಣ ಸರಕಾರ ಜಾರಿ ಮಾಡಬೇಕು ಹಾಗೂ ಕೋಳಿ ಸಾಕಾಣಿಕೆದಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಹಾಸನ ನಗರದಲ್ಲಿ ಅಖಿಲ ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎನ್.ಡಿ.ಚಂದ್ರಶೇಖರ್ ಅವರು ಅಬಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಸರ್ಕಾರ ನಿಗದಿಪಡಿಸಿರುವ ತಾತ್ಕಾಲಿಕ ೧೦ ದರವನ್ನು ತಕ್ಷಣ ಜಾರಿಗೊಳಿಸಬೇಕು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಲು ಸಮಿತಿಯನ್ನು ರಚಿಸಬೇಕು ಎಂದು ಒತ್ತಾಯಿಸಿದರು. ಕೋಳಿ ಸಾಕಾಣಿಕೆಯನ್ನು ಕೃಷಿ ಚಟುವಟಿಕೆಯಾಗಿ ಪರಿಗಣಿಸಿ ಕೃಷಿಕರಿಗೆ ದೊರೆಯುವ ವಿವಿಧ ಸೌಲಭ್ಯಗಳನ್ನು ಕೋಳಿ ಸಾಕಾಣಿಕೆದಾರರಿಗೂ ವಿಸ್ತರಿಸಬೇಕು. ವಿದ್ಯುತ್ ಉಚಿತವಾಗಿ ನೀಡಬೇಕು ಹಾಗೂ ಸಹಕಾರ ಬ್ಯಾಂಕ್‌ಗಳ ಮೂಲಕ ಶೇ. ೪ರ ಬಡ್ಡಿದರದಲ್ಲಿ ೨೫ ಲಕ್ಷದವರೆಗೆ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು. ಅದೇ ರೀತಿ, ಕೆಎಂಎಫ್ ಮಾದರಿಯಲ್ಲಿ ಕೋಳಿ ಸಾಕಾಣಿಕೆದಾರರಿಗೆ ಸಹಾಯಧನ ನೀಡಬೇಕು ಮತ್ತು ಕೇಂದ್ರ ಸರ್ಕಾರದ ಕೃಷಿ ನೀತಿಯನ್ನು ಕೋಳಿ ಸಾಕಾಣಿಕೆ ಕ್ಷೇತ್ರಕ್ಕೂ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ. ಕೋಳಿ ಸಾಕಾಣಿಕೆದಾರರ ಹಿತಾಸಕ್ತಿ ಕಾಪಾಡಲು ಕುಕ್ಕುಟ ನಿಯಂತ್ರಣ ಕಾಯ್ದೆ ಜಾರಿಗೆ ತರಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.