The government should respond to the demands of ASHA workers.

- ಬಿಜೆಪಿ ಮುಖಂಡ ವೀರೇಶ ಸಾಹುಕಾರ ಒತ್ತಾಯ

------------------

ಕನ್ನಡಪ್ರಭ ವಾರ್ತೆ ಹುಣಸಗಿ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿರಂತರವಾಗಿ ರಾಜ್ಯದ ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳು ಈಡೇರಿಕೆಗೆ ಅಹೋರಾತ್ರಿ ಧರಣಿ ಮುಂದುವರೆಸಿದ್ದು, ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕೆಂದು ಬಿಜೆಪಿ ಮುಖಂಡ ವೀರೇಶ ಸಾಹುಕಾರ ಚಿಂಚೋಳಿ ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎರಡು ಮೂರು ವರ್ಷಗಳಿಂದ ನಿರಂತರ ಅವರ ಬೇಡಿಕೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆಯನ್ನು ನೀಡಿ ಮಹಿಳೆಯರಿಗೆ ಅಗೌರವ ತೋರಿ, ಬೆಂಗಳೂರಿನ ಕೊರೆಯುವ ಚಳಿಯಲ್ಲಿ ಚಿಕ್ಕ ಮಕ್ಕಳನ್ನು ಕಟ್ಟಿಕೊಂಡು 8 ನೇ ದಿನದ ಧರಣಿಗೆ ಕವಡೆ ಕಿಮ್ಮತ್ತು ನೀಡುತ್ತಿಲ್ಲ. ರಾಜ್ಯದ ಆಶಾ ಕಾರ್ಯಕರ್ತೆಯರು ರಾಜ್ಯದ ಪ್ರತಿಯೊಂದು ಮನೆ ಮನೆಗೆ ತೆರಳಿ ಜನರ ಆರೋಗ್ಯವನ್ನು ವಿಚಾರಿಸಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಹಗಲು ರಾತ್ರಿ ಎನ್ನದೆ ದುಡಿಯುತ್ತಾರೆ. ಅಂದಾಜು 42 ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಶ್ರಮಿಸುತ್ತಾರೆ. ಇಂತಹ ಆಶಾ ಕಾರ್ಯಕರ್ತರು ಇಂದು ಗೌರವಯುತ ಜೀವನ ನಡೆಸಲು ಅಗತ್ಯವಾದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂತಹ ಪರಿಸ್ಥಿತಿಯಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುವುದು ಅನಿವಾರ್ಯ. ಈ ಹಿಂದೆ ಕರೋನಾ ಸಮಯದಲ್ಲಿ ಜೀವಕ್ಕೆ ಭಯ ಇರಲಾರದೇ ದುಡಿದ್ದಾರೆ. ಗಗನಕೇರಿರುವ ಬೆಲೆಗಳ ನಡುವೆ ಜೀವನ ಸಾಗಿಸಲು ಸಾಧ್ಯವಾಗದೆ ರಸ್ತೆಯಲ್ಲಿ ಮಲಗುವ ಪರಿಸ್ಥಿತಿ ಬಂದಿದೆ. ಮಹಿಳೆಯರು ಮಕ್ಕಳೊಂದಿಗೆ ಬೀದಿಯಲ್ಲಿ ಹಗಲು-ರಾತ್ರಿ ಬಿಸಿಲು-ಚಳಿ ಎನ್ನದೆ ಹೋರಾಟ ನಡೆಸುತ್ತಿದ್ದಾರೆ. ಪ್ರತಿಭಟನಾನಿರತ ಮಹಿಳೆಯ ಪರಿಸ್ಥಿತಿ ನಿಜಕ್ಕೂ ಕಳವಳಕಾರಿಯಾಗಿದೆ. ರಾತ್ರಿ ತೀವ್ರ ಚಳಿಯಲ್ಲೂ ಕಳೆದ 8 ದಿನಗಳಿಂದ ಮಕ್ಕಳೊಂದಿಗೆ ಮಲಗುತ್ತಿದ್ದಾರೆ. ರಾಜ್ಯ ಸರಕಾರ ಆಶಾ ಕಾರ್ಯಕರ್ತೆತರ ನ್ಯಾಯಾಯುತ ಬೇಡಿಕೆಗೆ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

----ಫೋಟೊ----

23ವೈಡಿಆರ್7