ನವಿಲಹಳ್ಳಿ ಸಿದ್ದರಹಳ್ಳಿ ಕಂದಾವರ ತೊಳಲು ಸೇರಿದಂತೆ ಅಕ್ಕಪಕ್ಕದ ಗ್ರಾಮದಲ್ಲಿ ಸುಮಾರು ೨೫ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಲಕ್ಷಾಂತರ ಬೆಳೆ ಹಾನಿ ಮಾಡುವುದರ ಜೊತೆಗೆ ಶಾಲೆ ವಿದ್ಯಾರ್ಥಿಗಳು ಈ ಭಾಗದಲ್ಲಿ ತಿರುಗಾಡದ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳಾಗಲಿ ಆನೆ ಓಡಿಸುವ ಇಟಿಎಫ್ ಸಿಬ್ಬಂದಿಯಾಗಲಿ ಇದರ ಬಗ್ಗೆ ಗಮನ ಹರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಮೂಡಿಗೆರೆ ಬೇಲೂರು ರಾಷ್ಟ್ರೀಯ ಹೆದ್ದಾರಿ ತಡೆದು ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೇಲೂರು
ತಾಲೂಕಿನ ತೊಳಲು, ನವಿಲಹಳ್ಳಿ ಭಾಗದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡಿನಿಂದ ಅಪಾರ ಬೆಳೆ ಹಾನಿ ಸಂಭವಿಸುತ್ತಿದ್ದು ಗ್ರಾಮಸ್ಥರು ಗುರುವಾರ ರಸ್ತೆ ಬಂದ್ ಮಾಡಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ನವಿಲಹಳ್ಳಿ ಸಿದ್ದರಹಳ್ಳಿ ಕಂದಾವರ ತೊಳಲು ಸೇರಿದಂತೆ ಅಕ್ಕಪಕ್ಕದ ಗ್ರಾಮದಲ್ಲಿ ಸುಮಾರು ೨೫ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಲಕ್ಷಾಂತರ ಬೆಳೆ ಹಾನಿ ಮಾಡುವುದರ ಜೊತೆಗೆ ಶಾಲೆ ವಿದ್ಯಾರ್ಥಿಗಳು ಈ ಭಾಗದಲ್ಲಿ ತಿರುಗಾಡದ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳಾಗಲಿ ಆನೆ ಓಡಿಸುವ ಇಟಿಎಫ್ ಸಿಬ್ಬಂದಿಯಾಗಲಿ ಇದರ ಬಗ್ಗೆ ಗಮನ ಹರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಮೂಡಿಗೆರೆ ಬೇಲೂರು ರಾಷ್ಟ್ರೀಯ ಹೆದ್ದಾರಿ ತಡೆದು ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ಸ್ಥಳೀಯ ಗ್ರಾಮಸ್ಥರಾದ ತಾಲೂಕು ಮಾಜಿ ಸದಸ್ಯ ಕುಮಾರ್, ಶಶಿಕುಮಾರ್ ಕಳೆದ ನಾಲ್ಕೈದು ದಿನಗಳಿಂದ ಈ ಭಾಗದಲ್ಲಿ ೨೫ ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಸುಮಾರು ದಿನಗಳಿಂದ ಬೀಡು ಬಿಟ್ಟು ಬೆಳೆ ಹಾನಿ ಮಾಡುತ್ತಿವೆ. ಇದರ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಒಂದು ತಿಂಗಳ ಹಿಂದಷ್ಟೇ ಜೋಳ, ಕಾಫಿ ಅಡಿಕೆ ಮತ್ತು ಇನ್ನಿತರ ಬೆಳೆಗಳನ್ನು ತುಳಿದು ಹಾಳು ಮಾಡಿ ಹೆಚ್ಚು ಹಾನಿಮಾಡುತ್ತಿದೆ. ಇದಲ್ಲದೆ ಮೂರು ದಿನಗಳಿಂದ ಯಾವುದೇ ಕೂಲಿ ಕಾರ್ಮಿಕರು ಕೆಲಸಕ್ಕೆ ಬಾರದೆ ಕಾಫಿ ಬೆಳೆ ಸಂಪೂರ್ಣ ಹಾಳಾಗುತ್ತಿದೆ. ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಕಣ್ಣೊರೆಸುವ ನಾಟಕದ ಮಾತುಗಳು ನಮಗೆ ಅವಶ್ಯಕತೆ ಇಲ್ಲ. ಕೂಡಲೇ ಅವುಗಳನ್ನು ಇಲ್ಲಿಂದ ಓಡಿಸಬೇಕೆಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ವೃತ್ತ ನಿರೀಕ್ಷಕ ಜಗದೀಶ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಬಂದ ಸಂದರ್ಭದಲ್ಲಿ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ವೃತ್ತನಿರೀಕ್ಷಕ ವಲಯ ಅರಣ್ಯ ಇಲಾಖೆ ಅಧಿಕಾರಿ ಯತೀಶ್, ಪ್ರತಿಭಟನಾಕಾರರ ಮನವೊಲಿಸಿ ಇನ್ನೆರಡು ದಿನಗಳಲ್ಲಿ ಕಾಡಾನೆಗಳನ್ನು ಇಲ್ಲಿಂದ ಓಡಿಸುತ್ತೇವೆ ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.ಈ ಸಂದರ್ಭದಲ್ಲಿ ಬೆಳೆಗಾರರ ಸಂಘದ ಉಪಾಧ್ಯಕ್ಷ ವೆಂಕಟೇಶ್, ವಸಂತ್ ಕುಮಾರ್, ರಘು, ಕೋಮರಾಜ್, ಸುನೀಲ್, ದೇವರಾಜ್, ರೋಷನ್, ಅಶ್ವಥ್, ಮಹೇಶ್ , ಸುಮನ್, ಅನಿಲ್, ಮಂಜು ಇತರರು ಹಾಜರಿದ್ದರು.