ಸಾರಾಂಶ
ನರಗುಂದ: ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಿಂದ ಮತದಾರರ ಪಾತ್ರ ಮುಖ್ಯವಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಲು ಮತದಾನ ಮಹತ್ವದ್ದಾಗಿದೆ ಎಂದು ಸಹಾಯಕ ನಿರ್ದೇಶಕ ತಾಲೂಕು ಅಕ್ಷರ ದಾಸೋಹ ಕಾರ್ಯಕ್ರಮದ ಅಧಿಕಾರಿ ಆನಂದ್ ಭೋವಿ ಹೇಳಿದರು.
ಭಾರತ ಸರ್ಕಾರ ನೆಹರು ಯುವ ಕೇಂದ್ರ, ಗದಗ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸಮಿತಿ, ಶ್ರೀ ಯಡೆಯೂರ ಸಿದ್ದಲಿಂಗೇಶ್ವರ ಶಿಕ್ಷಣ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ನಡೆದ ಮತದಾರರ ಜಾಗೃತಿ ಕಾರ್ಯಕ್ರಮದ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.ಭಾರತ ದೇಶ ಪ್ರಜಾಪ್ರಭುತ್ವ ದೇಶವಾಗಿದೆ. ಆದ್ದರಿಂದ ನಾವು ಪ್ರತಿಯೊಬ್ಬರೂ ಯಾವುದೇ ಹಣ, ಹೆಂಡದ ಆಮಿಷಕ್ಕೆ ಒಳಗಾಗದೇ ಒಳ್ಳೆಯ ವ್ಯಕ್ತಿಗೆ ಚುನಾವಣೆಯಲ್ಲಿ ಮತದಾನ ಮಾಡಿದರೆ ಮಾತ್ರ ಭಾರತ ದೇಶ ಜಗತ್ತಿನಲ್ಲಿ ಅಭಿವೃದ್ಧಿಶೀಲ ರಾಷ್ಟ್ರವಾಗಲು ಸಾಧ್ಯವಾಗುತ್ತದೆ ಎಂದರು.
ತಹಸೀಲ್ದಾರ್ ಶ್ರೀಶೈಲ ತಳವಾರ ಮಾತನಾಡಿ, ಜಗತ್ತಿನಲ್ಲಿಯೇ ಅತಿ ದೊಡ್ಡ ಸಂವಿಧಾನ ಹೊಂದಿರುವ ಭಾರತದಲ್ಲಿ ಚುನಾವಣೆ ಪಾತ್ರ ಮಹತ್ವದ್ದಾಗಿದೆ. ಪ್ರತಿ ವಿದ್ಯಾರ್ಥಿಯು ಹಳ್ಳಿಗಳಲ್ಲಿ ಮತದಾನದ ಬಗ್ಗೆ ತಿಳಿ ಹೇಳಬೇಕು ಎಲ್ಲರೂ ಸಾಮಾಜಿಕವಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.ತಾಪಂ ಅಧಿಕಾರಿ ಎಸ್. ಕೆ .ಇನಾಮದಾರ ಮಾತನಾಡಿ, ಸಂವಿಧಾನ ನೀಡಿರುವ ಪವಿತ್ರವಾದ ಮತದಾನದ ಹಕ್ಕನ್ನು ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ, ನಿಮ್ಮ ಮತವನ್ನು ಹಣ ಹೆಂಡಕ್ಕೆ ವಸ್ತುಗಳಿಗೆ ಮಾರಿಕೊಳ್ಳದೆ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಹೇಳಿದರು.
ಗದಗಿನ ಜಿಲ್ಲಾ ಯೂತ್ ಆಫೀಸರ್ ಹಾಗೂ ನೆಹರು ಯುವ ಕೇಂದ್ರದ ರಂಜಿನಿ ಎನ್. ಆರ್‌ಡಿಪಿಆರ್ ಸಂಸ್ಥೆಯ ದ್ವಿತೀಯ ದರ್ಜೆ ಲೆಕ್ಕಪರಿಶೋಧಕರಾದ ಪ್ರದೀಪ್ ಕದಂ, ಕಾಲೇಜಿನ ಪ್ರಾಚಾರ್ಯ ಆರ್.ಬಿ. ಪಾಟೀಲ್ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.ಸುನೀಲ ಕುರುಡಕೇರಿ ಸ್ವಾಗತಿಸಿದರು. ಉಪನ್ಯಾಸಕ ಎಂ.ಪಿ. ಕ್ಯಾತನಗೌಡ್ರ ಕಾರ್ಯಕ್ರಮವನ್ನು ನಿರೂಪಿಸಿದರು. ಬಸವರಾಜ ಕುಮ್ಮಿ ವಂದಿಸಿದರು.
;Resize=(128,128))
;Resize=(128,128))
;Resize=(128,128))