ಅಸ್ಪೃಶ್ಯತೆ, ಜಾತಿವಾದ ವಿರುದ್ಧ ಹೋರಾಡಿದ ಮಹನೀಯ ನಾರಾಯಣಗುರು: ಅಶೋಕ್ ಕುಮಾರ್

| Published : Sep 09 2025, 01:00 AM IST

ಅಸ್ಪೃಶ್ಯತೆ, ಜಾತಿವಾದ ವಿರುದ್ಧ ಹೋರಾಡಿದ ಮಹನೀಯ ನಾರಾಯಣಗುರು: ಅಶೋಕ್ ಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ತಹಸೀಲ್ದಾರ್ ಸುದರ್ಶನ್ ಯಾದವ್ ಮತಿತ್ತರರು ನಾರಾಯಣ ಗುರುಗಳ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಿಂತಾಮಣಿ

ಸಮಾಜದಲ್ಲಿ ತಾಂಡವವಾಡುತ್ತಿದ್ದ ಅಸ್ಪೃಶ್ಯತೆ, ಜಾತಿವಾದ, ಅಂಧಕಾರ, ಮತಭೇದಗಳ ವಿರುದ್ಧ ಹೋರಾಟ ಮಾಡುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದ ಮಹನೀಯ ನಾರಾಯಣಗುರುಗಳೆಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆಶೋಕ್ ಕುಮಾರ್ ನುಡಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಆರ್ಯ ಈಡಿಗರ ಕ್ಷೇಮಾಭಿವೃದ್ಧಿ ಸಂಘದಿಂದ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಆರ್ಯ ಈಡಿಗರ ಸಂಘದ ಅಧ್ಯಕ್ಷ ಚಿನ್ನಪ್ಪ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿ ಜಾತಿ, ಮತ, ಭೇದಗಳ ವಿರುದ್ಧ ಹೋರಾಡಿ, ಸಮಾಜದಲ್ಲಿನ ತಾರತಮ್ಯಗಳನ್ನು ಕಡಿಮೆ ಮಾಡಲು ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟ ಮಹಾನ್ ವ್ಯಕ್ತಿ, ಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರು ಎಂಬ ಸತ್ಯವಾಕ್ಯವನ್ನು ಜನತೆಗೆ ಸಾರಿ ಸಮಾಜದ ಸುಧಾರಣೆಗಾಗಿ ದುಡಿದ ಮಹಾನ್ ವ್ಯಕ್ತಿ ಎಂದರು.

ನಾರಾಯಣ ಗುರುಗಳ ತತ್ವ, ಸಿದ್ಧಾಂತ, ಆದರ್ಶ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಬೇಕೆಂದರು. ಆರ್ಯ ಈಡಿಗ ಸಮುದಾಯದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಸಮುದಾಯದಲ್ಲಿ ಸಾಧನೈಗೆದ ಹಲವು ಹಿರಿಯರಿಗೆ ಆತ್ಮೀಯವಾಗಿ ಶಾಲು ಹೊದಿಸಿ ಫಲ, ತಾಂಬೂಲ ನೀಡಿ ಸನ್ಮಾನಿಸಲಾಯಿತು.

ತಹಸೀಲ್ದಾರ್ ಸುದರ್ಶನ್ ಯಾದವ್ ಮತಿತ್ತರರು ನಾರಾಯಣ ಗುರುಗಳ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಗರಸಭೆ ಅಧ್ಯಕ್ಷ ಜಗನ್ನಾಥ್, ಬಿಇಒ ಉಮಾದೇವಿ, ನಾಡಕಚೇರಿ ಶಿರಸ್ತೇದಾರ್ ಶೋಭಾ, ಆರ್ಯ ಈಡಿಗರ ಸಂಘದ ಅಧ್ಯಕ್ಷ ಚಿನ್ನಪ್ಪ, ಎಪಿಎಂಸಿ ಮಾಜಿ ನಿರ್ದೇಶಕ ಚಲಪತಿ, ಉಪಾಧ್ಯಕ್ಷ ಅಗ್ರೀಗೋಲ್ಡ್ ಶ್ರೀನಿವಾಸ್, ಸುಧಾಶ್ರೀ ಚಂದ್ರಶೇಖರ್, ಕಾರ್ಯದರ್ಶಿ ವೆಂಕಟರಾಯಪ್ಪ, ಖಜಾಂಚಿ ಕೆ.ವಿ ನಾಗರಾಜ್ ಮತಿತ್ತರರು ಉಪಸ್ಥಿತರಿದ್ದರು.