ಯಾವುದೇ ಶಸ್ತ್ರಾಸ್ತ್ರ ಬಳಸದೇ ಅಸಹಕಾರ ಮತ್ತು ಸತ್ಯಾಗ್ರಹದ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಕನ್ನಡಪ್ರಭವಾರ್ತೆ, ತುರುವೇಕೆರೆ

ಸತ್ಯ ಅಹಿಂಸಾ ಮಾರ್ಗದಿಂದ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹಾನ್ ಮಾನವತಾವಾದಿ ಮಹಾತ್ಮ ಗಾಂಧೀಜಿ ಎಂದು ತಹಸೀಲ್ದಾರ್ ಕುಂಞ ಅಹಮದ್ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಮಹಾತ್ಮಗಾಂಧಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ ತ್ಯಾಗ ಬಲಿದಾನಗಳಿಂದ ಬಂದ ಸ್ವಾತಂತ್ರ್ಯದ ನೇತೃತ್ವ ವಹಿಸಿದ್ದ ಗಾಂಧೀಜಿ ವಿಶ್ವಕ್ಕೆ ಮಾದರಿಯಾಗಿದ್ದಾರೆ. ಯಾವುದೇ ಶಸ್ತ್ರಾಸ್ತ್ರ ಬಳಸದೇ ಅಸಹಕಾರ ಮತ್ತು ಸತ್ಯಾಗ್ರಹದ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಗಾಂಧಿಯವರ ಅಸಹಕಾರ ಮತ್ತು ಅಹಿಂಸಾ ತತ್ವವನ್ನು ವಿಶ್ವವೇ ಅಳವಡಿಸಿಕೊಳ್ಳಬೇಕಾಗಿದೆ. ಶಾಸ್ತ್ರಿಯವರ ಸರಳತೆ ಹಾಗೂ ದೇಶಾಭಿಮಾನ ಮತ್ತು ಪ್ರಾಮಾಣಿಕತೆ ಇಂದಿನ ದಿನಗಳಲ್ಲಿ ಎಲ್ಲರಿಗೂ ಅತ್ಯಗತ್ಯವಾಗಿ ಬೇಕಾಗಿದೆ ಎಂದು ಹೇಳಿದರು.

ಕ್ಷೇತ್ರಶಿಕ್ಷಣಾಧಿಕಾರಿ ಎನ್. ಸೋಮಶೇಖರ್, ಪ್ರೊ. ಪುಟ್ಟರಂಗಪ್ಪ, ಆನಂದರಾಜು ಸೇರಿ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಹಾಜರಿದ್ದರು.