ಸಾರಾಂಶ
ಶಾಸಕ ಜೆ.ಎಚ್.ಶ್ರೀನಿವಾಸ್ ಅವರ ಅದ್ಧೂರಿ ಜನುಮ ದಿನ ಆಚರಣೆ
ಕನ್ನಡಪ್ರಭ ವಾರ್ತೆ, ತರೀಕೆರೆಜನರ ಹೃದಯಪೂರ್ವಕ ಆಶೀರ್ವಾದವೇ ನನಗೆ ಬಹಳ ಮುಖ್ಯವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಬುಧವಾರ ಪುರಸಭೆ ಉಪಾಧ್ಯಕ್ಷೆ ಗಿರಿಜಾ ಪ್ರಕಾಶ್ ವರ್ಮ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ರಿಂದ ಪಟ್ಟಣದ ಶ್ರೀ ಗುರು ರೇವಣ ಸಿದ್ದೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿ ನಡೆದ ಶಾಸಕ ಜಿ.ಎಚ್.ಶ್ರೀನಿವಾಸ್ ಅವರ ಜನುಮದಿನದ ಅದ್ಧೂರಿ ಆಚರಣೆಯಲ್ಲಿ ಬೃಹತ್ ಕೇಕ್ ಕತ್ತರಿಸಿ ಮಾತನಾಡಿದರು.ಪುರಸಭೆ ಉಪಾಧ್ಯಕ್ಷೆ ಗಿರಿಜಾ ಪ್ರಕಾಶ್ ವರ್ಮ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಅವರು ನನ್ನ ಜನುಮ ದಿನ ಕಾರ್ಯಕ್ರಮ ಬಹಳ ಚೆನ್ನಾಗಿ ಆಯೋಜಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸುತ್ತಿರುವುದು ನನಗೆ ಅತ್ಯಂತ ಸಂತೋಷ ತಂದಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಅನೇಕ ಹಿರಿಯರು, ಯುವಕರು, ಅಭಿಮಾನಿಗಳ ಆಶೀರ್ವಾದ ನನ್ನ ಮೇಲಿರಲಿ ಎಂದು ಹೇಳಿದರು.ತರೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಫಾರೂಕ್ ಮಾತನಾಡಿ ಸರಳ ವ್ಯಕ್ತಿತ್ವದ ಶಾಸಕ ಜಿ.ಎಚ್.ಶ್ರೀನಿವಾಸ್ ಎಲ್ಲರನ್ನೂವಿಶ್ವಾಸದಿಂದ ಜೊತೆಗೂಡಿ ಕರೆದುಕೊಂಡು ಹೋಗುತ್ತಾರೆ. ಶಾಸಕರಿಗೆ ಅವರ ಪತ್ನಿ ವಾಣಿ ಶ್ರೀನಿವಾಸ್ ಬೆನ್ನೆಲುಬಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಎರಡು ಬಾರಿ ಶಾಸಕರಾಗಿದ್ದಾರೆ. ಇದು ಹೀಗೆ ಮುಂದುವರಿಯಬೇಕು ಎಂದು ತಿಳಿಸಿದರು.
ಪುರಸಭೆ ಉಪಾಧ್ಯಕ್ಷೆ ಗಿರಿಜ ಪ್ರಕಾಶ್ ವರ್ಮ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಅಚ್ಚುಕಟ್ಟಾಗಿ ಜನುಮ ದಿನ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಹೇಳಿದರು.ಕಾರ್ಯಕ್ರಮದ ಪ್ರಾಯೋಜಕರಾದ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಮಾತನಾಡಿ ಶಾಸಕ ಜಿ.ಎಚ್.ಶ್ರೀನಿವಾಸ್ ತರೀಕೆರೆ ವಿಧಾನ ಸಭಾ ಕ್ಷೇತ್ರದಾದ್ಯಂತ ಅನೇಕ ಅಭಿವೃದ್ಧಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದ ಅವರು ಶಾಸಕರಿಗೆ ಜನುಮ ದಿನದ ಶುಭಾಷಯ ಕೋರಿದರು.ಪುರಸಭೆ ಅಧ್ಯಕ್ಷ ವಸಂತಕುಮಾರ್, ಉಪಾಧ್ಯಕ್ಷೆ ಗಿರಿಜಾ ಪ್ರಕಾಶ್ ವರ್ಮ, ವಾಣಿ ಶ್ರೀನಿವಾಸ್, ಜಿಪಂ ಮಾಜಿ ಅಧ್ಯಕ್ಷ ಎಚ್.ವಿಶ್ವನಾಥ್, ಎಂ. ರಂಗಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸಮೀವುಲ್ಲಾ ಷರೀಫ್, ಬ್ಲಾಕ್ ಕಾಂಗ್ರೆಸ್ ಕಿಸಾನ್ ಸೆಲ್ ಅಧ್ಯಕ್ಷ ಟಿ.ಆರ್.ಗಿರೀಶ್, ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಯಾನಂದ್, ರಾಘವೇಂದ್ರ, ವೇಣುಗೋಪಾಲ್, ಜಗದೀಶ್, ಪುರಸಭಾ ಮಾಜಿ ಅಧ್ಯಕ್ಷ ಟಿ.ಎಸ್.ಧರ್ಮರಾಜ್, ಎಂ.ನಾಗರಾಜ್, ಟಿ.ಕೆ. ರಮೇಶ್, ಎಚ್.ಎನ್. ಮಂಜುನಾಥ್, ತಾಪಂ ಮಾಜಿ ಸದಸ್ಯ ಅಸ್ಲಾಂಖಾನ್, ಅಮ್ಜದ್ ಪಾಷ, ಹಾದಿಕೆರೆ ರಾಜು, ಅಲ್ಪಸಂಖ್ಯಾತರ ವಿಭಾಗ ಅಧ್ಯಕ್ಷ ಮಹಮದ್ ಇರ್ಷಾದ್ ಉಪ ವಿಭಾಗಾಧಿಕಾರಿ ಡಾ.ಕೆ.ಜೆ. ಕಾಂತರಾಜ್, ಸ.ನೌ.ಸಂಘದ ಅಧ್ಯಕ್ಷ ಅನಂತಪ್ಪ ಮತ್ತಿತರರು ಭಾಗವಹಿಸಿದ್ದರು.
29ಕೆಟಿಆರ್.ಕೆ.8ಃತರೀಕೆರೆಯಲ್ಲಿ ಹಮ್ಮಿಕೊಂಡಿದ್ದ ಶಾಸಕ ಜಿ.ಎಚ್.ಶ್ರೀನಿವಾಸ್ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಶಾಸಕ ಜಿ.ಹೆಚ್.ಶ್ರೀನಿವಾಸ್ ಅವರನ್ನು ಸನ್ಮಾನಿಸಿದರು. ಪುರಸಭೆ ಅಧ್ಯಕ್ಷ ವಸಂತಕುಮಾರ್, ಉಪಾಧ್ಯಕ್ಷೆ ಗಿರಿಜಾ ಪ್ರಕಾಶ್ ವರ್ಮ, ವಾಣಿ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಫಾರೂಕ್ ಮತ್ತಿತರರು ಇದ್ದರು.