ತಾಳಗುಂದ ಗ್ರಾಮ ಪಂಚಾಯತಿಯು ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಗ್ರಾಮಸಭೆ
ಕನ್ನಡಪ್ರಭ ವಾರ್ತೆ, ತುಮಕೂರು
ನಮ್ಮ ಮನೆಯು ಹಳೇಯ ಮನೆಯಾಗಿದ್ದು, ಅದು ಮಣ್ಣಿನಿಂದ ನಿರ್ಮಿಸಲಾಗಿದೆ. ಯಾವಾಗ ಬೇಕಾದರೂ ಬಿದ್ದು ಹೋಗುವ ಸಾಧ್ಯತೆಯಿದೆ. ನಾವೆಲ್ಲರೂ ಅಂತಹ ಮನೆಯಲ್ಲೇ ವಾಸಿಸುತ್ತಿದ್ದೇವೆ. ಹಾಗಾಗಿ ಮಳೆಗಾಲ ಬರುವುದರೊಳಗೆ ನಮ್ಮ ಕುಟುಂಬಕ್ಕೆ ಮನೆಯನ್ನು ನಿರ್ಮಿಸಿಕೊಡಬೇಕೆಂದು ಮಾಯಸಂದ್ರ ಗ್ರಾಮದ ವಿಧ್ಯಾರ್ಥಿನಿ ಹೇಮಾ ಶಿರಾ ತಾಲೂಕಿನ ತಾಳಗುಂದ ಗ್ರಾಮ ಪಂಚಾಯತಿಯು ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಗ್ರಾಮಸಭೆಯಲ್ಲಿ ಅಧಿಕಾರಿಗಳನ್ನು ಮತ್ತು ಜನಪ್ರತಿನಿಧಿಗಳನ್ನು ಒತ್ತಾಯಿಸಿದರು.ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ತಾಳಗುಂದ ಗ್ರಾಮ ಪಂಚಾಯಿತಿ ಮತ್ತು ನವ್ಯದಿಶ ಸಂಸ್ಥೆ ಇವರ ಸಹಯೋಗದಲ್ಲಿ ತಾಳಗುಂದದ ಸಿದ್ಧಾರ್ಥ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಗ್ರಾಮಸಭೆಯಲ್ಲಿ ಮಾತನಾಡಿದರು.
ಸಭೆಯಲ್ಲಿ ಕಾಳಾಪುರ ಗ್ರಾಮದ ರ‍್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳು ನಮ್ಮ ಶಾಲೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಶಾಲೆಯ ಮುಂದಿನ ರಸ್ತೆಯ ಪಕ್ಕದಲ್ಲಿ ಹಾಕುತ್ತಿದ್ದೇವೆ. ಜೊತೆಗೆ ಗ್ರಾಮದಲ್ಲಿನ ಜನರು ಅಂಗಡಿಯ ಮತ್ತು ಮನೆಯ ಕಸವನ್ನು ತಂದು ರಸ್ತೆ ಪಕ್ಕದಲ್ಲಿ ಹಾಕುತ್ತಿದ್ದಾರೆ. ಈ ಸಮಸ್ಯೆ ಬಹಳ ದಿನಗಳಿಂದ ಇದ್ದು, ಇದರಿಂದ ಗ್ರಾಮದ ಜನರಿಗೆ ರೋಗಗಳು ಬರುವ ಸಾಧ್ಯತೆಗಳಿವೆ. ಹಾಗಾಗಿ ಆದಷ್ಟು ಬೇಗ ಶಾಲೆಯ ಮತ್ತು ಗ್ರಾಮದ ಕಸವನ್ನು ಪ್ರತಿದಿನ ಸಂಗ್ರಹಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿಸಬೇಕೆಂದು ಅಧಿಕಾರಿಗಳಲ್ಲಿ ಮತ್ತು ಜನಪ್ರತಿನಿಧಿಗಳಲ್ಲಿ ಮನವಿಯನ್ನು ಮಾಡಿಕೊಂಡರು.ಸಭೆಯಲ್ಲಿ ಮಕ್ಕಳು ತಮ್ಮ ಶಾಲೆಗಳಿಗೆ ಆಟದ ಸಾಮಗ್ರಿಗಳನ್ನು ನೀಡುವಂತೆ, ದೂರದ ಊರಿನಿಂದ ಬರಲು ಸೈಕಲ್ ನೀಡುವಂತೆ, ಹಳ್ಳಿಗಳಲ್ಲಿನ ಕಸವನ್ನು ಸ್ವಚ್ಚಗೊಳಿಸುವಂತೆ, ಶಾಲೆಗಳಿಗೆ ಶಿಕ್ಷಕರನ್ನು ಒದಗಿಸುವಂತೆ, ರಸ್ತೆಗಳನ್ನು ಸರಿಪಡಿಸುವಂತೆ, ಶಾಲೆಗೆ ನೀರನ್ನು ಪೂರೈಸುವಂತೆ, ಶಾಲಾ ಕೊಠಡಿಗಳನ್ನು ದುರಸ್ಥಿಗೊಳಿಸುವಂತೆ, ಆಟದ ಮೈದಾನವನ್ನು ಒದಗಿಸುವಂತೆ, ಶಾಲೆಗೆ ಪೀಠೋಪಕರಣಗಳನ್ನು ನೀಡುವಂತೆ, ಶಾಲಾ ಆವರಣವನ್ನು ಸ್ವಚ್ಚಗೊಳಿಸುವಂತೆ ಹಾಗೂ ಅಂಗನವಾಡಿಗಳಿಗೆ ಮೂಲಭೂತ ಸೌರ‍್ಯಗಳನ್ನು ಒದಗಿಸಿಕೊಡುವಂತೆ ಮನವಿ ಮಾಡಿಕೊಂಡರು. ಸಭೆಯಲ್ಲಿ ಒಟ್ಟು 9 ಶಾಲೆಗಳಿಂದ 213 ಮಕ್ಕಳು, 9 ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿ, ಒಟ್ಟು 34 ಸಮಸ್ಯೆಗಳನ್ನು ಹೇಳಿಕೊಂಡರು. ಸಭೆಯಲ್ಲಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮಸ್ಯೆಗಳನ್ನು ಬಹುಬೇಗ ಬಗೆಹರಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ ತಿಪ್ಪೇಸ್ವಾಮಿ ರವರು ಮಾತನಾಡಿ, ದೇಶದಲ್ಲಿ ಮಕ್ಕಳ ಸಂಖ್ಯೆ ಒಟ್ಟು ಜನಸಂಖ್ಯೆಯಲ್ಲಿ ಶೇ.40 ರಷ್ಟಿದ್ದಾರೆ. ರಾಜ್ಯದಲ್ಲಿ ಪ್ರಸ್ತುತವಾಗಿ 26,416 ಬಾಲ ರ‍್ಭಿಣಿಯರಿದ್ದಾರೆ. ಅನೇಕ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳು ಸೂಕ್ತ ಸಮಯದಲ್ಲಿ ಸಿಗುತ್ತಿಲ್ಲವಾಗಿದೆ. ಆದ್ದರಿಂದ ಇಂತಹ ಸಮಸ್ಯೆಗಳನ್ನು ರ‍್ಚಿಸಲು ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಮೊಟ್ಟಮೊದಲು 2006 ರಲ್ಲಿ ಮಕ್ಕಳ ಗ್ರಾಮಸಭೆಯನ್ನು ಮಾಡುವುದಾಗಿ ಸುತ್ತೋಲೆಯನ್ನು ಹೊರಡಿಸಿತ್ತು. ಹಾಗಾಗಿ ಇಲಾಖೆಯು ಪ್ರತಿವರ್ಷವೂ ನವೆಂಬರ್ 14 ರಿಂದ ಜನವರಿ 24ರೊಳಗೆ ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ಕಡ್ಡಾಯವಾಗಿ ಆಯೋಜಿಸುವ ಸಲುವಾಗಿ ಸುತ್ತೋಲೆಯನ್ನು ಹೊರಡಿಸುತ್ತಿದೆ. ಇದರಿಂದ ಮಕ್ಕಳೂ ಸಹ ಸ್ಥಳೀಯ ಸರ್ಕಾರ, ಸ್ಥಳೀಯ ಸಂಸ್ಥೆಗಳೊಂದಿಗೆ ಭಾಗವಹಿಸಲು ಅವಕಾಶ ಒದಗಿತು. ಆದ್ದರಿಂದ ಮಕ್ಕಳೂ ಸಹ ತಮ್ಮ ಹಳ್ಳಿಯ ಮತ್ತು ಶಾಲೆಯ ಸಮಸ್ಯೆಗಳನ್ನು ಚರ್ಚಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾಗವಹಿಸಿ, ಆಡಳಿತ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ಅಭಿಪ್ರಾಯಪಟ್ಟರು.ಈ ಸಭೆಯಲ್ಲಿ ಗ್ರಾಪಂ ಅಧ್ಯಕ್ಷೆ ಸರೋಜಮ್ಮ ವಹಿಸಿದ್ದರು. ಶಿವಕುಮಾರ್, ನವ್ಯದಿಶಾ ಸಂಸ್ಥೆಯ ಜನಾರ್ಧನ, ರೂಪ, ಕವಿತಾ ಮಂಜುನಾಥ್ ಅಮಲಗೊಂದಿ, ಗ್ರಾಪಂ ಸದಸ್ಯರಾದ ಲಕ್ಷ್ಮೀದೇವಮಮ್ಮ, ಸರೋಜಮ್ಮ ರಂಗನಾಥ್, ತಾಪಂ ಇಒ ಹರೀಶ್, ಕಾಂತರಾಜು, ಹರಿಪ್ರಸಾದ್ ಭೈರೇಗೌಡ, ನಾಗಭೂಷಣ್, ರಂಗಪ್ಪ, ಪ್ರದೀಪ್ ಕುಮಾರ್ , ಗೋಪಾಲ್, ಡಾ.ಜಯಶ್ರೀ, ಅಶೋಕ್ ಇತರರಿದ್ದರು.