ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಟೀಕಿಸಿದ ಅವರು, ರೈತರ ಹಿತ ಕಾಪಾಡುವುದು ಎಷ್ಟು ಮುಖ್ಯವೋ, ಜನಸಾಮಾನ್ಯರ ಬದುಕಿನ ಬಗ್ಗೆಯೂ ಸರ್ಕಾರ ಅಷ್ಟೇ ಕಾಳಜಿ ವಹಿಸಬೇಕು. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಇದರ ನಡುವೆ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾಪವೂ ಕೇಳಿಬರುತ್ತಿದೆ. ಬೆಲೆ ಏರಿಕೆಯನ್ನು ಜನರು ಸುಲಭವಾಗಿ ಒಪ್ಪಿಕೊಳ್ಳುತ್ತಾರೆ ಎಂಬುದು ಮುಖ್ಯಮಂತ್ರಿಗಳ ತಪ್ಪು ಗ್ರಹಿಕೆ ಎಂದು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಹಾಸನ: ಹಾಲಿನ ದರ ಏರಿಕೆಯ ರಾಜ್ಯ ಸರ್ಕಾರದ ನಿರ್ಧಾರ ಜನಸಾಮಾನ್ಯರ ಬದುಕಿಗೆ ಹೊರೆಯಾಗಬಾರದು ಹಾಗೂ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಆಗಬೇಕೆಂದು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.

ನಗರದಲ್ಲಿ ಸೋಮವಾರ ಹಾಸನಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಟೀಕಿಸಿದ ಅವರು, ರೈತರ ಹಿತ ಕಾಪಾಡುವುದು ಎಷ್ಟು ಮುಖ್ಯವೋ, ಜನಸಾಮಾನ್ಯರ ಬದುಕಿನ ಬಗ್ಗೆಯೂ ಸರ್ಕಾರ ಅಷ್ಟೇ ಕಾಳಜಿ ವಹಿಸಬೇಕು. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಇದರ ನಡುವೆ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾಪವೂ ಕೇಳಿಬರುತ್ತಿದೆ. ಬೆಲೆ ಏರಿಕೆಯನ್ನು ಜನರು ಸುಲಭವಾಗಿ ಒಪ್ಪಿಕೊಳ್ಳುತ್ತಾರೆ ಎಂಬುದು ಮುಖ್ಯಮಂತ್ರಿಗಳ ತಪ್ಪು ಗ್ರಹಿಕೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ರಾಜ್ಯದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಪ್ರಜಾಪ್ರಭುತ್ವದ ವ್ಯವಸ್ಥೆ ಬಲಪಡಿಸಲು ಈ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು. ಎಲ್ಲರೂ ಇದಕ್ಕೆ ಸಹಕಾರ ನೀಡಬೇಕು. ಆದರೆ ಕಾಂಗ್ರೆಸ್ ಪಕ್ಷವೇ ಗೊಂದಲಕ್ಕೆ ಕಾರಣವಾಗುತ್ತಿದೆ ಎಂದು ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿರುವ ವಿಚಾರವೂ ಚರ್ಚೆಯಾಗುತ್ತಿದೆ. ರಾಜ್ಯದ ಜನರು ನೆಮ್ಮದಿಯಿಂದ ಬದುಕಲು ಈ ಪ್ರಕರಣದ ಬಗ್ಗೆ ಸೂಕ್ತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಯುವುದು ಅಗತ್ಯವಿದೆ. ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಪ್ರಕರಣದ ಕುರಿತು ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ. ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ ಎಂದು ಹೇಳಿದರು.