ಚುನಾವಣೆ ನಂತರ ಗ್ಯಾರಂಟಿ ಯೋಜನೆ ರದ್ದಾಗಲಿವೆ: ಹಾಲಪ್ಪ ಆಚಾರ

| Published : May 03 2024, 01:06 AM IST

ಚುನಾವಣೆ ನಂತರ ಗ್ಯಾರಂಟಿ ಯೋಜನೆ ರದ್ದಾಗಲಿವೆ: ಹಾಲಪ್ಪ ಆಚಾರ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ.

ಕನ್ನಡಪ್ರಭ ವಾರ್ತೆ ಯಲಬುರ್ಗಾ

ಕಾಂಗ್ರೆಸ್‌ನ ಪುಕ್ಕಟೆ ಯೋಜನೆಗಳಿಗೆ ರಾಜ್ಯದ ಜನತೆ ಮರುಳಾಗಬೇಡಿ. ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದರು.

ತಾಲೂಕಿನ ಬೇವೂರು ಗ್ರಾಮದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಪರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದಿದ್ದರೆ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಉಚಿತ ವಿದ್ಯುತ್ ಯೋಜನೆ ರದ್ದುಗೊಳಿಸುತ್ತೇವೆ ಎಂದು ಶಾಸಕರು ಹೇಳುತ್ತಿರುವುದನ್ನು ಗಮನಿಸಿದರೆ ಲೋಕಸಭಾ ಚುನಾವಣೆ ಬಳಿಕ ಈ ಯಾವ ಗ್ಯಾರಂಟಿ ಯೋಜನೆಗಳು ಇರುವುದಿಲ್ಲ ಹೀಗಾಗಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಡಿ ಎಂದರು.

ರಾಜ್ಯದಲ್ಲಿ ಸರ್ಕಾರ ಬಂದು 8 ತಿಂಗಳಾದರೂ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಲ್ಲ. ಗ್ಯಾರಂಟಿ ಯೋಜನೆಗಳು ಕೇವಲ ಉಳ್ಳವರ ಪಾಲಾಗಿವೆ. ಜನಸಾಮಾನ್ಯರಿಗೆ ಯಾವುದೇ ಯೋಜನೆಗಳು ದೊರೆಯುತ್ತಿಲ್ಲ. ಇನ್ನೂ ಎಸ್ಸಿ, ಎಸ್ಟಿ ಸಮುದಾಯದವರ ಅಭಿವೃದ್ಧಿಯ ಕೋಟ್ಯಾಂತರ ಅನುದಾನವನ್ನು ಸಹ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದಾರೆ. ಇವರು ದೀನ ದಲಿತರ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಾರೆ. ಹೀಗಾಗಿ ಕಾಂಗ್ರೆಸ್ಸಿಗೆ ಮತ ಹಾಕದೆ ಬಿಜೆಪಿಗೆ ಮತ ನೀಡಬೇಕು ಎಂದು ಹೇಳಿದರು.

ಮಾಜಿ ಸಚಿವ ಎಸ್.ಕೆ. ಬೆಳ್ಳಿಬ್ಬಿ ಮಾತನಾಡಿ, ಈಬಾರಿ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್‌ನ್ನು ಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಸವಲಿಂಗಪ್ಪ ಭೂತೆ, ಹನುಮಂತರಾಯ ಬಿರಾದಾರ, ಜಿಪಂ ಮಾಜಿ ಸದಸ್ಯ ಅರವಿಂದಗೌಡ ಪಾಟೀಲ, ಜೆಡಿಎಸ್ ಜಿಲ್ಲಾ ವಕ್ತಾರ ಮಲ್ಲನಗೌಡ ಕೋನನಗೌಡ, ಗ್ರಾಪಂ ಅಧ್ಯಕ್ಷೆ ಅಂದಮ್ಮ ಬಳಿಗಾರ, ಬಿಜೆಪಿ ಅಧ್ಯಕ್ಷ ಮಾರುತಿ ಗಾವರಾಳ, ಬಸವರಾಜ ಗೌರಾ, ಶಿವಶಂಕರರಾವ್ ದೇಸಾಯಿ, ಸಿ.ಎಚ್. ಪಾಟೀಲ, ಶರಣಪ್ಪ ಈಳಗೇರ, ರತನ್ ದೇಸಾಯಿ, ಶಂಕ್ರಪ್ಪ ಸುರಪೂರ, ಅಯ್ಯನಗೌಡ ಕೆಂಚಮ್ಮನವರ್, ಅಯ್ಯಪ್ಪ ಗುಳೇದ, ಶಿವಪ್ಪ ವಾದಿ, ಬಸವರಾಜ ಗುಳಗುಳಿ, ಶರಣಪ್ಪ ಗುಂಗಾಡಿ, ಗಾಳೇಪ್ಪ ಓಜನಹಳ್ಳಿ, ಎಂ.ಬಿ. ಅಳವಂಡಿ ಮತ್ತಿತರರಿದ್ದರು.