ಸಾರಾಂಶ
ಚಿನ್ಮಯ ಮಹಾವಿದ್ಯಾಲಯದಿಂದ ಪ್ರಾರಂಭಗೊಂಡ ತಿರಂಗಾ ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು, 21 ಅಡಿ ಉದ್ದ ಹಾಗೂ 14 ಅಡಿ ಅಗಲದ ಬೃಹತ್ ರಾಷ್ಟ್ರಧ್ವಜ ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು.
ಹುಬ್ಬಳ್ಳಿ:
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿನ್ಮಯ ಪದವಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಹಮ್ ಭಾರತಿ ಫೌಂಡೇಶನ್ ಆಶ್ರಯದಲ್ಲಿ ಸೋಮವಾರ ನಗರದಲ್ಲಿ ತಿರಂಗ ಯಾತ್ರೆ ಹಮ್ಮಿಕೊಳ್ಳಲಾಯಿತು.ಚಿನ್ಮಯ ಮಹಾವಿದ್ಯಾಲಯದಿಂದ ಪ್ರಾರಂಭಗೊಂಡ ತಿರಂಗಾ ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು, 21 ಅಡಿ ಉದ್ದ ಹಾಗೂ 14 ಅಡಿ ಅಗಲದ ಬೃಹತ್ ರಾಷ್ಟ್ರಧ್ವಜ ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು. ಭಾರತ ಮಾತಾ ಕೀ ಜೈ, ವಂದೇ ಮಾತರಂ ಜಯ ಘೋಷಣೆಗಳನ್ನು ಕೂಗಿದರು. ಚೆನ್ನಮ್ಮ ವೃತ್ತದಲ್ಲಿ ರಾಷ್ಟ್ರಗೀತೆ ಹಾಡುವ ಮೂಲಕ ಯಾತ್ರೆ ಸಂಪನ್ನಗೊಳಿಸಿದರು.
ಈ ವೇಳೆ ಹಮ್ ಭಾರತಿ ಫೌಂಡೇಶನ್ ಅಧ್ಯಕ್ಷ ಅನ್ವರ ಮುಲ್ಲಾ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವಗಳು ದೇಶದ ಪ್ರಮುಖ ಹಬ್ಬಗಳು. ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ, ಅವರ ತ್ಯಾಗ, ಬಲಿದಾನವನ್ನು ಮಕ್ಕಳಿಗೆ ಮನವರಿಕೆ ಮಾಡುವ ಸದುದ್ದೇಶದಿಂದ ಈ ತಿರಂಗಾ ಯಾತ್ರೆ ಆಯೋಜಿಸಲಾಗುತ್ತಿದೆ. ಹರ್ ಘರ್ ತಿರಂಗಾ ಅಭಿಯಾನದ ಅಡಿ ಪ್ರತಿ ಪರಿವಾರ ತಮ್ಮ ಮನೆಯ ಮೇಲೆ ರಾಷ್ಟ್ರಧ್ವಜಾರೋಹಣ ಮಾಡಿ, ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ಅರಿವು ಮೂಡಿಸುವಂತೆ ಸಲಹೆ ನೀಡಿದರು.ಈ ವೇಳೆ ಚಿನ್ಮಯ ಶಿಕ್ಷಣ ಸಮಿತಿ ಅಧ್ಯಕ್ಷ ಗಿರೀಶ ಉಪಾಧ್ಯಾಯ, ಧರ್ಮದರ್ಶಿಗಳಾದ ಪಾಂಡುರಂಗ ನಾಯ್ಡು, ಆರ್.ಎನ್. ಮೂರ್ತಿ, ಆಡಳಿತಾಧಿಕಾರಿ ವಿಶ್ವನಾಥ ರಾನಡೆ, ಪ್ರಾಚಾರ್ಯ ವಿನಾಯಕ ಬಿ.ಕೆ, ಉಪನ್ಯಾಸಕ ಮಲ್ಲನಗೌಡ ಪಾಟೀಲ, ಹಮ್ ಭಾರತಿ ಫೌಂಡೇಶನ್ ಸದಸ್ಯ ಅಶೋಕ ತೆಲಗಾರ, ಇಮ್ಮಿಯಾಜ ಮುಲ್ಲಾ, ಷಣ್ಮುಖ ಕೋಳುರ, ಮಲ್ಲಿಕಾರ್ಜುನ ತೊಟಗಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.