ಪೇದೆ ನೇಮಕಾತಿಯಿಂದ ಅಭ್ಯರ್ಥಿ ಹೆಸರು ಕೈಬಿಟ್ಟಿದ್ದಕ್ಕೆ ಹೈಕೋರ್ಟ್‌ ಒಪ್ಪಿಗೆ

| Published : Oct 29 2023, 01:01 AM IST

ಪೇದೆ ನೇಮಕಾತಿಯಿಂದ ಅಭ್ಯರ್ಥಿ ಹೆಸರು ಕೈಬಿಟ್ಟಿದ್ದಕ್ಕೆ ಹೈಕೋರ್ಟ್‌ ಒಪ್ಪಿಗೆ
Share this Article
  • FB
  • TW
  • Linkdin
  • Email

ಸಾರಾಂಶ

ಕ್ರಿಮಿನಲ್‌ ಪ್ರಕರಣದ ಮಾಹಿತಿಯನ್ನು ಪೊಲೀಸ್‌ ಪೇದೆ ನೇಮಕಾತಿಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಸಂಭಾವ್ಯ ಆಯ್ಕೆ ಪಟ್ಟಿಯಿಂದ ಅಭ್ಯಥಿಯೋರ್ವರ ಹೆಸರು ಕೈಬಿಟ್ಟಿದ್ದ ರಾಜ್ಯ ಪೊಲೀಸ್‌ ಇಲಾಖೆಯ ಕ್ರಮವನ್ನು ಹೈಕೋರ್ಟ್‌ ಪುರಸ್ಕರಿಸಿದೆ.ಪೊಲೀಸ್‌ ಇಲಾಖೆಯ ಕ್ರಮ ಪ್ರಶ್ನಿಸಿ ಬೀದರ್‌ ಜಿಲ್ಲೆಯ ಎಕ್ಲೂರುವಾಡಿ ಗ್ರಾಮದ ನಿವಾಸಿ ನಾರಾಯಣ ಜಾಮದಾರ್‌ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್‌ ಮತ್ತು ಕೆ.ರಾಜೇಶ್‌ ರೈ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು ಕ್ರಿಮಿನಲ್‌ ಪ್ರಕರಣದ ಮಾಹಿತಿಯನ್ನು ಪೊಲೀಸ್‌ ಪೇದೆ ನೇಮಕಾತಿಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಸಂಭಾವ್ಯ ಆಯ್ಕೆ ಪಟ್ಟಿಯಿಂದ ಅಭ್ಯಥಿಯೋರ್ವರ ಹೆಸರು ಕೈಬಿಟ್ಟಿದ್ದ ರಾಜ್ಯ ಪೊಲೀಸ್‌ ಇಲಾಖೆಯ ಕ್ರಮವನ್ನು ಹೈಕೋರ್ಟ್‌ ಪುರಸ್ಕರಿಸಿದೆ. ಪೊಲೀಸ್‌ ಇಲಾಖೆಯ ಕ್ರಮ ಪ್ರಶ್ನಿಸಿ ಬೀದರ್‌ ಜಿಲ್ಲೆಯ ಎಕ್ಲೂರುವಾಡಿ ಗ್ರಾಮದ ನಿವಾಸಿ ನಾರಾಯಣ ಜಾಮದಾರ್‌ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್‌ ಮತ್ತು ಕೆ.ರಾಜೇಶ್‌ ರೈ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ದರೋಡೆ, ಹಲ್ಲೆ, ಕೊಲೆ ಯತ್ನ ಮತ್ತು ಜೀವ ಬೆದರಿಕೆ ಆರೋಪ ಸಂಬಂಧ ಅರ್ಜಿದಾರ ಅಭ್ಯರ್ಥಿ ವಿರುದ್ಧ 2018ರಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದಿಂದ ಅರ್ಜಿದಾರರೂ ಖುಲಾಸೆಯಾಗಿದ್ದರೂ ಅರ್ಜಿ ಸಲ್ಲಿಸಿದ್ದ ದಿನದಂದು ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ಬಾಕಿಯಿತ್ತು. ಈ ಮಾಹಿತಿಯನ್ನು ಅರ್ಜಿಯಲ್ಲಿ ಬಹಿರಂಗಪಡಿಸಿರಲಿಲ್ಲ. ಅರ್ಜಿ ಸಲ್ಲಿಕೆಯಾದ ನಂತರ ಪೊಲೀಸ್‌ ಇಲಾಖೆ ನಡೆಸಿದ್ದ ಪರಿಶೀಲನೆ ವೇಳೆ ಅರ್ಜಿದಾರ ಕ್ರಿಮಿನಲ್‌ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಇದೇ ಕಾರಣಕ್ಕಾಗಿ ಅವರನ್ನು ಆಯ್ಕೆ ಪ್ರಕ್ರಿಯೆಗೆ ಪರಿಗಣಿಸಿಲ್ಲ. ಅರ್ಜಿದಾರ ಅಭ್ಯರ್ಥಿಯು ಕ್ರಿಮಿನಲ್‌ ಪ್ರಕರಣದಲ್ಲಿ ಭಾಗಿಯಾಗಿ, ಆ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದ ಸಂದರ್ಭದಲ್ಲಿ ಅಂತಹ ಅಭ್ಯರ್ಥಿಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕರು 2015ರ ಡಿ.4ರಂದು ಹೊರಡಿಸಿದ್ದ ನೋಟಿಫಿಕೇಷನ್‌ ಸ್ಪಷ್ಟವಾಗಿ ತಿಳಿಸಿದ್ದರು. ಆದ್ದರಿಂದ ಆಯ್ಕೆಪಟ್ಟಿಯಿಂದ ಅರ್ಜಿದಾರರ ಹೆಸರು ಕೈಬಿಟ್ಟಿರುವ ಪೊಲೀಸ್‌ ಇಲಾಖೆಯ ಕ್ರಮ ಸೂಕ್ತವಾಗಿದೆ ಎಂದು ತಿಳಿಸಿದ ಹೈಕೋರ್ಟ್‌, ಅರ್ಜಿ ವಜಾಗೊಳಿಸಿದೆ.