ಸಾರಾಂಶ
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದ್ದು ಹರ್ಷ ತಂದಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
ಹಿರಿಯೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಮತದಾರರು ಕೈ ಹಿಡಿದಿದ್ದರಿಂದ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದೆ. ಜನಪರ ಕೆಲಸ ಮಾಡಲು ಮತ್ತಷ್ಟು ಉತ್ಸಾಹ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು.
ತಾಲೂಕಿನ ಧರ್ಮಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದ್ದು ಹರ್ಷ ತಂದಿದೆ.
ಚನ್ನಪಟ್ಟಣ ಕ್ಷೇತ್ರದ್ದು ಸ್ವಲ್ಪ ಟೆನ್ಶನ್ ಇತ್ತು. ಆದರೆ ಅತ್ಯಧಿಕ ಮತಗಳಿಂದ ಸಿಪಿ ಯೋಗೇಶ್ವರ್ ಅವರು ಗೆಲುವಿನ ನಗೆ ಬೀರಿದ್ದಾರೆ. ಈ ಚುನಾವಣೆ ಫಲಿತಾಂಶದಿಂದ ಇನ್ನಷ್ಟು ಹುರುಪು ಬಂದಿದ್ದು ಕಾಂಗ್ರೆಸ್ ಸರ್ಕಾರ ಮತ್ತಷ್ಟು ಜನಪರವಾಗಿ ಕೆಲಸ ಮಾಡಲಿದೆ ಎಂದರು.
;Resize=(690,390))
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))