ಸಮಾನತೆಯ ಪರಿಕಲ್ಪನೆ ಬಿತ್ತದ ಗುರು

| Published : Sep 08 2025, 01:00 AM IST

ಸಾರಾಂಶ

ಜಾತಿ ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿಯೂ ಸಮಾನತೆಯ ಪರಿಕಲ್ಪನೆಯನ್ನು ಬಿತ್ತಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಮತ್ತು ಹೋರಾಟ ಪ್ರತಿಯೊಬ್ಬರಿಗೂ ಆದರ್ಶವಾಗಬೇಕು ಎಂದು ಆರ್ಯ ಈಡಿಗರ ಸಂಘದ ತಾಲೂಕು ಘಟಕದ ಅಧ್ಯಕ್ಷ ಸುರೇಶ್ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ ಜಾತಿ ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿಯೂ ಸಮಾನತೆಯ ಪರಿಕಲ್ಪನೆಯನ್ನು ಬಿತ್ತಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಮತ್ತು ಹೋರಾಟ ಪ್ರತಿಯೊಬ್ಬರಿಗೂ ಆದರ್ಶವಾಗಬೇಕು ಎಂದು ಆರ್ಯ ಈಡಿಗರ ಸಂಘದ ತಾಲೂಕು ಘಟಕದ ಅಧ್ಯಕ್ಷ ಸುರೇಶ್ ಹೇಳಿದರು.ಅವರು ನಗರದ ತಾಲೂಕು ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ನಾರಾಯಣಗುರು ಜಯಂತಿಯಲ್ಲಿ ಮಾತನಾಡಿದರು. ಕೇರಳದಲ್ಲಿ ಜನಿಸಿದ ನಾರಾಯಣ ಗುರುಗಳು ಜಾತಿ, ಧರ್ಮವನ್ನು ಮೀರಿ ಬೆಳೆದರು. ಕೆಲಜಾತಿಯ ಜನರಿಗೆ ದೇವಾಲಯಗಳಿಗೆ ಪ್ರವೇಶ ನೀಡದ ಸಮಯದಲ್ಲಿ ಕೆಲಜಾತಿಯವರಿಗಾಗಿ ದೇವಾಲಯಗಳನ್ನು ನಿರ್ಮಿಸಿ ಸಮಾಜದಲ್ಲಿ ಹೊಸ ಕ್ರಾಂತಿಯನ್ನು ಮೂಡಿಸಿದರು ಇಂತಹ ಮಹನೀಯ ಯುವಜನತೆ ಆದರ್ಶವಾಗಬೇಕು ಎಂದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಆನಂದಕುಮಾರ್, ಈಡಿಗರ ಸಂಘದ ಕಾರ್ಯದರ್ಶಿ ವೆಂಕಟಶ್ವಾಮಯ್ಯ, ಪಡಿ ರಮೇಶ್, ಕೇಶವ, ರಾಜಣ್ಣ, ಶ್ರೀನಿವಾಸ್, ರಾಮಸ್ವಾಮಿ, ಕುಮಾರ್, ರಾಮು, ರಾಮಾಂಜಿ, ನಿವೃತ್ತ ಮುಖ್ಯಶಿಕ್ಷಕ ರಾಜಣ್ಣ, ಶಿಕ್ಷಕಿ ಸೌಭಾಗ್ಯ ಸೇರಿದಂತೆ ಹಲವರು ಹಾಜರಿದ್ದರು.